KL Rahul as captain : ದಕ್ಷಿಣ ಆಫ್ರಿಕಾ ಸರಣಿಗೆ ಕೆ.ಎಲ್.‌ ರಾಹುಲ್‌ ನಾಯಕ, ರಾಹುಲ್‌ ನಾಯಕತ್ವದಲ್ಲಿ ಆಡಲಿದ್ದಾರೆ ಕೊಯ್ಲಿ

ಮುಂಬೈ : ದಕ್ಷಿಣ ಆಫ್ರಿಕಾ ವಿರುದ್ದ ಏಕದಿನ ಸರಣಿಗೆ ಬಿಸಿಸಿಐ ಕೊನೆಗೂ ತಂಡವನ್ನು ಪ್ರಕಟಿಸಿದೆ. ಹೊಸದಾಗಿ ಭಾರತ ಏಕದಿನ ತಂಡದ ನಾಯಕರಾಗಿದ್ದ ರೋಹಿತ್‌ ಶರ್ಮಾ ಮಂಡಿರಜ್ಜು ಗಾಯದಿಂದ ಚೇತರಿಸಿಕೊಂಡಿಲ್ಲ, ಹೀಗಾಗಿ ಟೀಂ ಇಂಡಿಯಾದ ಏಕದಿನ ತಂಡದ ನಾಯಕತ್ವವನ್ನು ಕನ್ನಡಿಗ ಕೆ.ಎಲ್.ರಾಹುಲ್‌ (KL Rahul as captain) ಅವರಿಗೆ ನೀಡಲಾಗಿದೆ. ಹೀಗಾಗಿ ವಿರಾಟ್‌ ಕೊಯ್ಲಿ ರಾಹುಲ್‌ ನಾಯಕತ್ವದಲ್ಲಿ ಆಡಲಿದ್ದಾರೆ.

ಕೆಎಲ್ ರಾಹುಲ್ ಮೊದಲ ಬಾರಿಗೆ ಭಾರತವನ್ನು ಮುನ್ನಡೆಸಲು ಸಜ್ಜಾಗಿದ್ದಾರೆ. ರಾಹುಲ್‌ ನಾಯಕತ್ವದಲ್ಲಿ ವಿರಾಟ್‌ ಕೊಯ್ಲಿ ಭಾರತ ತಂಡದ ಪರ ಆಡಲಿದ್ದಾರೆ. ಈ ನಡುವಲ್ಲೇ ವೇಗಿ ಜಸ್ಪ್ರೀತ್ ಬುಮ್ರಾ ಅವರನ್ನು ತಂಡದ ಉಪನಾಯಕರನ್ನಾಗಿ ನೇಮಿಸಲಾಗಿದೆ. ಅಲ್ಲದೇ ಹಲವು ವರ್ಷಗಳ ಬಳಿಕ ಆಫ್ ಸ್ಪಿನ್ನರ್ ರವಿ ಅಶ್ವಿನ್ ಅವರು ಏಕದಿನ ತಂಡಕ್ಕೆ ಮರಳಿದ್ದಾರೆ.

