Dinesh Karthik : ವಿಶ್ವಕಪ್ ಮಧ್ಯೆಯೇ ಡಿಕೆಗೆ ಬಿಸಿಸಿಐ ಶಾಕ್, ಟೀಮ್ ಇಂಡಿಯಾದಲ್ಲಿ ದಿನೇಶ್ ಕಾರ್ತಿಕ್ ಖೇಲ್ ಖತಂ

ಬೆಂಗಳೂರು : (Dinesh Karthik)ಟೀಮ್ ಇಂಡಿಯಾದ ಅನುಭವಿ ವಿಕೆಟ್ ಕೀಪರ್ ಬ್ಯಾಟ್ಸ್’ಮನ್ ದಿನೇಶ್ ಕಾರ್ತಿಕ್ ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ಕರಿಯರ್ ಟಿ20 ವಿಶ್ವಕಪ್’ನೊಂದಿಗೆ ಅಂತ್ಯಗೊಳ್ಳಲಿದೆ. ಇದರ ಸ್ಪಷ್ಟ ಸೂಚನೆ ಸಿಕ್ಕಿ ಬಿಟ್ಟಿದೆ.

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ (India vs New Zeeland t20 series) ಆಯ್ಕೆ ಮಾಡಲಾಗಿರುವ ಭಾರತ ತಂಡದಲ್ಲಿ ದಿನೇಶ್ ಕಾರ್ತಿಕ್(Dinesh Karthik) ಅವರಿಗೆ ಸ್ಥಾನ ಸಿಕ್ಕಿಲ್ಲ. ಅಂದ್ರೆ ಇದ್ರ ಅರ್ಥ, ಟಿ20 ವಿಶ್ವಕಪ್ ನಂತರ ಡಿಕೆ(Dinesh Karthik )ಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ಇಲ್ಲ ಅಂತ. 38 ವರ್ಷದ ದಿನೇಶ್ ಕಾರ್ತಿಕ್ ಐಪಿಎಲ್-2022 ಟೂರ್ನಿಯಲ್ಲಿ ಅಮೋಘ ಪ್ರದರ್ಶನ ತೋರಿ 3 ವರ್ಷಗಳ ನಂತರ ಭಾರತ ತಂಡಕ್ಕೆ ಕಂಬ್ಯಾಕ್ ಮಾಡಿದ್ದರು. ಟೀಮ್ ಇಂಡಿಯಾದಲ್ಲಿ ಫಿನಿಷರ್ ಜವಾಬ್ದಾರಿ ಹೊತ್ತಿರುವ ಡಿಕೆ(Dinesh Karthik), ಟಿ20 ವಿಶ್ವಕಪ್’ನಲ್ಲಿ ಆಡಿದ ಮೂರು ಪಂದ್ಯಗಳಲ್ಲಿ ರಿಷಭ್ ಪಂತ್ ಅವರನ್ನು ಹಿಂದಕ್ಕೆ ತಳ್ಳಿ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದರು. ಆದರೆ ಮೂರು ಪಂದ್ಯಗಳ ಪೈಕಿ ಬ್ಯಾಟಿಂಗ್ ಅವಕಾಶ ಸಿಕ್ಕಿರುವ ಎರಡೂ ಪಂದ್ಯಗಳಲ್ಲಿ ದಿನೇಶ್ ಕಾರ್ತಿಕ್ ವಿಫಲರಾಗಿದ್ದಾರೆ. ಪಾಕಿಸ್ತಾನ ವಿರುದ್ಧದ ಹೈವೋಲ್ಟೇಜ್ ಪಂದ್ಯದಲ್ಲಿ ಕೇವಲ 1 ರನ್ ಗಳಿಸಿ ಔಟಾಗಿದ್ದ ಡಿಕೆ, ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ತಂಡ ಸಂಕಷ್ಟಕ್ಕೆ ಸಿಲುಕಿದ್ದಾಗ ರಕ್ಷಣೆಯಾಗಿ ನಿಲ್ಲುವ ಬದಲು ಕೇವಲ ರನ್ ಗಳಿಸಿ ಔಟಾಗಿದ್ದರು.

