ಭಾನುವಾರ, ಏಪ್ರಿಲ್ 27, 2025
HomeSportsCricketExclusive: ಬೆಂಗಳೂರಿನಲ್ಲಿ ಅಶ್ವಿನ್-ಜಡೇಜಾ ಬೌಲಿಂಗ್, ಆಸ್ಟ್ರೇಲಿಯಾ ವಿರುದ್ಧ ಭಲೇ ಜೋಡಿಯ ಮ್ಯಾಜಿಕ್ ಪಕ್ಕಾ

Exclusive: ಬೆಂಗಳೂರಿನಲ್ಲಿ ಅಶ್ವಿನ್-ಜಡೇಜಾ ಬೌಲಿಂಗ್, ಆಸ್ಟ್ರೇಲಿಯಾ ವಿರುದ್ಧ ಭಲೇ ಜೋಡಿಯ ಮ್ಯಾಜಿಕ್ ಪಕ್ಕಾ

- Advertisement -

ಬೆಂಗಳೂರು: Ashwin Jadeja : ಇಡೀ ಕ್ರಿಕೆಟ್ ಜಗತ್ತು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ (Border-Gavaskar trophy 2023) ಟ್ರೋಫಿ ಟೆಸ್ಟ್ ಸರಣಿ ಯನ್ನು ಎದುರು ನೋಡುತ್ತಿದೆ. ಭಾರತ ಮತ್ತು ಪ್ರವಾಸಿ ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಟೆಸ್ಟ್ ಸರಣಿ ಫೆಬ್ರವರಿ 9ರಂದು ಆರಂಭವಾಗಲಿದೆ. ವಿಶ್ವ ಟೆಸ್ಟ್ ಚಾಂಪಿಯನ್’ಷಿಪ್’ನಲ್ಲಿ (ICC World test championship 2021-23) ಫೈನಲ್ ತಲುಪಬೇಕಾದರೆ ಭಾರತ ತಂಡ ಈ ಟೆಸ್ಟ್ ಸರಣಿಯನ್ನು ಕನಿಷ್ಠ 2-0 ಅಂತರದಲ್ಲಿ ಗೆಲ್ಲಲೇಬೇಕಿದೆ.

ಕಾಂಗರೂಗಳ ವಿರುದ್ಧದ ಟೆಸ್ಟ್ ಸರಣಿಗೆ ಭಾರತದ ಸ್ಪಿನ್ ಮಾಂತ್ರಿಕರಾದ ರವಿಚಂದ್ರನ್ ಅಶ್ವಿನ್ (Ravichandran Ashwin) ಮತ್ತು ರವೀಂದ್ರ ಜಡೇಜ (Ravindra Jadeja) ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (National Cricket Academy Bangalore) ಅಭ್ಯಾಸ ಆರಂಭಿಸಿದ್ದಾರೆ. ಅದರಲ್ಲೂ ಕಳೆದ ನಾಲ್ಕು ತಿಂಗಳುಗಳಿಂದ ಕ್ರಿಕೆಟ್’ನಿಂದ ದೂರವಿದ್ದ ಆಲ್ರೌಂಡರ್ ರವೀಂದ್ರ ಜಡೇಜ ಮತ್ತೆ ಮೈದಾನಕ್ಕೆ ಮರಳಿದ್ದು ಬೌಲಿಂಗ್ ಅಭ್ಯಾಸ ಶುರು ಮಾಡಿದ್ದಾರೆ. ಕಳೆದ ವರ್ಷದ ಆಗಸ್ಟ್-ಸೆಪ್ಟೆಂಬರ್ ತಿಂಗಳಲ್ಲಿ ದುಬೈನಲ್ಲಿ ನಡೆದ ಏಷ್ಯಾ ಕಪ್ ಟಿ20 ಟೂರ್ನಿಯ ವೇಳೆ ಜಡೇಜಾ ಪಾದದ ಗಾಯಕ್ಕೊಳಗಾಗಿದ್ದರು. ಹೀಗಾಗಿ ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್ ಟೂರ್ನಿಗೂ ಜಡೇಜ ಅಲಭ್ಯರಾಗಿದ್ದರು.

ಪಾದದ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಜಡೇಜ ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುವ ಹಾದಿಯಲ್ಲಿದ್ದಾರೆ. ಆಸೀಸ್ ವಿರುದ್ಧದ ಟೆಸ್ಟ್ ಸರಣಿಗೆ ಪೂರ್ವಭಾವಿಯಾಗಿ ಅಭ್ಯಾಸ ನಡೆಸಲು ಬೆಂಗಳೂರಿನಲ್ಲಿ ಬೀಡು ಬಿಟ್ಟಿರುವ ಅಶ್ವಿನ್ ಮತ್ತು ಜಡೇಜ ಕಳೆದೊಂದು ವಾರದಿಂದ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಬೌಲಿಂಗ್ ಅಭ್ಯಾಸ ನಡೆಸುತ್ತಿದ್ದಾರೆ.

ಭಾರತ Vs ಆಸ್ಟ್ರೇಲಿಯಾ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ವೇಳಾಪಟ್ಟಿ

ಪ್ರಥಮ ಟೆಸ್ಟ್: ಫೆಬ್ರವರಿ 9-13 (ವಿದರ್ಭ ಕ್ರಿಕೆಟ್ ಸಂಸ್ಥೆ ಮೈದಾನ, ನಾಗ್ಪುರ)
ಎರಡನೇ ಟೆಸ್ಟ್: ಫೆಬ್ರವರಿ 17-21 (ಫಿರೋಜ್ ಶಾ ಕೋಟ್ಲಾ ಮೈದಾನ, ದೆಹಲಿ)
ಮೂರನೇ ಟೆಸ್ಟ್: ಮಾರ್ಚ್ 1-5 (ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ ಮೈದಾನ, ಧರ್ಮಶಾಲಾ)
ನಾಲ್ಕನೇ ಟೆಸ್ಟ್: ಮಾರ್ಚ್ 9-13 (ನರೇಂದ್ರ ಮೋದಿ ಕ್ರೀಡಾಂಗಣ, ಅಹ್ಮದಾಬಾದ್)

ಆಸ್ಟ್ರೇಲಿಯಾ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ಟೀಮ್ ಇಂಡಿಯಾ(india’s Test squad for the first two Tests against Australia):

ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್.ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ರವೀಂದ್ರ ಜಡೇಜ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜೈದೇವ್ ಉನಾದ್ಕಟ್, ಸೂರ್ಯಕುಮಾರ್ ಯಾದವ್.

ಇದನ್ನೂ ಓದಿ : Yuvraj Singh – Shubman Gill : ದ್ವಿಶತಕ ವೀರ ಶುಭಮನ್ ಗಿಲ್‌ಗೆ ಯುವರಾಜನೇ ದ್ರೋಣಾಚಾರ್ಯ

ಇದನ್ನೂ ಓದಿ : Mayank Agarwal Double century: ರಣಜಿ ಟ್ರೋಫಿಯಲ್ಲಿ ಕೇರಳ ವಿರುದ್ಧ ಭರ್ಜರಿ ದ್ವಿಶತಕ ಬಾರಿಸಿದ ಮಯಾಂಕ್ ಅಗರ್ವಾಲ್

ಇಂಗ್ಲಿಷ್‌ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

Ashwin Jadeja bowling in Bengaluru the magic of the pair against Australia Border Gavaskar trophy 2023 ICC World test championship 2021-23

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular