ಲಂಡನ್: ಜಗತ್ತಿನ ಅತ್ಯಂತ ಶ್ರೀಮಂತ ಕ್ರಿಕೆಟ್ ಮಂಡಳಿ ಖ್ಯಾತಿಯ ಬಿಸಿಸಿಐ (BCCI) ತನ್ನ ಆಟಗಾರರನ್ನು ಲಂಡನ್’ನಿಂದ ವೆಸ್ಟ್ ಇಂಡೀಸ್’ಗೆ ಕಳುಹಿಸಲು ವಿಮಾನ ವೆಚ್ಚಕ್ಕಾಗಿಯೇ (Team India’s flight to West Indies) ಬರೋಬ್ಬರಿ ₹3.5 ಕೋಟಿ ಖರ್ಚು ಮಾಡಿದೆ. ಇಂಗ್ಲೆಂಡ್’ನಲ್ಲಿ ಟಿ20 ಹಾಗೂ ಏಕದಿನ ಸರಣಿ ಗೆದ್ದಿದ್ದ ಟೀಮ್ ಇಂಡಿಯಾ, ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧದ ಸೀಮಿತ ಓವರ್’ಗಳ ಸರಣಿಗಾಗಿ ಬುಧವಾರ ಟ್ರಿನಿಡಾಡ್ ತಲುಪಿದೆ. ಮೊದಲು ಏಕದಿನ ಸರಣಿ ನಡೆಯಲಿದ್ದು, ಮೊದಲ ಪಂದ್ಯ ಶುಕ್ರವಾರ ಟ್ರಿನಿಡಾಡ್’ನಲ್ಲಿ ನಡೆಯಲಿದೆ.
ಲಂಡನ್’ನಿಂದ ಟ್ರಿನಿಡಾಡ್’ಗೆ ಪ್ರಯಾಣಿಸಲು ಟೀಮ್ ಇಂಡಿಯಾ ಆಟಗಾರರಿಗೆ ಬಿಸಿಸಿಐ ವಿಶೇಷ ಚಾರ್ಟರ್ಡ್ ಫ್ಲೈಟ್ ವ್ಯವಸ್ಥೆ ಮಾಡಿತ್ತು. ತಂಡದ ಆಟಗಾರರು, ಸಹಾಯಕ ಸಿಬ್ಬಂದಿ ಸೇರಿ ಟೀಮ್ ಇಂಡಿಯಾದ ಫ್ಲೈಟ್ ಚಾರ್ಜ್ ಮೂರೂವರೆ ಕೋಟಿ ರೂಪಾಯಿ ಎಂದು ತಿಳಿದು ಬಂದಿದೆ. ಟೀಮ್ ಇಂಡಿಯಾ, ವೆಸ್ಟ್ ಇಂಡೀಸ್’ನಲ್ಲಿ 3 ಪಂದ್ಯಗಳ ಏಕದಿನ ಸರಣಿ ಹಾಗೂ 5 ಪಂದ್ಯಗಳ ಟಿ20 ಸರಣಿಯನ್ನಾಡಲಿದೆ. ಏಕದಿನ ಸರಣಿ ಶುಕ್ರವಾರ ಆರಂಭವಾಗಲಿದ್ದು, ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಹಿರಿಯ ಎಡಗೈ ಓಪನರ್ ಶಿಖರ್ ಧವನ್ ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಜುಲೈ 29ರಂದು ನಡೆಯಲಿದ್ದು, ರೋಹಿತ್ ಶರ್ಮಾ ಭಾರತ ತಂಡದ ನಾಯಕತ್ವ ವಹಿಸಲಿದ್ದಾರೆ. ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ವೇಗಿ ಜಸ್ಪ್ರೀತ್ ಬುಮ್ರಾಗೆ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಗೆ ವಿಶ್ರಾಂತಿ ನೀಡಲಾಗಿದೆ.
Trinidad – WE ARE HERE! 👋😃#TeamIndia | #WIvIND pic.twitter.com/f855iUr9Lq
— BCCI (@BCCI) July 20, 2022
ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ:
ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರವೀಂದ್ರ ಜಡೇಜ (ಉಪನಾಯಕ), ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಹಲ್, ಅಕ್ಷರ್ ಪಟೇಲ್, ಆವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.
ಭಾರತ Vs ವೆಸ್ಟ್ ಇಂಡೀಸ್: ಏಕದಿನ ಸರಣಿಯ ವೇಳಾಪಟ್ಟಿ
ಜುಲೈ 22: ಮೊದಲ ಏಕದಿನ ಪಂದ್ಯ (ಟ್ರಿನಿಡಾಡ್)
ಜುಲೈ 24: ಎರಡನೇ ಏಕದಿನ ಪಂದ್ಯ (ಟ್ರಿನಿಡಾಡ್)
ಜುಲೈ 27: ಮೂರನೇ ಏಕದಿನ ಪಂದ್ಯ (ಟ್ರಿನಿಡಾಡ್)
Gearing up for ODI No.1 against the West Indies 💪
— BCCI (@BCCI) July 21, 2022
Here’s @ShubmanGill giving a lowdown on #TeamIndia‘s 🇮🇳 first net session in Trinidad 🇹🇹#WIvIND pic.twitter.com/oxF0dHJfOI
ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ಅಕ್ಷರ್ ಪಟೇಲ್, ಆರ್.ಅಶ್ವಿನ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಆವೇಶ್ ಖಾನ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.
ಭಾರತ Vs ವೆಸ್ಟ್ ಇಂಡೀಸ್: ಟಿ20 ಸರಣಿಯ ವೇಳಾಪಟ್ಟಿ
ಜುಲೈ 29: ಮೊದಲ ಟಿ20 ಪಂದ್ಯ (ಟ್ರಿನಿಡಾಡ್)
ಆಗಸ್ಟ್ 01: ಎರಡನೇ ಟಿ20 ಪಂದ್ಯ (ಸೇಂಟ್ ಕಿಟ್ಸ್)
ಆಗಸ್ಟ್ 02: ಮೂರನೇ ಟಿ20 ಪಂದ್ಯ (ಸೇಂಟ್ ಕಿಟ್ಸ್)
ಆಗಸ್ಟ್ 06: ನಾಲ್ಕನೇ ಟಿ20 ಪಂದ್ಯ (ಫ್ಲೋರಿಡಾ)
ಆಗಸ್ಟ್ 07: ಐದನೇ ಟಿ20 ಪಂದ್ಯ (ಫ್ಲೋರಿಡಾ)
ಇದನ್ನೂ ಓದಿ : KL Rahul tested Covid-19 positive : ಇದೆಂಥಾ ಬ್ಯಾಡ್ ಲಕ್..? ಕೆ.ಎಲ್ ರಾಹುಲ್’ಗೆ ಕೋವಿಡ್ ಪಾಸಿಟಿವ್, ಗಾಯದ ಮೇಲೆ ಮತ್ತೊಂದು ಬರೆ
BCCI spends ₹3.5 crore for Team India’s flight to West Indies