ಮಂಗಳವಾರ, ಏಪ್ರಿಲ್ 29, 2025
HomeSportsCricketCricketers celebrates Independence Day: 75ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಿದ ಕ್ರಿಕೆಟಿಗರು

Cricketers celebrates Independence Day: 75ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಿದ ಕ್ರಿಕೆಟಿಗರು

- Advertisement -

ಬೆಂಗಳೂರು: (Cricketers celebrated 75th Independence Day) ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ತುಂಬಿದ ಸಂಭ್ರಮವನ್ನು ದೇಶಾದ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವನ್ನು ಕ್ರಿಕೆಟಿಗರು ಸಂಭ್ರಮದಿಂದ ಆಚರಿಸುತ್ತಿದ್ದಾರೆ.ಟೀಮ್ ಇಂಡಿಯಾದ ಮಾಜಿ ನಾಯಕ, ರನ್ ಮಷಿನ್ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಅವರೊಂದಿಗೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಸ್ವಾತಂತ್ರ್ಯ ಸಂಭ್ರಮಕ್ಕೆ ಸಾಕ್ಷಿಯಾಗಿದ್ದಾರೆ.

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಮನೆಯ ಟೆರೇಸ್ ಮೇಲೆ ತ್ರಿವರ್ಣ ಧ್ವಜ ಹಾರಿಸಿದ್ದಾರೆ.

ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ, ಸೌರಾಷ್ಟ್ರದಲ್ಲಿರುವ ತಮ್ಮ ಮನೆಯಲ್ಲಿ ಪತ್ನಿ ಜೊತೆ ಧ್ವಜ ಹಿಡಿದು ಸಂಭ್ರಮಿಸಿದ್ದಾರೆ. ಕರ್ನಾಟಕದ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಮನೆಯ ಬಾಲ್ಕನಿಯಲ್ಲಿ ತ್ರಿವರ್ಣ ಧ್ವಜ ಹಾರಿಸಿದ್ದಾರೆ.

ಟೀಮ್ ಇಂಡಿಯಾದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ,ಮಧ್ಯಮ ಕ್ರಮಾಂಕದ ಬ್ಯಾಟ್ಸ್’ಮನ್ ಶ್ರೇಯಸ್ ಅಯ್ಯರ್, ವೇಗದ ಬೌಲರ್ ಇಶಾಂತ್ ಶರ್ಮಾ, ಆರಂಭಿಕ ಬ್ಯಾಟ್ಸ್’ಮನ್ ಶಿಖರ್ ಧವನ್, ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್, ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕ ಮಿಥಾಲಿ ರಾಜ್ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮವನ್ನು ಆಚರಿಸಿದ್ದಾರೆ.

ಇದನ್ನೂ ಓದಿ : Lucky man of India Deepak Hooda: ಈತ ಟೀಮ್ ಇಂಡಿಯಾದ ಲಕ್ಕಿ ಸ್ಟಾರ್.. ಈತ ಆಡಿದಾಗ ತಂಡದ ಸೋತದ್ದೇ ಇಲ್ಲ

ಇದನ್ನೂ ಓದಿ : India Tour of Zimbabwe : ಜಿಂಬಾಬ್ವೆಯಲ್ಲಿ ಅಭ್ಯಾಸ ಆರಂಭಿಸಿದ ಕೆ.ಎಲ್ ರಾಹುಲ್ ಬಳಗ

Cricketers celebrated 75th Independence Day with great enthusiasm

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular