T20 World Cup: ಭಾರತ – ಪಾಕಿಸ್ತಾನ ನಡುವಿನ ಪಂದ್ಯ ರದ್ದು : ಸಷ್ಟನೆ ಕೊಟ್ಟ ಬಿಸಿಸಿಐ

ಮುಂಬೈ : ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು ನಾಗರಿಕರನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡಿದ್ದಾರೆ. ಇದರ ಬೆನ್ನಲ್ಲೇ ದೇಶದಲ್ಲಿ ಐಸಿಸಿ ಟಿ 20 ವಿಶ್ವಕಪ್‌ನಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ರದ್ದು ಮಾಡುವಂತೆ ಒತ್ತಾಯ ಕೇಳಿ ಬರುತ್ತಿದೆ. ಈ ಕುರಿತು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಸ್ಪಷ್ಟನೆಯನ್ನು ಕೊಟ್ಟಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರು ಗುರಿಯಾಗಿಸಿಕೊಂಡು ನಾಗರಿಕರನ್ನು ಹತ್ಯೆ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಇತ್ತೀಚೆಗೆ ಹೇಳಿದ್ದು, ಟಿ 20 ವಿಶ್ವಕಪ್ 2021 ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಪ್ರಸ್ತುತ ಪರಿಸ್ಥಿತಿಯಲ್ಲಿ ಆಡಬಾರದು ಎಂದಿದ್ದಾರೆ. ಆದರೆ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಅವರು ಐಸಿಸಿ ಟಿ 20 ವಿಶ್ವಕಪ್‌ನಲ್ಲಿ ಭಾರತ vs ಪಾಕಿಸ್ತಾನ ಪಂದ್ಯವನ್ನು ರದ್ದುಗೊಳಿಸುವ ಬೇಡಿಕೆಗಳ ಕುರಿತು ಪ್ರತಿಕ್ರಿಯಿಸಿದ್ದಾರೆ, ಕಣಿವೆಯಲ್ಲಿಕಾಶ್ಮೀರಿಗಳಲ್ಲದ ನಾಗರಿಕರ ಮೇಲಿನ ದಾಳಿಯನ್ನು ಖಂಡಿಸುತ್ತೇನೆ ಆದರೆ ಮಂಡಳಿಯು ‘ಅಂತಾರಾಷ್ಟ್ರೀಯ ವೇಳಾಪಟ್ಟಿಯಿಂದ ಹೊರಬರಲು ಸಾಧ್ಯವಿಲ್ಲ ಎಂದಿದ್ದಾರೆ.

ಐಸಿಸಿ ಪುರುಷರ ಟಿ 20 ವಿಶ್ವಕಪ್ 2021 ರಲ್ಲಿ ಮುಂಬರುವ ಭಾರತ vs ಪಾಕಿಸ್ತಾನ ಪಂದ್ಯವನ್ನು ರದ್ದುಗೊಳಿಸುವ ಬೇಡಿಕೆಗಳಿವೆ, ಕೇಂದ್ರ ಸಚಿವ ಗಿರಿರಾಜ್ ಸಿಂಗ್ ರಂತಹವರು ಎರಡು ದೇಶಗಳ ನಡುವಿನ ಉದ್ವಿಗ್ನ ಸಂಬಂಧದಿಂದಾಗಿ ಮುರಪರಿಶೀಲನೆ ಮಾಡುವಂತೆ ಕೇಳಿದ್ದಾರೆ. ಅಕ್ಟೋಬರ್ 24 ರಂದು ದುಬೈನಲ್ಲಿ ನಡೆಯಲಿರುವ ಸೂಪರ್ 12 ಹಂತದ ಮೊದಲ ಪಂದ್ಯದಲ್ಲಿ ಭಾರತ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಆಯೋಜಿಸಿದ ಟೂರ್ನಿಗಳಲ್ಲಿ, ದೇಶಗಳು ಒಮ್ಮೆ ಮಾಡಿದ ವೇಳಾಪಟ್ಟಿಯಿಂದ ಹಿಂದೆ ಸರಿಯಲು ಸಾಧ್ಯವಿಲ್ಲ ಎಂದು ಶುಕ್ಲಾ ಹೇಳಿದರು.

ಭಯೋತ್ಪಾದಕ ಸಂಘಟನೆಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು. ನಾಗರೀಕರ ಮೇಲಾಗಿರುವ ಹತ್ಯೆಯನ್ನು ನಾವು ಖಂಡಿಸುತ್ತೇವೆ. ಪಂದ್ಯಕ್ಕೆ ಸಂಬಂಧಿಸಿದಂತೆ (T20 WC IND vs PAK), ಐಸಿಸಿಯ ಅಂತಾರಾಷ್ಟ್ರೀಯ ವೇಳಾಪಟ್ಟಿಯ ಅಡಿಯಲ್ಲಿ ಯಾವ ದೇಶದ ವಿರುದ್ದದ ಪಂದ್ಯವನ್ನು ಬಹಿಷ್ಕರಿಸಲು ಸಾಧ್ಯವಿಲ್ಲ. ಭಾರತ ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಬೇಕಾಗಿರುವ ಹಿನ್ನೆಲೆಯಲ್ಲಿ ರದ್ದು ಮಾಡುವುದು ಅಸಾಧ್ಯವಿದೆಂದು ರಾಜೀವ್‌ ಶುಕ್ಲ ಸ್ಪಷ್ಟನೆಯನ್ನು ಕೊಟ್ಟಿದ್ದಾರೆ.

ಇದನ್ನೂ ಓದಿ : ಟೀಂ ಇಂಡಿಯಾ ಕೋಚ್‌, ಎನ್‌ಸಿಎ ಮುಖ್ಯಸ್ಥರ ಹುದ್ದೆಗೆ ಅರ್ಜಿ ಆಹ್ವಾನಿಸಿದ ಬಿಸಿಸಿಐ

ಇದನ್ನೂ ಓದಿ : ರಾಹುಲ್‌, ಕಿಶಾನ್‌ ಪರಾಕ್ರಮ : ವಿಶ್ವಕಪ್‌ ನಲ್ಲಿ ಟೀಂ ಇಂಡಿಯಾ ಶುಭಾರಂಭ

( T20 World Cup: Ind vs Pak match cancelled, here is BCCI Clarification )

Comments are closed.