ಮುಂಬೈ: ಮುಂಬರುವ ಟಿ20 ವಿಶ್ವಕಪ್ ಗೆ ಬಿಸಿಸಿಐ ಭಾರತ ತಂಡದ ಆಯ್ಕೆಯನ್ನು ಮಾಡಿದೆ. ವಿರಾಟ್ ಕೊಯ್ಲಿ ನಾಯಕನಾಗಿ ಮುಂದುವರಿದಿದ್ರೆ, ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರನ್ನು ತಂಡದ ಮಾರ್ಗದರ್ಶಕನನ್ನಾಗಿ ನೇಮಕ ಮಾಡಿದೆ.
ಹಿಟ್‌ಮ್ಯಾನ್ ರೋಹಿತ್ ಶರ್ಮಾ ಉಪನಾಯಕನಾಗಿ ಮುಂದುವರಿದಿದ್ರೆ, ಕನ್ನಡಿಗ ಕೆ.ಎಲ್.ರಾಹುಲ್ ಟೀಂ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅಲ್ಲದೇ ರಿಷಬ್ ಪಂತ್ ಹಾಗೂ ಇಶಾನ್ ಕಿಶನ್ ಅವರನ್ನು ವಿಕೆಟ್ ಕೀಪರ್ ಆಗಿದ್ರೆ, ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್ ಹಾಗೂ ದೀಪಕ್ ಚಹರ್ ಅವರನ್ನು ಸ್ಟ್ಯಾಂಡ್‌ಬೈ ಆಟಗಾರರನ್ನಾಗಿ ಆಯ್ಕೆ ಮಾಡಲಾಗಿದೆ.
ಟಿ20 ವಿಶ್ವಕಪ್‌ಗೆ ಭಾರತ ತಂಡ : ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿ.ಕೀ), ಇಶಾನ್ ಕಿಶನ್ (ವಿ.ಕೀ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ.
ಇದನ್ನೂ ಓದಿ : ಭಾರತದ ನಂ.1, ವಿಶ್ವದ ನಂ.2 ಬೌಲರ್ ಆರ್. ಅಶ್ವಿನ್‌ಗೆ ಇಲ್ಲ ಸ್ಥಾನ
ಇದನ್ನೂ ಓದಿ : ICC TEST RANKINGನಲ್ಲಿ ವಿರಾಟ್‌ಗೆ ನಿರಾಸೆ : ಕೊಹ್ಲಿಯನ್ನು ಹಿಂದಿಕ್ಕಿದ ರೋಹಿತ್ ಶರ್ಮಾ
( Virat Kohli is the captain of the Indian team and MS Dhoni is the mentor )