ಬೆಂಗಳೂರು: ಬಹು ನಿರೀಕ್ಷಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಭಾರತ ಮತ್ತು ಆಸ್ಟ್ರೇಲಿಯಾ (India Vs Australia (Border-Gavaskar Trophy test series) ತಂಡಗಳು ಸಜ್ಜಾಗುತ್ತಿವೆ.ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಪ್ರಥಮ ಟೆಸ್ಟ್ ಪಂದ್ಯ ಫೆಬ್ರವರಿ 9ರಂದು ನಾಗ್ಪುರದ ಜಮ್ತಾದಲ್ಲಿರುವ ವಿದರ್ಭ ಕ್ರಿಕೆಟ್ ಸಂಸ್ಥೆ ಮೈದಾನದಲ್ಲಿ ಆರಂಭವಾಗಲಿದೆ.
ಸರಣಿಗೆ ಪೂರ್ವಭಾವಿಯಾಗಿ ಭಾರತ ತಂಡದ ಅಭ್ಯಾಸ ಶಿಬಿರ ಇಂದಿನಿಂದ (ಗುರುವಾರ) ನಾಗ್ಪುರದ ಜಮ್ತಾದಲ್ಲಿರುವ ವಿದರ್ಭ ಕ್ರಿಕೆಟ್ ಸಂಸ್ಥೆ ಮೈದಾನದಲ್ಲಿ ಆರಂಭವಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಡಲಿರುವ ಎಲ್ಲಾ ಆಟಗಾರರು ಟೀಮ್ ಇಂಡಿಯಾ ಟ್ರೈನಿಂಗ್ ಕ್ಯಾಂಪ್’ಗೆ ಹಾಜರಾಗಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದ ನಾಯಕ ರೋಹಿತ್ ಶರ್ಮಾ, ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ಉಪನಾಯಕ ಕೆ.ಎಲ್ ರಾಹುಲ್ ಅಭ್ಯಾಸ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ.
ಇದೇ ವೇಳೆ ಆಸ್ಟ್ರೇಲಿಯಾ ತಂಡ ಬೆಂಗಳೂರಿನಲ್ಲಿ ಟ್ರೈನಿಂಗ್ ಕ್ಯಾಂಪ್ ನಡೆಸ್ತಾ ಇದೆ. ಬುಧವಾರ ಬೆಂಗಳೂರಿಗೆ ಆಗಮಿಸಿರುವ ಕಾಂಗರೂ ಪಡೆ, ಬೆಂಗಳೂರಿನ ಹೊರವಲಯದ ಆಲೂರಿನಲ್ಲಿರುವ KSCA ಮೈದಾನದಲ್ಲಿ ಅಭ್ಯಾಸ ನಡೆಸುತ್ತಿದೆ. ಭಾರತ ವಿರುದ್ಧ ಸ್ಪಿನ್ ಸವಾಲು ಎದುರಾಗಲಿರುವ ಕಾರಣ ಸ್ಪಿನ್ ಬೌಲಿಂಗನ್ನು ಎದುರಿಸುವ ನಿಟ್ಟಿನಲ್ಲಿ ಕಾಂಗರೂಗಳು ವಿಶೇಷ ಅಭ್ಯಾಸ ನಡೆಸುತ್ತಿದ್ದಾರೆ. ಭಾರತಕ್ಕೆ ಆಗಮಿಸುವ ಮೊದಲು ಆಸೀಸ್ ಆಟಗಾರರು ಸಿಡ್ನಿಯಲ್ಲಿ ವಿಶೇಷ ಸ್ಪಿನ್ ಪಿಚ್ ನಿರ್ಮಿಸಿ 15 ದಿನಗಳ ಕಾಲ ಅಭ್ಯಾಸ ನಡೆಸಿದ್ದರು.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಕ್ರಿಕೆಟ್ ಜಗತ್ತಿನ ಅತ್ಯಂತ ಜಿದ್ದಾಜಿದ್ದಿನ ಸರಣಿ. ಕಳೆದ ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೆಸ್ಟ್ ಸರಣಿ ಗೆದ್ದು ಇತಿಹಾಸ ನಿರ್ಮಿಸಿದ್ದ ಭಾರತ, ಈ ಬಾರಿ ತವರಿನಲ್ಲಿ ನಡೆಯಲಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯನ್ನು ಗೆಲ್ಲುವ ವಿಶ್ವಾಸದಲ್ಲಿದೆ. ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್’ಷಿಪ್’ನಲ್ಲಿ ಭಾರತ ಫೈನಲ್ ತಲುಪಬೇಕಾದರೆ ಆಸೀಸ್ ವಿರುದ್ಧದ ಟೆಸ್ಟ್ ಸರಣಿಯನ್ನು ಭಾರತ ಕನಿಷ್ಠ 2-0 ಅಂತರದಲ್ಲಿ ಗೆಲ್ಲಬೇಕಿದೆ. ಆಸ್ಟ್ರೇಲಿಯಾ ಈಗಾಗಲೇ ವಿಶ್ವ ಟೆಸ್ಟ್ ಚಾಂಪಿಯನ್’ಷಿಪ್’ನಲ್ಲಿ (ICC world test championship) ಫೈನಲ್ ತಲುಪಿದೆ.
