BCCI vs PCB: “ನೀವು ಪಾಕಿಸ್ತಾನಕ್ಕೆ ಬರದಿದ್ದರೆ, ನಾವು ವಿಶ್ವಕಪ್ ಆಡಲು ಭಾರತಕ್ಕೆ ಬರಲ್ಲ” ಬಿಸಿಸಿಐಗೆ ಪಾಕ್ ಕ್ರಿಕೆಟ್ ಬೋರ್ಡ್ ಧಮ್ಕಿ

ಮುಂಬೈ: BCCI vs PCB: ಏಷ್ಯಾ ಕಪ್ ಆಯೋಜನೆಯ ವಿಚಾರದಲ್ಲಿ ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮಧ್ಯೆ ಜಟಾಪಟಿ ಶುರುವಾಗಿದೆ. ಮುಂದಿನ ವರ್ಷದ ಏಷ್ಯಾ ಕಪ್ ಟೂರ್ನಿ ಪಾಕಿಸ್ತಾನದಲ್ಲಿ ನಡೆಯಬೇಕಿದ್ದು, ಭಾರತ ಯಾವ ಕಾರಣಕ್ಕೂ ಪಾಕಿಸ್ತಾನದಲ್ಲಿ ಆಡುವುದಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮಂಗಳವಾರವಷ್ಟೇ ಹೇಳಿಕೆ ನೀಡಿದ್ದರು. ಬಿಸಿಸಿಐ (BCCI) ಕಾರ್ಯದರ್ಶಿಯ ಹೇಳಿಕೆಗೆ ತಿರುಗೇಟು ಕೊಟ್ಟಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ (Pakistan Cricket Board – PCB) ರಮೀಜ್ ರಾಜಾ ಮುಂದಿನ ವರ್ಷ ಭಾರತದಲ್ಲಿ ನಡೆಯುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯನ್ನು ಬಹಿಷ್ಕರಿಸುವ ಸುಳಿವು ಕೊಟ್ಟಿದ್ದಾರೆ. ರಮೀಜ್ ರಾಜಾ ಹೇಳಿಕೆಯ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಸಂಸ್ಥೆಯ ಮೂಲಗಳು ಮಾಹಿತಿ ನೀಡಿವೆ.

“ಪಿಸಿಬಿ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ತಯಾರಿ ನಡೆಸುತ್ತಿದೆ. ಐಸಿಸಿ ಮತ್ತು ಏಷ್ಯಾ ಕ್ರಿಕೆಟ್ ಕೌನ್ಸಿಲ್ ಆಯೋಜಿಸುವ ಟೂರ್ನಿಗಳಲ್ಲಿ ಭಾರತ ವಿರುದ್ಧ ಪಾಕಿಸ್ತಾನ ಆಡದೇ ಇದ್ದರೆ ಭಾರೀ ಆರ್ಥಿಕ ಹೊಡೆತವನ್ನು ಅನುಭವಿಸಬೇಕಾಗುತ್ತದೆ ಎಂಬ ವಿಚಾರ ನಮಗೆ ತಿಳಿದಿದೆ” ಎಂದು ಪಿಸಿಬಿ ಮೂಲಗಳು ತಿಳಿಸಿವೆ.

ಪಾಕಿಸ್ತಾನದಲ್ಲಿ ನಡೆಯಬೇಕಿದ್ದ 2023ರ ಏಷ್ಯಾ ಕಪ್ ಟೂರ್ನಿ ತಟಸ್ಥ ತಾಣದಲ್ಲಿ ನಡೆಯಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮಂಗಳವಾರ ಹೇಳಿಕೆ ನೀಡಿದ್ದರು. “ಮುಂದಿನ ಏಷ್ಯಾ ಕಪ್ ಟೂರ್ನಿ ತಟಸ್ಥ ತಾಣದಲ್ಲಿ ನಡೆಯಲಿದೆ. ಏಷ್ಯಾ ಕ್ರಿಕೆಟ್ ಕೌನ್ಸಿಲ್’ನ (Asian Cricket Council – ACC) ಅಧ್ಯಕ್ಷನಾಗಿ ನಾನು ಈ ಮಾತು ಹೇಳುತ್ತಿದ್ದೇನೆ. ನಾವು ಪಾಕಿಸ್ತಾನಕ್ಕೆ ಹೋಗುವಂತಿಲ್ಲ, ಅವರು ಭಾರತಕ್ಕೆ ಬರುವಂತಿಲ್ಲ. ಈ ಹಿಂದೆಯೂ ಏಷ್ಯಾ ಕಪ್ ಟೂರ್ನಿ ತಟಸ್ಥ ತಾಣಗಳಲ್ಲಿ ನಡೆದಿದೆ” ಎಂದು ಸತತ 2ನೇ ಬಾರಿ ಬಿಸಿಸಿಐ ಕಾರ್ಯದರ್ಶಿಯಾಗಿ ಆಯ್ಕೆಯಾದ ಬೆನ್ನಲ್ಲೇ ಜಯ್ ಶಾ ಹೇಳಿದ್ದರು. ಇದಕ್ಕೆ ಪಿಸಿಬಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ವಿಶ್ವಕಪ್ ಟೂರ್ನಿಯನ್ನು ಬಹಿಷ್ಕರಿಸುವ ಆಯ್ಕೆಯೂ ತನ್ನ ಮುಂದಿದೆ ಎಂದಿದೆ.

2008ರ ಏಷ್ಯಾ ಕಪ್ ಟೂರ್ನಿಯ ನಂತರ ಭಾರತ ತಂಡದ ಪಾಕಿಸ್ತಾನ ಪ್ರವಾಸಕ್ಕೆ ತೆರಳಿಲ್ಲ. 2012ರ ನಂತರ ಪಾಕಿಸ್ತಾನ ತಂಡ ಕೂಡ ಭಾರತಕ್ಕೆ ಬಂದಿಲ್ಲ. ಉಭಯ ತಂಡಗಳ ಮಧ್ಯೆ ಯಾವುದೇ ದ್ವಿಪಕ್ಷೀಯ ಸರಣಿಗಳು ನಡೆಯುತ್ತಿಲ್ಲ. ಏಷ್ಯಾ ಹಾಗೂ ಐಸಿಸಿ ಟ್ರೋಫಿ ಟೂರ್ನಿಗಳಲ್ಲಿ ಮಾತ್ರ ಸಾಂಪ್ರದಾಯಿಕ ಎದುರಾಳಿಗಳು ತಟಸ್ಥ ತಾಣಗಳಲ್ಲಿ ಮುಖಾಮುಖಿಯಾಗುತ್ತಿದ್ದಾರೆ.

ಇದನ್ನೂ ಓದಿ : Virat Kohli Pakistan Players : ಪಾಕಿಸ್ತಾನ ಆಟಗಾರರೊಂದಿಗೆ ವಿರಾಟ್ ಕೊಹ್ಲಿ ನೆಟ್ ಪ್ರಾಕ್ಟೀಸ್

ಇದನ್ನೂ ಓದಿ : Virat Kohli with fan girl : ವಿರಾಟ್ ಕೊಹ್ಲಿ ಜೊತೆ ಬ್ರಿಸ್ಬೇನ್‌ನಲ್ಲಿ ಕಾಣಿಸಿಕೊಂಡ ಈ ಸುರಸುಂದರಾಗಿ ಯಾರು ?

BCCI vs PCB : If you don’t come to Pakistan we won’t come to India to play the World Cup PCB threatened BCCI

Comments are closed.