ಕೇರಳದ ಅನಂತಪದ್ಮನಾಭದ ದರ್ಶನ ಪಡೆದ ಟೀಮ್ ಇಂಡಿಯಾ ಆಟಗಾರರು

ತಿರುವನಂತಪುರ : ಪ್ರವಾಸಿ ಶ್ರೀಲಂಕಾ ವಿರುದ್ಧದ 3ನೇ ಏಕದಿನ ಪಂದ್ಯಕ್ಕಾಗಿ ಕೇರಳದ ತಿರುವನಂತಪುರಂರಲ್ಲಿ ಬೀಡು ಬಿಟ್ಟಿರುವ ಟೀಮ್ ಇಂಡಿಯಾ ಆಟಗಾರರ, ಪುರಾಣ ಪ್ರಸಿದ್ಧ ಅನಂತಪದ್ಮನಾಭ ದೇವಸ್ಥಾನಕ್ಕೆ (Anantapadmanabha Temple) ಭೇಟಿ ನೀಡಿ ಅನಂತಪದ್ಮನಾಭನ ದರ್ಶನ ಪಡೆದಿದ್ದಾರೆ. ಟೀಮ್ ಇಂಡಿಯಾ ಆಟಗಾರರು ಅನಂತಪದ್ಮನಾಭ ದೇವಸ್ಥಾನಕ್ಕೆ ಭೇಟಿ ನೀಡಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯ ಕೊನೆಯ ಪಂದ್ಯ ನಾಳೆ (ಭಾನುವಾರ) ತಿರುವನಂತಪುರಂ ಗ್ರೀನ್ ಫೀಲ್ಡ್ ಸ್ಟೇಡಿಯಂನಲ್ಲಿ ನಡೆಯಲಿದೆ. ಗುವಾಹಟಿಯಲ್ಲಿ ನಡೆದ ಮೊದಲ ಪಂದ್ಯವನ್ನು 67 ರನ್’ಗಳಿಂದ ಗೆದ್ದಿದ್ದ ಟೀಮ್ ಇಂಡಿಯಾ, ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ 4 ವಿಕೆಟ್’ಗಳ ಗೆಲುವು ಸಾಧಿಸಿತ್ತು. ಇದೀಗ ರೋಹಿತ್ ಶರ್ಮಾ ಬಳಗ ಭಾನುವಾರ ತಿರುವನಂತಪುರಂನಲ್ಲಿ ನಡೆಯಲಿರುವ ಮೂರನೇ ಪಂದ್ಯವನ್ನು ಗೆದ್ದು 3-0 ಅಂತರದಲ್ಲಿ ಸರಣಿ ಕ್ಲೀನ್ ಸ್ವೀಪ್ ಮಾಡುವ ವಿಶ್ವಾಸದಲ್ಲಿದೆ.

ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಗುರುವಾರ ನಡೆದ ಶ್ರೀಲಂಕಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಅಜೇಯ 64 ರನ್ ಗಳಿಸಿ ಭಾರತದ ಗೆಲುವಿಗೆ ಕಾರಣರಾಗಿದ್ದರು. 216 ರನ್’ಗಳ ಟಾರ್ಗೆಟ್ ಬೆನ್ನಟ್ಟಿದ್ದ ಭಾರತ ಒಂದು ಹಂತದಲ್ಲಿ 86 ರನ್ನಿಗೆ 4 ವಿಕೆಟ್ ಕಳೆದುಕೊಂಡು ಸೋಲಿನ ಸುಳಿಗೆ ಸಿಲುಕಿತ್ತು. ನಾಯಕ ರೋಹಿತ್ ಶರ್ಮಾ, ಶುಭಮನ್ ಗಿಲ್, ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಪೆವಿಲಿಯನ್ ಸೇರಿಕೊಂಡಿದ್ದರು.

ಇದನ್ನೂ ಓದಿ : Rishabh Pant health update : ರಿಷಭ್ ಪಂತ್ ಆಪರೇಷನ್ ಸಕ್ಸಸ್, ಕ್ರಿಕೆಟ್ ಮೈದಾನಕ್ಕೆ ಮರಳುವ ಬಗ್ಗೆ ಡಾಕ್ಟರ್ ಹೇಳಿದ್ದೇನು?

ಇದನ್ನೂ ಓದಿ : KL Rahul marriage : “ಬ್ಯಾಚುಲರ್” ರಾಹುಲ್‌ಗೆ ಮದುವೆಗೂ ಮುನ್ನ ನಾಳೆ ಕೊನೆಯ ಕ್ರಿಕೆಟ್ ಮ್ಯಾಚ್

ಇದನ್ನೂ ಓದಿ : Team India : ಕಿವೀಸ್, ಆಸೀಸ್ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ಪ್ರಕಟ, ಯಾರಿಗೆಲ್ಲಾ ಸ್ಥಾನ?

ಭಾರತ 62 ರನ್ನಿಗೆ 3 ವಿಕೆಟ್ ಕಳೆದುಕೊಂಡಿದ್ದಾಗ 5ನೇ ಕ್ರಮಾಂಕದಲ್ಲಿ ಕ್ರೀಸ್’ಗಿಳಿದಿದ್ದ ರಾಹುಲ್ ಕೊನೆಯವರೆಗೂ ಅಜೇಯವಾಗಿ ನಿಂತು 103 ಎಸೆತಗಳಲ್ಲಿ 6 ಬೌಂಡರಿಗಳ ನೆರವಿನಿಂದ ಅಜೇಯ 64 ರನ್ ಗಳಿಸಿ ಭಾರತವನ್ನು ಗೆಲುವಿನ ದಡ ಸೇರಿಸಿದ್ದರು. ರಾಹುಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ ಭಾರತ 43.2 ಓವರ್’ಗಳಲ್ಲಿ 6 ವಿಕೆಟ್ ನಷ್ಟಕ್ಕೆ 219 ರನ್ ಗಳಿಸಿ 4 ವಿಕೆಟ್’ಗಳ ಗೆಲುವಿನೊಂದಿಗೆ 3 ಪಂದ್ಯಗಳ ಏಕದಿನ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿ ಸರಣಿ ಕೈವಶ ಮಾಡಿಕೊಂಡಿತ್ತು.

Anantapadmanabha Temple : Team India players visited Anantapadmanabha in Kerala

Comments are closed.