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ವೇಳಾಪಟ್ಟಿ (India Vs Australia (Border-Gavaskar Trophy test series):
ಪ್ರಥಮ ಟೆಸ್ಟ್: ಫೆಬ್ರವರಿ 9-13 (ವಿಸಿಎ ಕ್ರೀಡಾಂಗಣ, ಜಮ್ತಾ; ನಾಗ್ಪುರ)
2ನೇ ಟೆಸ್ಟ್: ಫೆಬ್ರವರಿ 17-21 (ಫಿರೋಜ್ ಶಾ ಕ್ರೀಡಾಂಗಣ, ದೆಹಲಿ)
3ನೇ ಟೆಸ್ಟ್: ಮಾರ್ಚ್ 1-5 (HPCA ಕ್ರೀಡಾಂಗಣ, ಧರ್ಮಶಾಲಾ)
4ನೇ ಟೆಸ್ಟ್: ಮಾರ್ಚ್ 9-13 (ನರೇಂದ್ರ ಮೋದಿ ಕ್ರೀಡಾಂಗಣ, ಅಹ್ಮದಾಬಾದ್)
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳಿಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್ (ಉಪನಾಯಕ), ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆ.ಎಸ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜ, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಇಶಾನ್ ಕಿಶನ್, ಅಕ್ಷರ್ ಪಟೇಲ್, ಶುಭಮನ್ ಗಿಲ್, ಉಮೇಶ್ ಯಾದವ್, ಜೈದೇವ್ ಉನಾದ್ಕಟ್, ಶ್ರೇಯಸ್ ಅಯ್ಯರ್ (2ನೇ ಟೆಸ್ಟ್ ಪಂದ್ಯಕ್ಕೆ ಲಭ್ಯ).
ಇದನ್ನೂ ಓದಿ : Exclusive: ಭಾರತ Vs ಆಸ್ಟ್ರೇಲಿಯಾ ಟೆಸ್ಟ್ ಪಂದ್ಯ ವೀಕ್ಷಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ
ಇದನ್ನೂ ಓದಿ : Ajinkya Rahane county cricket : ಟೆಸ್ಟ್ ಕಂಬ್ಯಾಕ್ಗೆ ಕಸರತ್ತು, ಇಂಗ್ಲೆಂಡ್ನಲ್ಲಿ ಕೌಂಟಿ ಕ್ರಿಕೆಟ್ ಆಡಲಿದ್ದಾರೆ ಅಜಿಂಕ್ಯ ರಹಾನೆ
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಆಡಲಿರುವ ಆಸ್ಟ್ರೇಲಿಯಾ ತಂಡ:
ಪ್ಯಾಟ್ ಕಮಿನ್ಸ್ (ನಾಯಕ), ಸ್ಟೀವನ್ ಸ್ಮಿತ್ (ಉಪನಾಯಕ), ಡೇವಿಡ್ ವಾರ್ನರ್, ಮ್ಯಾಟ್ ರೆನ್’ಶಾ, ಮಾರ್ನಸ್ ಲಬುಶೇನ್, ಅಲೆಕ್ಸ್ ಕ್ಯಾರಿ, ಸ್ಕಾಟ್ ಬೊಲಾಂಡ್, ಕ್ಯಾಮರೂನ್ ಗ್ರೀನ್, ಪೀಟರ್ ಹ್ಯಾಂಡ್ಸ್’ಕಾಂಬ್, ಜೋಶ್ ಹೇಜಲ್’ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜ, ನೇಥನ್ ಲಯಾನ್, ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್.
Border-Gavaskar Trophy Test Series: Kangaroos Training Camp in Bangalore, Team India Practice Camp in Nagpur