ಬೆಂಗಳೂರು : Deepak Chahar ruled out : ಐಸಿಸಿ ಟಿ20 ವಿಶ್ವಕಪ್’ಗೆ (T20 World Cup 2022) ಸಜ್ಜಾಗುತ್ತಿರುವ ಟೀಮ್ ಇಂಡಿಯಾಗೆ ಮತ್ತೊಂದು ಆಘಾತ ಎದುರಾಗಿದೆ. ವಿಶ್ವಕಪ್ ರಿಸರ್ವ್ ಪ್ಲೇಯರ್ಸ್ ಲಿಸ್ಟ್’ನಲ್ಲಿದ್ದ ಬಲಗೈ ಸ್ವಿಂಗ್ ಬೌಲರ್ ದೀಪಕ್ ಚಹರ್ ಬೆನ್ನು ನೋವಿನ ಕಾರಣ ತಂಡದಿಂದ ಹೊರ ಬಿದ್ದಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯ ನಂತರ ಗಾಯದ ಸಮಸ್ಯೆಯಿಂದ ಬಳಲಿದ್ದ ದೀಪಕ್ ಚಹರ್, ಹರಿಣಗಳ ವಿರುದ್ಧದ ಏಕದಿನ ಸರಣಿಯಲ್ಲಿ ಆಡಿರಲಿಲ್ಲ. ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಂಡಿರುವ ದೀಪಕ್ ಚಹರ್, ವಿಶ್ವಕಪ್ ಆರಂಭದ ಹೊತ್ತಿಗೆ ಚೇತರಿಸಿಕೊಳ್ಳುವ ಸಾಧ್ಯತೆ ಇಲ್ಲ. ಹೀಗಾಗಿ ವಿಶ್ವಕಪ್ ಮೀಸಲು ಆಟಗಾರರ ಪಟ್ಟಿಯಿಂದ ಚಹರ್ ಅವರನ್ನು ಹೊರ ಹಾಕಲಾಗಿದ್ದು, ಬೌಲಿಂಗ್ ಆಲ್ರೌಂಡರ್ ಶಾರ್ದೂಲ್ ಠಾಕೂರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಈ ಹಿಂದೆ ಪ್ರೀಮಿಯಂ ಫಾಸ್ಟ್ ಬೌಲರ್ ಜಸ್ಪ್ರೀತ್ ಬುಮ್ರಾ ಕೂಡ ಬೆನ್ನು ನೋವಿನ ಕಾರಣ ವಿಶ್ವಕಪ್’ನಿಂದ ಹೊರ ಬಿದ್ದಿದ್ದರು. ಬುಮ್ರಾ ಅವರಿಗೆ ಬದಲಿ ಆಟಗಾರನನ್ನು ಇನ್ನೂ ಹೆಸರಿಸಲಾಗಿಲ್ಲ. ಬಹುತೇಕ ಮೊಹಮ್ಮದ್ ಶಮಿ ಅವರೇ ಬುಮ್ರಾ ಜಾಗದಲ್ಲಿ ಭಾರತದ ಅಂತಿಮ 15ರ ಬಳಗದಲ್ಲಿ ಸ್ಥಾನ ಪಡೆಯಲಿದ್ದಾರೆ. ಮೊಹಮ್ಮದ್ ಶಮಿ ಮತ್ತು ಶಾರ್ದೂಲ್ ಠಾಕೂರ್ ಜೊತೆ ಯುವ ಬಲಗೈ ವೇಗಿ ಮೊಹಮ್ಮದ್ ಸಿರಾಜ್ ಕೂಡ ಇನ್ನೆರಡು ದಿನಗಳಲ್ಲಿ ಆಸ್ಟ್ರೇಲಿಯಾಗೆ ಹಾರಲಿದ್ದು, ವಿಶ್ವಕಪ್ ತಂಡವನ್ನು ಸೇರಿಕೊಳ್ಳಲಿದ್ದಾರೆ.
