IPL 2021 SRH vs DC: ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ದ ಸನ್ ರೈಸರ್ಸ್ ಹೈದರಾಬಾದ್ ಗೆ ಸೋಲು

ದುಬೈ : ಇಂಡಿಯಲ್‌ ಪ್ರೀಮಿಯರ್‌ ಲೀಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಹಾಗೂ ಸನ್‌ರೈಸಸ್‌ ಹೈದ್ರಾಬಾದ್‌ ನಡುವಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 8‌ ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ದಕ್ಷಿಣ ಆಫ್ರಿಕಾದ ಅನ್ರಿಚ್ ನಾರ್ಟ್ಜೆ ಮತ್ತು ಕಗಿಸೊ ರಬಾಡ ಅವರ ಅದ್ಭುತ ವೇಗದ ಬೌಲಿಂಗ್ ನೆರವಿನಿಂದ ಗೆಲುವನ್ನು ದಾಖಲಿಸುವ ಮೂಲಕ ಫ್ಲೇ ಆಫ್‌ಗೆ ಎಂಟ್ರಿ ಕೊಟ್ಟಿದೆ.

ಕಳೆದ ಆವೃತ್ತಿಯಲ್ಲಿ ರನ್ನರ್ಸ್-ಅಪ್ ಪ್ರಶಸ್ತಿ ಪಡೆದಿದ್ದ ಡೆಲ್ಲಿ ಕ್ಯಾಪಿಟಲ್ಸ್‌ ಈ ಬಾರಿಯೂ ಉತ್ತಮ ಪ್ರದರ್ಶನ ನೀಡುತ್ತಿದೆ. ಒಟ್ಟಿ ಒಂಬತ್ತು ಪಂದ್ಯಗಳಿಂದ 14 ಅಂಕಗಳೊಂದಿಗೆ ಪ್ಲೇ-ಆಫ್ ಪ್ರವೇಶಿಸಿದೆ.

ಮೊದಲು ಬ್ಯಾಟಿಂಗ್‌ ನಡೆಸಿದ್ದ ಸನ್‌ರೈಸಸ್‌ ಹೈದ್ರಾಬಾದ್‌ ತಂಡ 135ರನ್‌ ಗಳ ಸುಲಭ ಗುರಿಯನ್ನು ನೀಡಿತ್ತು. ಡೆಲ್ಲಿ ತಂಡದ ಪರ ಶಿಖರ್‌ ಧವನ್‌, ಶ್ರೇಯಸ್‌ ಅಯ್ಯರ್‌ ಹಾಗೂ ರಿಷಬ್‌ ಪಂತ್‌ ಅವರ ಅದ್ಬುತ ಆಟದ ನೆರವಿನಿಂದ ತಂಡ ಎಂಟು ವಿಕೆಟ್‌ಗಳ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿದೆ.

ರಿಷಬ್‌ ಪಂತ್‌ ನಾಯಕತ್ವದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಸತತ ಗೆಲುವು ದಾಖಲಿಸುತ್ತಿದೆ. ಇನ್ನೊಂದೆಡೆಯಲ್ಲಿ ಶ್ರೇಯಸ್‌ ಅಯ್ಯರ್‌ ತಂಡವನ್ನು ಕೂಡಿಕೊಂಡಿರುವುದು ಆನೆ ಬಲ ಬಂದಂತಾಗಿದೆ. ಜೊತೆಗೆ ಅನುಭವಿ ಆಟಗಾರ ಶಿಖರ್‌ ಧವನ್‌ ಅದ್ಬುತ ಆಟದ ನೆರವಿನಿಂದ ಆರೆಂಜ್‌ ಕ್ಯಾಪ್‌ ತಮ್ಮಲ್ಲೇ ಉಳಿಸಿಕೊಂಡಿದ್ದಾರೆ. ಬೌಲಿಂಗ್‌ ಹಾಗೂ ಬ್ಯಾಟಿಂಗ್‌ ಪರಾಕ್ರಮದಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್‌ ಈ ಬಾರಿ ಐಪಿಎಲ್‌ ಟ್ರೋಫಿ ಗೆಲ್ಲುವ ಫೆವರೇಟ್‌ ತಂಡ ಎನಿಸಿಕೊಂಡಿದೆ. ಆದರೆ ಸನ್‌ರೈಸಸ್‌ ಹೈದ್ರಾಬಾದ್‌ ತಂಡ ಈ ಬಾರಿ ನಿರಾಸೆ ಅನುಭವಿಸಿದೆ. ಆಡಿದ ಎಂಟು ಪಂದ್ಯಗಳ ಪೈಕಿ ಕೇವಲ ಒಂದು ಪಂದ್ಯ ಗೆದ್ದು ಏಳು ಪಂದ್ಯಗಳಲ್ಲಿ ಸೋಲನ್ನು ಕಂಡಿದೆ.

ಇದನ್ನೂ ಓದಿ : ಐಪಿಎಲ್‌ ಆರಂಭದಲ್ಲೇ ಕೊರೊನಾ ಶಾಕ್‌ ! ಹೈದ್ರಾಬಾದ್‌ ತಂಡದ ಟಿ.ನಟರಾಜನ್‌ ಗೆ ಕೊರೊನಾ ಸೋಂಕು

ಇದನ್ನೂ ಓದಿ : ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 20,000 ರನ್ : ಹೊಸ ದಾಖಲೆ ಬರೆದ ಮಿಥಾಲಿ ರಾಜ್

( SRH vs DC: Sunrisers Hyderabad lose by 8 wickets, out of the competition )

Comments are closed.