India vs West Indies : ಭಾರತ – ವೆಸ್ಟ್‌ ಇಂಡಿಸ್‌ 2ನೇ ಏಕದಿನ ಪಂದ್ಯ : ತಂಡ ಸೇರಿಕೊಂಡ ರಾಹುಲ್‌

ಅಹಮದಾಬಾದ್‌ : ಭಾರತ ಹಾಗೂ ವೆಸ್ಟ್‌ ಇಂಡಿಸ್‌ ವಿರುದ್ದದ (India vs West Indies) ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮೊದಲ ಪಂದ್ಯವನ್ನು ಜಯಿಸಿರುವ ಟೀಂ ಇಂಡಿಯಾ ಇದೀಗ ಎರಡನೇ ಪಂದ್ಯಕ್ಕೆ ಸಜ್ಜಾಗಿದೆ. ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದ ಉಪನಾಯಕ ಕೆ.ಎಲ್.ರಾಹುಲ್‌ ತಂಡವನ್ನು ಕೂಡಿಕೊಂಡಿರುವುದು ಭಾರತ ತಂಡಕ್ಕೆ ಬಲ ಬಂದಂತಾಗಿದೆ. ಒಂದೆರಡು ಬದಲಾವಣೆಗಳೊಂದಿಗೆ ಟೀಂ ಇಂಡಿಯಾ ಕಣಕ್ಕೆ ಇಳಿಯಲಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಎರಡನೇ ಪಂದ್ಯಕ್ಕೆ ಎರಡೂ ತಂಡಗಳು ಸಜ್ಜಾಗುತ್ತಿವೆ. ದಕ್ಷಿಣ ಆಫ್ರಿಕಾ ವಿರುದ್ದದ ಸರಣಿ ಸೋಲಿನ ಕಹಿಯನ್ನು ಮರೆಸಲು ವೆಸ್ಟ್‌ ಇಂಡಿಸ್‌ ಸರಣಿ ಭಾರತಕ್ಕೆ ಉತ್ತಮ ಅವಕಾಶವನ್ನು ಕಲ್ಪಿಸಿದೆ. ಮಂಡಿರಚ್ಚು ನೋವಿನಿಂದ ಬಳಲುತ್ತಿದ್ದ ನಾಯಕ ರೋಹಿತ್‌ ಶರ್ಮಾ ತಂಡಕ್ಕೆ ಮರಳಿದ್ದು, ಮೊದಲ ಪಂದ್ಯದಲ್ಲಿಯೇ ಉತ್ತಮ ಬ್ಯಾಟಿಂಗ್‌ ಪ್ರದರ್ಶಿಸಿದ್ದಾರೆ. ಜೊತೆಗೆಯಲ್ಲಿ ಭಾರತೀಯ ಬೌಲರ್‌ಗಳನ್ನು ವೆಸ್ಟ್‌ ಇಂಡಿಸ್‌ ತಂಡವನ್ನು ಕಡಿಮೆ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದ್ದರು. ಜೊತೆಗೆ ರೋಹಿತ್‌ ಶರ್ಮಾ, ವಿರಾಟ್‌ ಕೊಯ್ಲಿ, ರಿಷಬ್‌ ಪಂತ್‌, ಜೊತೆಗೆ ರಾಹುಲ್‌ ಸೇರ್ಪಡೆಯಿಂದ ಬ್ಯಾಟಿಂಗ್‌ ಬಲಿಷ್ಠವಾಗಿದೆ. ಈಗಾಗಲೇ ಕ್ವಾರಂಟೈನ್‌ ಮುಗಿಸಿರುವ ರಾಹುಲ್‌, ನೆಟ್ಸ್‌ನಲ್ಲಿ ಬೆವರು ಹರಿಸಿದ್ದಾರೆ. ಇಂದಿನ ಪಂದ್ಯದಲ್ಲಿ ಮಯಾಂಕ್‌ ಅಗರ್ವಾಲ್‌ ಕೂಡ ಆಡುವ ಬಳಗವನ್ನು ಸೇರುವ ಸಾಧ್ಯತೆಯಿದೆ.