ಆರ್.ಅಶ್ವಿನ್‌ ಕೊನೆಯ ಬಾರಿಗೆ ಜೂನ್ 2017 ರಲ್ಲಿ ವೆಸ್ಟ್ ಇಂಡೀಸ್‌ನಲ್ಲಿ ಭಾರತಕ್ಕಾಗಿ ಆಡಿದರು. ಆದರೆ ಮಣಿಕಟ್ಟಿನ ಸ್ಪಿನ್ನರ್‌ಗಳಾದ ಯುಜ್ವೇಂದ್ರ ಚಾಹಲ್ ಮತ್ತು ಕುಲದೀಪ್ ಯಾದವ್ ಅದ್ಬುತ ಬೌಲಿಂಗ್‌ ನಿಂದಾಗಿ ಅಶ್ವಿನ್‌ ಅವರನ್ನು ತಂಡದಿಂದ ಹೊರಗಿಡಲಾಗಿತ್ತು. ವಿಜಯ್ ಹಜಾರೆ ಟ್ರೋಫಿಯಲ್ಲಿ ಐದು ಪಂದ್ಯಗಳಲ್ಲಿ ನಾಲ್ಕು ಶತಕಗಳನ್ನು ಸಿಡಿಸಿರುವ ರುತುರಾಜ್ ಗಾಯಕ್ವಾಡ್ ಹಾಗೂ ವೆಂಕಟೇಶ್ ಅಯ್ಯರ್ ಅವರು ಏಕದಿನ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ತವರಿನಲ್ಲಿ ನಡೆದ ನ್ಯೂಜಿಲೆಂಡ್‌ ವಿರುದ್ದದ T20I ಸರಣಿಯಲ್ಲಿ ಉತ್ತಮ ಆಟದ ಪ್ರದರ್ಶನ ನೀಡಿದ್ದ ವೆಂಕಟೇಶ್‌ ಅಯ್ಯರ್‌ ಅವರು ನಂತರದಲ್ಲಿ ಮಧ್ಯಪ್ರದೇಶ ಪರ ವಿಜಯ್ ಹಜಾರೆ ಟ್ರೋಫಿಯಲ್ಲೂ ಅತ್ಯಂತ ಅದ್ಬುತ ಬ್ಯಾಟಿಂಗ್‌ ಪ್ರದರ್ಶಿಸಿದ್ದಾರೆ. ಆರು ಪಂದ್ಯಗಳಲ್ಲಿ 63.16 ಸರಾಸರಿ ಮತ್ತು 133.92 ಸ್ಟ್ರೈಕ್ ರೇಟ್‌ನಲ್ಲಿ 379 ರನ್ ಗಳಿಸಿದರು. ಅಯ್ಯರ್ ಎರಡು ಶತಕ ಮತ್ತು ಒಂದು ಅರ್ಧಶತಕ ಗಳಿಸಿದರು. ಅಲ್ಲದೇ ಅತ್ಯಧಿಕ 151 ರನ್‌ ಭಾರಿಸುವ ಮೂಲಕ ಆಯ್ಕೆಗಾರರ ಗಮನ ಸೆಳೆದಿದ್ದಾರೆ.

ದಕ್ಷಿಣ ಆಫ್ರಿಕಾ ಏಕದಿನ ಪಂದ್ಯಗಳಿಗೆ ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ಶಿಖರ್ ಧವನ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ರಿಷಬ್ ಪಂತ್ (wk), ಇಶಾನ್ ಕಿಶನ್ (wk), ಯಜುವೇಂದ್ರ ಚಾಹಲ್, ಆರ್ ಅಶ್ವಿನ್, ವಾಷಿಂಗ್ಟನ್ ಸುಂದರ್, ಜಸ್ಪ್ರಿತ್‌ ಬೂಮ್ರಾ (ಉಪನಾಯಕ ), ಭುವನೇಶ್ವರ್ ಕುಮಾರ್, ದೀಪಕ್ ಚಹಾರ್, ಪ್ರಸಿದ್ಧ್ ಕೃಷ್ಣ, ಶಾರ್ದೂಲ್ ಠಾಕೂರ್, ಮೊಹಮ್ಮದ್. ಸಿರಾಜ್.

ಇದನ್ನೂ ಓದಿ : Glenn Maxwell RCB Captain : ಗ್ಲೆನ್‌ ಮ್ಯಾಕ್ಸ್‌ವೆಲ್‌ ಆರ್‌ಸಿಬಿ ನಾಯಕ ಎಂದ ಮಾಜಿ ಕೋಚ್ ಡೇನಿಯಲ್‌ ವೆಟ್ಟೋರಿ ‌

ಇದನ್ನೂ ಓದಿ : Ross Taylor retirement : ಐಪಿಎಲ್ 2022 ರ ಮೆಗಾ ಹರಾಜಿನ ಮೊದಲೇ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ RCB ಆಟಗಾರ

(BCCI announced KL Rahul as captain for South Africa, Kohli will play under Rahul)

Comments are closed.