ಮುಂಬೈ: ಜಗತ್ತಿನ ಅತ್ಯಂತ ಶ್ರೀಮಂತ ಕ್ರಿಕೆಟ್ ಮಂಡಳಿ ಖ್ಯಾತಿಯ ಬಿಸಿಸಿಐ (Board of Control for Cricket in India – BCCI Election) ಚುನಾವಣೆ ಅಕ್ಟೋಬರ್ 18ಕ್ಕೆ ನಡೆಯಲಿದೆ. ಹಾಲಿ ಬಿಸಿಸಿಐ ಕಾರ್ಯದರ್ಶಿಯಾಗಿರುವ ಜಯ್ ಶಾ (Jay Shah) ಬಿಸಿಸಿಐನ ನೂತನ ಅಧ್ಯಕ್ಷರಾಗುವ ಸಾಧ್ಯತೆಯಿದೆ. ಜಯ್ ಶಾ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಪುತ್ರ ಎಂಬುದು ಗಮನಾರ್ಹ. ಈಗಾಗಲೇ 22 ರಾಜ್ಯ ಕ್ರಿಕೆಟ್ ಸಂಸ್ಥೆಗಳು ಜಯ್ ಶಾಗೆ ಬೆಂಬಲ ಸೂಚಿಸಿದ್ದು, ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಏರುವುದು ಖಚಿತವಾಗಿದೆ. ಹಾಲಿ ಖಜಾಂಚಿ ಆಗಿರುವ ಅರುಣ್ ಧುಮಾಲ್ (Arun Dhumal) ಬಿಸಿಸಿಐನ ಹೊಸ ಕಾರ್ಯದರ್ಶಿಯಾಗುವ ಸಾಧ್ಯತೆಯಿದೆ. ಅರುಣ್ ಧುಮಾಲ್ ಕೇಂದ್ರ ಸಚಿವ ಹಾಗೂ ಬಿಸಿಸಿಐನ ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ (Anurag Tahkur) ಅವರ ಸಹೋದರ.
ಬಿಸಿಸಿಐ ಪದಾಧಿಕಾರಿಗಳ ಸ್ಥಾನಕ್ಕೆ ಅಕ್ಟೋಬರ್ 18ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 4ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಜಯ್ ಶಾ ವಿರುದ್ಧ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವ ಸಾಧ್ಯತೆಗಳು ಕಡಿಮೆ ಇರುವುದರಿಂದ ಅಮಿತ್ ಶಾ ಪುತ್ರ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ. ಸೌರವ್ ಗಂಗೂಲಿ ಹಾಗೂ ಜಯ್ ಶಾ ಮತ್ತೆ ಬಿಸಿಸಿಐ ಪದಾಧಿಕಾರಿಗಳ ಸ್ಥಾನಕ್ಕೆ ಸ್ಪರ್ಧಿಸಲು ಇದ್ದ ಕಾನೂನು ತೊಡಕನ್ನು ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್ ನಿವಾರಿಸಿತ್ತು.
ಜಯ್ ಶಾ ಬಿಸಿಸಿಐ ಅಧ್ಯಕ್ಷರಾದರೆ ಹಾಲಿ ಅಧ್ಯಕ್ಷ ಸೌರವ್ ಗಂಗೂಲಿಯವರ (BCCI President Sourav Ganguly) ಕಥೆಯೇನು? ಈ ಪ್ರಶ್ನೆಗೂ ಬಿಸಿಸಿಐ ಬಳಿ ಉತ್ತರವಿದೆ. ಬಂಗಾಳದ ಹುಲಿ ಖ್ಯಾತಿಯ ಸೌರವ್ ಗಂಗೂಲಿಯವರನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (International Cricket Council – ICC) ಅಧ್ಯಕ್ಷ ಸ್ಥಾನಕ್ಕೇರಿಸಲು ತೆರೆಮರೆಯಲ್ಲಿ ವೇದಿಕೆ ಸಜ್ಜಾಗುತ್ತಿದೆ. ನವೆಂಬರ್ ತಿಂಗಳಲ್ಲಿ ಸೌರವ್ ಗಂಗೂಲಿ ಐಸಿಸಿ ಅಧ್ಯಕ್ಷರಾಗಲಿದ್ದಾರೆ ಎನ್ನಲಾಗ್ತಿದೆ. ಐಸಿಸಿ ಹಾಲಿ ಅಧ್ಯಕ್ಷ ಗ್ರೆಗ್ ಬಾರ್ಕ್ಲಿ ಅವರ ಅಧಿಕಾರಾವಧಿ ಈಗಾಗಲೇ ಪೂರ್ಣಗೊಂಡಿದೆ.
ಇದನ್ನೂ ಓದಿ : Team India arrives in Thiruvananthapuram: ಸಂಜು ಸ್ಯಾಮ್ಸನ್ ನಾಡಿಗೆ ಬಂದಿಳಿದ ಟೀಮ್ ಇಂಡಿಯಾಗೆ ಭರ್ಜರಿ ವೆಲ್ ಕಮ್
Board of Control for Cricket in India BCCI Election Amith Shah Son Becomes President