ಎರಡನೇ ಏಕದಿನ ಪಂದ್ಯದಲ್ಲಿ ಯಾರೆಲ್ಲಾ ಆಡ್ತಾರೆ ಅನ್ನುವ ಕುರಿತು ಟೀಂ ಇಂಡಿಯಾ ಮ್ಯಾನೇಜ್ಮೆಂಟ್‌ ಇನ್ನೂ ಬಹಿರಂಗ ಪಡಿಸಿಲ್ಲ. ಇನ್ನು ಮಾಜಿ ನಾಯಕ ವಿರಾಟ್‌ ಕೊಹ್ಲಿ ಹೊಸ ದಾಖಲೆಯನ್ನು ಬರೆಯಲು ಸಜ್ಜಾಗಿದ್ದಾರೆ. 71 ನೇ ಶತಕವನ್ನು ಪೂರ್ಣಗೊಳಿಸಲು ಕೊಹ್ಲಿ ಕಳೆದ ಎರಡು ವರ್ಷಗಳಿಂದಲೂ ಕಾಯುತ್ತಿದ್ದಾರೆ. ಇಶಾನ್‌ ಕಿಶನ್‌, ಸೂರ್ಯಕುಮಾರ್‌ ಯಾದವ್‌ ಹಾಗೂ ದೀಪಕ್‌ ಹೂಡ ಕಳೆದ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್‌ ಪ್ರದರ್ಶಿಸಿದ್ದಾರೆ. ಆದರೆ ಇದೀಗ ರಾಹುಲ್‌ ಸೇರ್ಪಡೆಯಿಂದಾಗಿ ಒಬ್ಬರು ಸ್ಥಾನವನ್ನು ಕಳೆದುಕೊಳ್ಳಲಿದ್ದಾರೆ.

ಆದರೆ ಭಾರತ ಬೌಲಿಂಗ್‌ ವಿಭಾಗ ಬಲಿಷ್ಠವಾಗಿದೆ. ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ, ಶಾರ್ದೂಲ್ ಠಾಕೂರ್ ಮೊದಲ ಪಂದ್ಯದಲ್ಲಿ ಮಿಂಚಿದ್ದಾರೆ. ವೆಸ್ಟ್‌ ಇಂಡಿಸ್‌ ತಂಡವನ್ನು ಕಡಿಮೆ ಮೊತ್ತಕ್ಕೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಎರಡನೇ ಪಂದ್ಯದಲ್ಲಿ ಭಾರತ ತಂಡದ ಬೌಲಿಂಗ್‌ ವಿಭಾಗದಲ್ಲಿ ಬದಲಾವಣೆಯನ್ನು ಮಾಡುವ ಸಾಧ್ಯತೆ ತೀರಾ ಕಡಿಮೆ.

ತಂಡಗಳು :

ಭಾರತ ತಂಡ : ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶಿಖರ್ ಧವನ್, ಮಯಾಂಕ್ ಅಗರ್ವಾಲ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್-ಕೀಪರ್), ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ -ಕೀಪರ್), ದೀಪಕ್ ಚಹಾರ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮೊಹಮ್ಮದ್. ಸಿರಾಜ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಶಾರುಖ್ ಖಾನ್.

ವೆಸ್ಟ್ ಇಂಡೀಸ್: ಕೀರಾನ್ ಪೊಲಾರ್ಡ್ (ನಾಯಕ), ಫ್ಯಾಬಿಯನ್ ಅಲೆನ್, ನ್ಕ್ರುಮಾ ಬೊನ್ನರ್, ಡ್ಯಾರೆನ್ ಬ್ರಾವೋ, ಶಮರ್ ಬ್ರೂಕ್ಸ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೇಲ್ ಹೊಸೈನ್, ಅಲ್ಜಾರಿ ಜೋಸೆಫ್, ಬ್ರ್ಯಾಂಡನ್ ಕಿಂಗ್, ನಿಕೋಲಸ್ ಪೂರನ್, ಕೆಮರ್ ರೋಚ್, ರೊಮಾರಿಯೊ ಶೆಪರ್ಡ್, ಓಡಿಯನ್ ವಾಲ್ಶ್, ಒಡೆನ್ ಸ್ಮಿತ್ ಜೂ.

ಇದನ್ನೂ ಓದಿ : ಕೋಲ್ಕತ್ತಾ ನೈಟ್‌ ರೈಡರ್ಸ್‌ಗೆ ಆಂಡ್ರೆ ರಸೆಲ್ ನಾಯಕ, ತಂಡ ಸೇರ್ತಾರೆ ಬೈರ್‌ಸ್ಟೋ ಮತ್ತು ಉತ್ತಪ್ಪ

ಇದನ್ನೂ ಓದಿ : ಇನ್ಸ್ಟಾಗ್ರಾಮ್‌ನಲ್ಲಿ ಹೊಸ ದಾಖಲೆ ಬರೆದ ಫುಟ್ಬಾಲ್ ಮಾಂತ್ರಿಕ ಕ್ರಿಸ್ಟಿಯಾನೊ ರೊನಾಲ್ಡೊ!

(Today India vs West Indies 2nd ODI: KL Rahul‌ Joining Team India)

Comments are closed.