VVS Laxman Head Coach: ಏಷ್ಯಾ ಕಪ್ 2022: ದ್ರಾವಿಡ್‌ಗೆ ಕೋವಿಡ್; ಭಾರತ ತಂಡಕ್ಕೆ ವಿವಿಎಸ್ ಲಕ್ಷ್ಮಣ್ ಕೋಚ್

ಬೆಂಗಳೂರು: (VVS Laxman Head Coach) ಭಾರತ ಕ್ರಿಕೆಟ್ ತಂಡದ ಪ್ರಧಾನ ಕೋಚ್ ರಾಹುಲ್ ದ್ರಾವಿಡ್ ಕೋವಿಡ್-19ಗೆ ಗುರಿಯಾಗಿರುವ ಕಾರಣ, ಏಷ್ಯಾ ಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಕೋಚ್ ಆಗಿ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಕಾರ್ಯ ನಿರ್ವಹಿಸಲಿದ್ದಾರೆ.

ಏಷ್ಯಾ ಕಪ್ ಟೂರ್ನಿಯಲ್ಲಿ (Asia Cup 2022) ವಿವಿಎಸ್ ಲಕ್ಷ್ಮಣ್ ಭಾರತ ತಂಡದ ಹೆಡ್ ಕೋಚ್ ಜವಾಬ್ದಾರಿ ನಿಭಾಯಿಸಲಿದ್ದಾರೆ ಎಂದು ಬಿಸಿಸಿಐ ತನ್ನ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ರಾಹುಲ್ ದ್ರಾವಿಡ್ ಅವರು ಕೋವಿಡ್’ನಿಂದ ಚೇತರಿಸಿಕೊಂಡು ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ರಿಸಲ್ಟ್ ಬಂದ ನಂತರವರಷ್ಟೇ ಏಷ್ಯಾ ಕಪ್ ಟೂರ್ನಿಯಲ್ಲಿ ಆಡುತ್ತಿರುವ ಭಾರತ ತಂಡವನ್ನು ಸೇರಿಕೊಳ್ಳಲಿದ್ದಾರೆ. ಅಲ್ಲಿಯವರೆಗೆ ವಿವಿಎಸ್ ಲಕ್ಷ್ಮಣ್ ಟೀಮ್ ಇಂಡಿಯಾ ಕೋಚ್ ಆಗಿರಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥರೂ ಆಗಿರುವ ವಿವಿಎಸ್ ಲಕ್ಷ್ಮಣ್ ಜಿಂಬಾಬ್ವೆ ಪ್ರವಾಸದಲ್ಲಿ ಭಾರತ ತಂಡದ ಕೋಚ್ ಆಗಿದ್ದರು. ಲಕ್ಷ್ಮಣ್ ಗರಡಿಯಲ್ಲಿ, ಕನ್ನಡಿಗ ಕೆ.ಎಲ್ ರಾಹುಲ್ ನಾಯಕತ್ವದಲ್ಲಿ ಭಾರತ ತಂಡ ಜಿಂಬಾಬ್ವೆ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿತ್ತು. ಜಿಂಬಾಬ್ವೆ ಸರಣಿಯ ನಂತರ ಏಷ್ಯಾ ಕಪ್ ಜವಾಬ್ದಾರಿ ಹೆಗಲೇರಿರುವ ಕಾರಣ ವಿವಿಎಸ್ ಲಕ್ಷ್ಮಣ್ ಈಗಾಗಲೇ ಹರಾರೆಯಿಂದ ದುಬೈ ತಲುಪಿದ್ದು, ಟೀಮ್ ಇಂಡಿಯಾವನ್ನು ಸೇರಿಕೊಂಡಿದ್ದಾರೆ.

ಏಷ್ಯಾ ಕಪ್ ಟಿ20 ಟೂರ್ನಿ ಶನಿವಾರ ಆರಂಭವಾಗಲಿದ್ದು, ಭಾನುವಾರ ನಡೆಯಲಿರುವ ತನ್ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಭಾರತ ತಂಡ, ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸುವ ಮೂಲಕ ಟೂರ್ನಿಯಲ್ಲಿ ತನ್ನ ಅಭಿಯಾನ ಆರಂಭಿಸಲಿದೆ.

ಏಷ್ಯಾಕಪ್ ಟಿ20 (Asia Cup 2022) ಟೂರ್ನಿಯ ವೇಳಾಪಟ್ಟಿ
Group A
ಭಾರತ Vs ಪಾಕಿಸ್ತಾನ: 28 ಆಗಸ್ಟ್, ದುಬೈ
ಭಾರತ Vs ಕ್ವಾಲಿಫೈಯರ್ ಟೀಮ್: 31 ಆಗಸ್ಟ್, ದುಬೈ
ಪಾಕಿಸ್ತಾನ Vs ಕ್ವಾಲಿಫೈಯರ್ ಟೀಮ್: 02 ಸೆಪ್ಟೆಂಬರ್, ಶಾರ್ಜಾ

Group B
ಶ್ರೀಲಂಕಾ Vs ಅಫ್ಘಾನಿಸ್ತಾನ: 27 ಆಗಸ್ಟ್, ದುಬೈ
ಬಾಂಗ್ಲಾದೇಶ Vs ಅಫ್ಘಾನಿಸ್ತಾನ: 30 ಆಗಸ್ಟ್, ಶಾರ್ಜಾ
ಶ್ರೀಲಂಕಾ Vs ಬಾಂಗ್ಲಾದೇಶ: 01 ಸೆಪ್ಟೆಂಬರ್, ದುಬೈ

ಇದನ್ನೂ ಓದಿ : India A Squad: ಹುಬ್ಬಳ್ಳಿಯಲ್ಲಿ ಭಾರತ ‘ಎ‘ Vs ನ್ಯೂಜಿಲೆಂಡ್ ‘ಎ‘ ಟೆಸ್ಟ್ ಮ್ಯಾಚ್; ಕನ್ನಡಿಗ ಪ್ರಸಿದ್ಧ್ ಕೃಷ್ಣಗೆ ಸ್ಥಾನ

ಇದನ್ನೂ ಓದಿ : KL Rahul Athiya Shetty Love Story : ಕೆ.ಎಲ್.ರಾಹುಲ್‌ – ಆತಿಯಾ ಶೆಟ್ಟಿ ಲವ್ ಸ್ಟೋರಿ; ಹೊಸ ಮನೆಗೆ ಗೃಹಪ್ರವೇಶ ಮಾಡಿದ ಪ್ರೇಮಪಕ್ಷಿಗಳು

Asia Cup 2022: VVS Laxman Team India Head Coach

Comments are closed.