ಕುಕ್ಕೆ ಸುಬ್ರಮಣ್ಯಕ್ಕೆ ಕ್ರಿಕೆಟಿಗ ಕೆ.ಎಲ್ ರಾಹುಲ್ ಭೇಟಿ, ಸುಬ್ರಮಣ್ಯನಿಗೆ ವಿಶೇಷ ಪೂಜೆ

ಸುಬ್ರಮಣ್ಯ: KL Rahul visits Kukke Subramanya : ಟಿ20 ವಿಶ್ವಕಪ್ ಟೂರ್ನಿಯ ನಂತರ ತವರಿಗೆ ಮರಳಿರುವ ಭಾರ ಕ್ರಿಕೆಟ್ ತಂಡದ ಉಪನಾಯಕ ಕೆ.ಎಲ್ ರಾಹುಲ್ (KL Rahul) ಬುಧವಾರ ಬೆಳಗ್ಗೆ ಕುಕ್ಕೆ ಸುಬ್ರಮಣ್ಯಕ್ಕೆ (Kukke Subramanya) ಭೇಟಿ ನೀಡಿದ್ದಾರೆ. ಸುಬ್ರಮಣ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ರಾಹುಲ್ ಉತ್ತಮ ಪ್ರದರ್ಶನ ತೋರುವಲ್ಲಿ ವಿಫಲರಾಗಿದ್ದರು. ಆಡಿದ ಆರು ಪಂದ್ಯಗಳಿಂದ ಎರಡು ಅರ್ಧಶತಕಗಳ ಸಹಿತ 128 ರನ್ ಗಳಿಸಿದ್ದ ರಾಹುಲ್ ಭಾರೀ ಟೀಕೆ ಎದುರಿಸಿದ್ದರು. ಲೀಗ್ ಹಂತದಲ್ಲಿ ಪಾಕಿಸ್ತಾನ, ನೆದರ್ಲೆಂಡ್ಸ್ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಮುಗ್ಗರಿಸಿದ್ದ ರಾಹುಲ್ ಬಾಂಗ್ಲಾದೇಶ ಮತ್ತು ಜಿಂಬಾಬ್ವೆ ವಿರುದ್ಧ ಅರ್ಧಶತಕ ಸಿಡಿಸಿದ್ದರು. ಆದರೆ ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಮತ್ತೆ ಎಡವಿದ್ದ ರಾಹುಲ್ ಕೇವಲ 5 ರನ್ ಗಳಿಸಿ ಔಟಾಗಿದ್ದರು.

ಟಿ20 ವಿಶ್ವಕಪ್ ಟೂರ್ನಿಯಲ್ಲಿ ರಾಹುಲ್ ಅವರ ಆಟದ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು. ವಿಶ್ವಕಪ್ ವೈಫಲ್ಯದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿರುವ ರಾಹುಲ್, ಯಶಸ್ಸಿಗಾಗಿ ಪ್ರಾರ್ಥಿಸಿದ್ದಾರೆ. ಟಿ20 ವಿಶ್ವಕಪ್ ಟೂರ್ನಿಯ ನಂತರ ರಾಹುಲ್ ಅವರಿಗೆ ಕ್ರಿಕೆಟ್’ನಿಂದ ಸಣ್ಣ ಬ್ರೇಕ್ ಸಿಕ್ಕಿದೆ. ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಜೊತೆ ಕೆ.ಎಲ್ ರಾಹುಲ್ ಅವರಿಗೆ ವಿಶ್ರಾಂತಿ ನೀಡಲಾಗಿದೆ.

Cricketer KL Rahul visits Kukke Subramanya special pooja to Subramanya

ನ್ಯೂಜಿಲೆಂಡ್ ವಿರುದ್ಧದ ಟಿ20 ಹಾಗೂ ಏಕದಿನ ಸರಣಿಗೆ ವಿಶ್ರಾಂತಿ ಪಡೆದಿರುವ ರಾಹುಲ್, ಬಾಂಗ್ಲಾದೇಶ ಪ್ರವಾಸದ ಮೂಲಕ ಟೀಮ್ ಇಂಡಿಯಾಗೆ ವಾಪಸ್ಸಾಗಲಿದ್ದಾರೆ. ಬಾಂಗ್ಲಾ ಪ್ರವಾಸದಲ್ಲಿ ಭಾರತ ತಂಡ 3 ಪಂದ್ಯಗಳ ಏಕದಿನ ಸರಣಿ ಹಾಗೂ 2 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದ್ದು, ನವೆಂಬರ್ 30ರಂದು ಟೀಮ್ ಇಂಡಿಯಾ ಕೋಲ್ಕತ್ತಾದಿಂದ ಢಾಕಾಗೆ ಪ್ರಯಾಣ ಬೆಳೆಸಲಿದೆ.

Cricketer KL Rahul visits Kukke Subramanya special pooja to Subramanya

ಭಾರತದ ಬಾಂಗ್ಲಾದೇಶ ಪ್ರವಾಸದ ವೇಳಾಪಟ್ಟಿ

ಡಿಸೆಂಬರ್ 04: ಮೊದಲ ಏಕದಿನ (ಶೇರ್ ಎ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣ, ಢಾಕಾ)
ಡಿಸೆಂಬರ್ 07: 2ನೇ ಏಕದಿನ (ಶೇರ್ ಎ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣ, ಢಾಕಾ)
ಡಿಸೆಂಬರ್ 10: 3ನೇ ಏಕದಿನ (ಶೇರ್ ಎ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣ, ಢಾಕಾ)
ಡಿಸೆಂಬರ್ 14-18: ಮೊದಲ ಟೆಸ್ಟ್ (ಜಹೂರ್ ಅಹ್ಮದ್ ಚೌಧರಿ ಕ್ರೀಡಾಂಗಣ, ಛಟ್ಟೊಗ್ರಾಮ್)
ಡಿಸೆಂಬರ್ 22-26: 2ನೇ ಏಕದಿನ (ಶೇರ್ ಎ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣ, ಢಾಕಾ)

ಇದನ್ನೂ ಓದಿ : MS Dhoni tennis : ಟೆನಿಸ್ ಡಬಲ್ಸ್ ಚಾಂಪಿಯನ್‌ಷಿಪ್ ಗೆದ್ದ ಕ್ರಿಕೆಟ್ ಮೈದಾನದ ಕೂಲ್ ಕ್ಯಾಪ್ಯನ್ ಎಂ.ಎಸ್ ಧೋನಿ

ಇದನ್ನೂ ಓದಿ : Pandya on Samson : “ಇದು ನನ್ನ ತಂಡ, ನನ್ನ ನಿರ್ಧಾರ.. ಸ್ಯಾಮ್ಸನ್’ಗೆ ಸಿಗದ ಚಾನ್ಸ್, ಕ್ಯಾಪ್ಟನ್ ಪಾಂಡ್ಯ ಖಡಕ್ ಉತ್ತರ

Cricketer KL Rahul visits Kukke Subramanya special pooja to Subramanya

Comments are closed.