BCCI : ಟೀಂ ಇಂಡಿಯಾ ಕೋಚ್‌, ಎನ್‌ಸಿಎ ಮುಖ್ಯಸ್ಥರ ಹುದ್ದೆಗೆ ಅರ್ಜಿ ಆಹ್ವಾನಿಸಿದ ಬಿಸಿಸಿಐ

ಮುಂಬೈ : ಟೀಂ ಇಂಡಿಯಾದ ಮುಖ್ಯ ಕೋಚ್‌ ( Head Coach) , ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿಯ (NCA) ಮುಖ್ಯಸ್ಥರ ಹುದ್ದೆ ಸೇರಿದಂತೆ ಹಲವು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಟಿ20 ವಿಶ್ವಕಪ್‌ ಬೆನ್ನಲ್ಲೇ ರವಿಶಾಸ್ತ್ರಿ ಅವರ ಒಪ್ಪಂದ ಮುಕ್ತಾಯವಾಗುವ ಹಿನ್ನೆಲೆಯಲ್ಲಿ ಹೊಸ ಕೋಚ್‌ ಹುದ್ದೆ ನೇಮಕಾತಿಗೆ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ( BCCI ) ಮುಂದಾಗಿದೆ.

ಭಾರತ ಕ್ರಿಕೆಟ್‌ ತಂಡ ಮುಖ್ಯ ಕೋಚ್‌, ಬ್ಯಾಟಿಂಗ್‌ ಕೋಚ್‌, ಬೌಲಿಂಗ್‌ ಕೋಚ್‌, ಫೀಲ್ಡಿಂಗ್‌ ಕೋಚ್‌ ಹಾಗೂ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿಯ ಮುಖ್ಯಸ್ಥರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನವೆಂಬರ್‌ 3 ರ ಒಳಗಾಗಿ ಅರ್ಜಿಯನ್ನು ಸಲ್ಲಿಸಲು ಸೂಚನೆಯನ್ನು ನೀಡಲಾಗಿದೆ. ಈ ಕುರಿತು ಬಿಸಿಸಿಐ ವೆಬ್‌ಸೈಟ್‌ನಲ್ಲಿ ಅಧಿಕೃತವಾಗಿ ನೇಮಕಾತಿ ಆದೇಶವನ್ನು ಬಿಸಿಸಿಐ ಕಾರ್ಯದರ್ಶಿ ಜೈಶಾ ಪ್ರಕಟಿಸಿದ್ದಾರೆ.

ಟೀಂ ಇಂಡಿಯಾದ ಮುಖ್ಯ ಕೋಚ್‌ ಹುದ್ದೆಗೆ ಕನ್ನಡಿಗ, ಟೀಂ ಇಂಡಿಯಾದ ಮಾಜಿ ನಾಯಕ ರಾಹುಲ್‌ ದ್ರಾವಿಡ್‌ ಅವರು ನೇಮಕವಾಗುವುದು ಖಚಿತವಾಗಿದೆ. ಈಗಾಗಲೇ ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಹಾಗೂ ಕಾರ್ಯದರ್ಶಿ ಜೈಶಾ ಅವರು ರಾಹುಲ್‌ ದ್ರಾವಿಡ್‌ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗುತ್ತಿದೆ.

ಉಳಿದಂತೆ ಬೌಲಿಂಗ್‌, ಬ್ಯಾಟಿಂಗ್‌ ಹಾಗೂ ಫೀಲ್ಡಿಂಗ್‌ ಕೋಚ್‌ ಹುದ್ದೆಗೆ ಹೊಸಬರು ಆಯ್ಕೆಯಾಗುವ ಸಾಧ್ಯತೆಯಿದೆ. ಇನ್ನೊಂದೆಡೆಯಲ್ಲಿ ಚುಟುಕು ಕ್ರಿಕೆಟ್‌ಗೆ ಹೊಸ ನಾಯಕನ ಆಯ್ಕೆಯೂ ಶೀಘ್ರದಲ್ಲಿಯೇ ನಡೆಯುವ ಸಾಧ್ಯತೆಯಿದೆ.

ಇದನ್ನೂ ಓದಿ : KL Rahul vs Rishabh Pant : ಯಾರಾಗ್ತಾರೆ ಗೊತ್ತಾ ಟೀಂ ಇಂಡಿಯಾ ನಾಯಕ ?

ಇದನ್ನೂ ಓದಿ : ಟೀಂ ಇಂಡಿಯಾ ಮುಖ್ಯ ಕೋಚ್‌ ಆಗಿ ರಾಹುಲ್‌ ದ್ರಾವಿಡ್‌ ನೇಮಕ 

( BCCI has invited applications for the post of Team India Coach and NCA Chiefs )

Comments are closed.