ಟೂರ್ನಿಯಲ್ಲಿ ಭಾರತ ತಂಡದ ಅಭಿಯಾನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯದ ಮೂಲಕ ಆರಂಭವಾಗಲಿದೆ. ಈ ಹೈವೋಲ್ಟೇಜ್ ಪಂದ್ಯ ಅಕ್ಟೋಬರ್ 23ರಂದು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಭಾರತ ತಂಡ ಪಾಕಿಸ್ತಾನ, ದಕ್ಷಿಣ ಆಫ್ರಿಕಾ ಹಾಗೂ ಬಾಂಗ್ಲಾದೇಶ ತಂಡಗಳ ಜೊತೆ ಗ್ರೂಪ್-2ನಲ್ಲಿ ಸ್ಥಾನ ಪಡೆದಿದೆ. ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೂ ಮೊದಲು ಭಾರತ ಆತಿಥೇಯ ಆಸ್ಟ್ರೇಲಿಯಾ (ಅಕ್ಟೋಬರ್ 17) ಹಾಗೂ ನ್ಯೂಜಿಲೆಂಡ್ (ಅಕ್ಟೋಬರ್ 19) ವಿರುದ್ಧ ಬ್ರಿಸ್ಬೇನ್’ನಲ್ಲಿ ಎರಡು ಅಭ್ಯಾಸ ಪಂದ್ಯಗಳನ್ನಾಡಲಿದೆ.
ಐಸಿಸಿ ಟಿ20 ವಿಶ್ವಕಪ್: ಭಾರತದ ವೇಳಾಪಟ್ಟಿ (ಗ್ರೂಪ್-2):
Vs ಪಾಕಿಸ್ತಾನ: ಅಕ್ಟೋಬರ್ 23
ಸ್ಥಳ: ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್, ಮೆಲ್ಬೋರ್ನ್
ಪಂದ್ಯ ಆರಂಭ: ಮಧ್ಯಾಹ್ನ 1.30ಕ್ಕೆ (ಭಾರತೀಯ ಕಾಲಮಾನ)
Vs ಅರ್ಹತಾ ಸುತ್ತಿನ ತಂಡ: ಅಕ್ಟೋಬರ್ 27
ಸ್ಥಳ: ಸಿಡ್ನಿ ಕ್ರಿಕೆಟ್ ಗ್ರೌಂಡ್, ಸಿಡ್ನಿ
ಪಂದ್ಯ ಆರಂಭ: ಮಧ್ಯಾಹ್ನ 12.30ಕ್ಕೆ (ಭಾರತೀಯ ಕಾಲಮಾನ)
Vs ದಕ್ಷಿಣ ಆಫ್ರಿಕಾ: ಅಕ್ಟೋಬರ್ 30
ಸ್ಥಳ: ಪರ್ತ್
ಪಂದ್ಯ ಆರಂಭ: ಮಧ್ಯಾಹ್ನ 4.30ಕ್ಕೆ (ಭಾರತೀಯ ಕಾಲಮಾನ)
Vs ಬಾಂಗ್ಲಾದೇಶ: ನವೆಂಬರ್ 02
ಸ್ಥಳ: ಅಡಿಲೇಡ್
ಪಂದ್ಯ ಆರಂಭ: ಮಧ್ಯಾಹ್ನ 1.30ಕ್ಕೆ (ಭಾರತೀಯ ಕಾಲಮಾನ)
Vs ಅರ್ಹತಾ ಸುತ್ತಿನ ತಂಡ: ನವೆಂಬರ್ 06
ಸ್ಥಳ: ಮೆಲ್ಬೋರ್ನ್ ಕ್ರಿಕೆಟ್ ಮೈದಾನ, ಮೆಲ್ಬೋರ್ನ್
ಪಂದ್ಯ ಆರಂಭ: ಮಧ್ಯಾಹ್ನ 1.30ಕ್ಕೆ (ಭಾರತೀಯ ಕಾಲಮಾನ)
ನೇರಪ್ರಸಾರ (Live Telecast): Stat Sports Network
ಲೈವ್ ಸ್ಟ್ರೀಮಿಂಗ್ (Live Streaming): Disney + Hotstar
ಇದನ್ನೂ ಓದಿ : Virat Kohli : ಆಸ್ಟ್ರೇಲಿಯಾದ ಬೀದಿಗಳಲ್ಲಿ ರಾರಾಜಿಸುತ್ತಿದೆ ವಿರಾಟ್ ಕೊಹ್ಲಿ ಕಟೌಟ್.. ಕ್ಯಾಪ್ಟನ್ ರೋಹಿತ್‌ಗಿಲ್ಲ ಕಟೌಟ್ ಭಾಗ್ಯ
Deepak Chahar ruled out of the T20 World Cup 2022