ಲಂಡನ್ : ಇಂಗ್ಲೆಂಡ್ ವಿರುದ್ದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತ ಉತ್ತಮ ಪ್ರದರ್ಶನ ನೀಡುತ್ತಿದೆ. ಅದ್ರಲ್ಲೂ ಟೀಂ ಇಂಡಿಯಾದ ಆರಂಭಿಕ ಆಟಗಾರ, ಹಿಟ್ ಮ್ಯಾನ್ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಮೂಲಕ ವಿದೇಶಿ ನೆಲದಲ್ಲಿ ಏಳು ವರ್ಷಗಳ ಬಳಿಕ ಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ.

ಓವನ್‌ನಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ 256 ಎಸೆತಗಳನ್ನು ಎದುರಿಸಿದ್ದು, 14 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 127 ರನ್ ಗಳಿಸಿದ್ದಾರೆ. ಏಕದಿನ ಸರಣಿಯಲ್ಲಿ ಐತಿಹಾಸಿಕ ಸಾಧನೆಯನ್ನು ಮಾಡಿದ್ದ ರೋಹಿತ್ ಶರ್ಮಾ ವಿದೇಶಿ ನೆಲದಲ್ಲಿ ಟೆಸ್ಟ್ ಶತಕಗಳಿಸಲು ಸಾಧ್ಯವಾಗಿರಲಿಲ್ಲ. ಆದರೆ ಸುಮಾರು ಏಳು ವರ್ಷಗಳ ಬಳಿಕ ರೋಹಿತ್ ಶರ್ಮಾ ವಿದೇಶಿ ನೆಲದಲ್ಲಿ ಶತಕ ಬಾರಿಸಿದ ಸಾಧನೆಯನ್ನು ಮಾಡಿದ್ದಾರೆ.
ಟೆಸ್ಟ್, ಏಕದಿನ ಸೇರಿದಂತೆ ಮೂರು ಸ್ವರೂಪದ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ಇಂಗ್ಲೆಂಡ್‌ನಲ್ಲಿ ಒಟ್ಟು ಒಂಬತ್ತನೇ ಶತಕ ಬಾರಿಸುವ ಮೂಲಕ ರಾಹುಲ್ ದ್ರಾವಿಡ್ ಹಾಗೂ ವಿವಿಯನ್ ರಿಚರ್ಡ್ಸ್ ಅವರ ಒಂಬತ್ತು ಶತಕದ ದಾಖಲೆಯನ್ನು ಸರಿಗಟ್ಟಿದ್ದಾರೆ.
ಇದನ್ನೂ ಓದಿ : ಭಾರತದ ನಂ.1, ವಿಶ್ವದ ನಂ.2 ಬೌಲರ್ ಆರ್. ಅಶ್ವಿನ್‌ಗೆ ಇಲ್ಲ ಸ್ಥಾನ
ಇದನ್ನೂ ಓದಿ : ಪ್ಯಾರಾಲಿಂಪಿಕ್ಸ್ ಬೆಳ್ಳಿ ಗೆದ್ದ ಪ್ರವೀಣ್ ಕುಮಾರ್ : ಗಣ್ಯರಿಂದ ಅಭಿನಂದನೆಗಳ ಮಹಾಪೂರ
(India vs England: Rohit Sharma hits century as India take control of Oval Test )