ಇದನ್ನೂ ಓದಿ : Sehwag criticized Dinesh Karthik: “ಇದೇನು ಬೆಂಗಳೂರು ಪಿಚ್ ಅಲ್ಲ”, ದಿನೇಶ್ ಕಾರ್ತಿಕ್ ವಿರುದ್ಧ ಸೆಹ್ವಾಗ್ ಈ ರೀತಿ ಗುಡುಗಿದ್ದೇಕೆ ?

ವಿಶ್ವಕಪ್ ನಂತರ ಟಿ20ಯಲ್ಲಿ ಹಿರಿಯ ಆಟಗಾರರನ್ನು ಹೊರಗಿಟ್ಟು ಯುವ ತಂಡ ಕಟ್ಟಲು ಬಿಸಿಸಿಐ ನಿರ್ಧರಿಸಿದ್ದು, ಇದೇ ಕಾರಣದಿಂದ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಆಯ್ಕೆ ಮಾಡಲಾಗಿರುವ ತಂಡದಲ್ಲಿ ದಿನೇಶ್ ಕಾರ್ತಿಕ್ ಮತ್ತು ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರಿಗೆ ಸ್ಥಾನ ಸಿಕ್ಕಿಲ್ಲ. ನಾಯಕ ರೋಹಿತ್ ಶರ್ಮಾ, ಉಪನಾಯಕ ಕೆ.ಎಲ್ ರಾಹುಲ್ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ ಅವರಿಗೆ ನ್ಯೂಜಿಲೆಂಡ್ ಪ್ರವಾಸಕ್ಕೆ ವಿಶ್ರಾಂತಿ ನೀಡಲಾಗಿದ್ದು, ಟಿ20 ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ.

ಇದನ್ನೂ ಓದಿ : Syed Mushtaq Ali T20: ನಾಳೆ ಕರ್ನಾಟಕ Vs ಪಂಜಾಬ್ ಕ್ವಾರ್ಟರ್ ಫೈನಲ್; ಇಲ್ಲಿದೆ Team, Time, Live ಡೀಟೇಲ್ಸ್

ಇದನ್ನೂ ಓದಿ : Dinesh Karthik : ಡಿಕೆ ಸಾಹೇಬನ ಘೋರ ವೈಫಲ್ಯ, ವಿಶ್ವಕಪ್‌ನಲ್ಲಿ ದಿನೇಶ್ ಕಾರ್ತಿಕ್ ಗಳಿಸಿರುವ ಸ್ಕೋರ್ ನೋಡಿದ್ರೆ ಗಾಬರಿ ಬಿದ್ದು ಹೋಗ್ತೀರಿ

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ (India Vs New Zeeland T20 series):
ಹಾರ್ದಿಕ್ ಪಾಂಡ್ಯ (ನಾಯಕ), ರಿಷಭ್ ಪಂತ್ (ಉಪನಾಯಕ, ವಿಕೆಟ್ ಕೀಪರ್), ಶುಭಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್.

ಇದನ್ನೂ ಓದಿ : India Cricket Team : ಕಿವೀಸ್ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ: ಶಿಖರ್, ಪಾಂಡ್ಯ ಕ್ಯಾಪ್ಟನ್, ರಿಷಬ್ ವೈಸ್ ಕ್ಯಾಪ್ಟನ್

ಭಾರತ Vs ನ್ಯೂಜಿಲೆಂಡ್ ಟಿ20 ಸರಣಿಯ ವೇಳಾಪಟ್ಟಿ
ಮೊದಲ ಟಿ20: 18 ನವೆಂಬರ್ (ವೆಲಿಂಗ್ಟನ್)
2ನೇ ಟಿ20: 20 ನವೆಂಬರ್ (ಮೌಂಟ್ ಮೌಂಗ್’ನುಯ್)
3ನೇ ಟಿ20: 22 ನವೆಂಬರ್ (ನೇಪಿಯರ್)

Team India’s veteran wicketkeeper batsman Dinesh Karthik’s international cricket career will end with the T20 World Cup. There is a clear indication of this.

Comments are closed.