ಐಪಿಎಲ್ ನಿಂದ ಹೊರ ನಡೆದ ಸುರೇಶ್ ರೈನಾ : ಅಷ್ಟಕ್ಕೂ ಸ್ಟಾರ್ ಆಟಗಾರನಿಗೆ ಆಗಿದ್ದೇನು ಗೊತ್ತಾ ?

0

ದುಬೈ : ಪ್ರತಿಷ್ಠಿತ ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿಯ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದೆ. ಕೊರೊನಾ ವೈರಸ್ ಸೋಂಕಿನ ಆತಂಕದ ನಡುವಲ್ಲೇ ಆಟಗಾರರು ಅಭ್ಯಾಸ ನಡೆಸುತ್ತಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಕೊರೊನಾ ಶಾಕ್ ಬೆನ್ನಲ್ಲೇ ಸ್ಟಾರ್ ಆಟಗಾರ ಸುರೇಶ್ ರೈನಾ ಈ ಬಾರಿಯ ಟೂರ್ನಿಯಿಂದಲೇ ಹೊರ ನಡೆದಿದ್ದಾರೆ.

ಈ ಬಾರಿಯ ಐಪಿಎಲ್ ದುಬೈನಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕ್ರಿಕೆಟ್ ಆಟಗಾರರು ದುಬೈಗೆ ತೆರಳಿದ್ದರು. ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೇರಿಕೊಳ್ಳುವ ಮುನ್ನ ಟೀಂ ಇಂಡಿಯಾ ಮಾಜಿ ನಾಯಕ ಧೋನಿ ಕ್ರಿಕೆಟ್ ಗೆ ಗುಡ್ ಬೈ ಹೇಳುತ್ತಿದ್ದಂತೆಯೇ ಗೆಳೆಯ ಸುರೇಶ್ ರೈನಾ ಕೂಡ ನಿವೃತ್ತಿ ಘೋಷಿಸಿದ್ದರು.

ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ನಿಟ್ಟಿನಲ್ಲಿ ಸುರೇಶ್ ರೈನಾ ಕಠಿಣ ಅಭ್ಯಾಸವನ್ನು ನಡೆಸುತ್ತಿದ್ದ. ಆದ್ರೀಗ ಸುರೇಶ್ ರೈನಾ ವೈಯಕ್ತಿಕ ಕಾರಣವನ್ನು ನೀಡಿ ಟೂರ್ನಿಯಿಂದಲೇ ಹೊರ ನಡೆದಿದ್ದಾರೆ.

ನಿನ್ನೆಯಷ್ಟೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಒಟ್ಟು 12 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಇದೀಗ ಸುರೇಶ್ ರೈನಾಗೂ ಕೂಡ ಕೊರೊನಾ ಸೋಂಕು ತಗುಲಿದೆಯಾ ಅನ್ನೋ ಅನುಮಾನ ವ್ಯಕ್ತವಾಗುತ್ತಿದೆ.

ಟೂರ್ನಿಯಲ್ಲಿ ಗೆಲ್ಲುವ ಫೇವರೇಟ್ ತಂಡವಾಗಿರುವ ಚೆನ್ನೈ ಸೂಪರ್ ಕಿಂಗ್ಸ್ ಗೆ ಒಂದೆಡೆ ಕೊರೊನಾ ಸೋಂಕು ಇನ್ನೊಂದೆಡೆ ಸುರೇಶ್ ರೈನಾ ಪಂದ್ಯಾವಳಿ ಪಾಲ್ಗೊಳ್ಳದಿರೋದು ಆಘಾತವನ್ನು ತಂದಿದೆ.

ಸುರೇಶ್ ರೈನಾ ಐಪಿಎಲ್ ನಲ್ಲಿ ಪಾಲ್ಗೊಳ್ಳದಿರುವ ಕುರಿತು ಸಿಎಸ್ ಕೆ ಅಧಿಕೃತವಾಗಿ ಟ್ವಿಟ್ ಮಾಡಿದೆ.

Leave A Reply

Your email address will not be published.