Exclusive: Australia training camp in Bangalore: ಆಸ್ಟ್ರೇಲಿಯಾ ಅಭ್ಯಾಸಕ್ಕೆ ಆಲೂರು ಆತಿಥ್ಯ; ಬೆಂಗಳೂರಲ್ಲಿ ಆರಂಭಗೊಂಡಿದೆ ಕಾಂಗರೂಗಳ ಸಮರಾಭ್ಯಾಸ

ಬೆಂಗಳೂರು: ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ (Border-Gavaskar Trophy) ಗೆಲ್ಲಲೇಬೇಕೆಂದು ಪಣ ತೊಟ್ಟಿರುವ ಆಸ್ಟ್ರೇಲಿಯಾ ತಂಡದ ಆಭ್ಯಾಸ ಶಿಬಿರ ಬೆಂಗಳೂರಿನಲ್ಲಿ (Australia training camp in Bangalore) ಗುರುವಾರ ಆರಂಭಗೊಂಡಿದೆ.

ಬೆಂಗಳೂರಿನ ಹೊರವಲಯದ ಆಲೂರಿನಲ್ಲಿರುವ KSCA ಮೈದಾನದಲ್ಲಿ ಆಸ್ಟ್ರೇಲಿಯಾ ತಂಡ ಅಭ್ಯಾಸ ಆರಂಭಿಸಿದೆ. ಭಾರತ ವಿರುದ್ಧ ಸ್ಪಿನ್ ಸವಾಲು ಎದುರಾಗಲಿರುವ ಕಾರಣ ಸ್ಪಿನ್ ಬೌಲಿಂಗನ್ನು ಎದುರಿಸುವ ನಿಟ್ಟಿನಲ್ಲಿ ಕಾಂಗರೂಗಳು ಬೆಂಗಳೂರಿನಲ್ಲಿ ವಿಶೇಷ ಅಭ್ಯಾಸ ನಡೆಸುತ್ತಿದ್ದಾರೆ.

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ ಆಟಗಾರರಿಗೆ ಸ್ಪಿನ್ ಮಾಂತ್ರಿಕ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜ, ಅಕ್ಷರ್ ಪಟೇಲ್ ಮತ್ತು ಕುಲ್ದೀಪ್ ಯಾದವ್ ಅವರ ಸ್ಪಿನ್ ಚಾಲೆಂಜ್ ಎದುರಾಗಲಿದೆ. ಭಾರತದ ಸ್ಪಿನ್ನರ್’ಗಳನ್ನು ಸಮರ್ಥವಾಗಿ ಎದುರಿಸಲು ಪ್ಲಾನ್ ಮಾಡಿರುವ ಆಸ್ಟ್ರೇಲಿಯಾ ಆಟಗಾರರು, ಆಲೂರು ಕ್ರೀಡಾಂಗಣದಲ್ಲಿ ಸಿದ್ಧಪಡಿಸಲಾಗಿರುವ ಎರಡು ಸ್ಪಿನ್ ಪಿಚ್’ಗಳಲ್ಲಿ ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ.ಭಾರತಕ್ಕೆ ಆಗಮಿಸುವ ಮೊದಲು ಆಸೀಸ್ ಆಟಗಾರರು ಸಿಡ್ನಿಯಲ್ಲಿ ವಿಶೇಷ ಸ್ಪಿನ್ ಪಿಚ್ ನಿರ್ಮಿಸಿ 15 ದಿನಗಳ ಕಾಲ ಅಭ್ಯಾಸ ನಡೆಸಿದ್ದರು.

ಇದೇ ವೇಳೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ (India Vs Australia test series) ಆತಿಥೇಯ ಭಾರತ ತಂಡದ ಅಭ್ಯಾಸ ಶಿಬಿರ ಇಂದು ನಾಗ್ಪುರದ ಜಮ್ತಾದಲ್ಲಿರುವ ವಿದರ್ಭ ಕ್ರಿಕೆಟ್ ಸಂಸ್ಥೆ ಮೈದಾನದಲ್ಲಿ ಆರಂಭವಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಡಲಿರುವ ಎಲ್ಲಾ ಆಟಗಾರರು ಟೀಮ್ ಇಂಡಿಯಾ ಟ್ರೈನಿಂಗ್ ಕ್ಯಾಂಪ್’ಗೆ ಹಾಜರಾಗಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದ ನಾಯಕ ರೋಹಿತ್ ಶರ್ಮಾ, ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ಉಪನಾಯಕ ಕೆ.ಎಲ್ ರಾಹುಲ್ ಅಭ್ಯಾಸ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ.

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ವೇಳಾಪಟ್ಟಿ (India Vs Australia (Border-Gavaskar Trophy test series):
ಪ್ರಥಮ ಟೆಸ್ಟ್: ಫೆಬ್ರವರಿ 9-13 (ವಿಸಿಎ ಕ್ರೀಡಾಂಗಣ, ಜಮ್ತಾ; ನಾಗ್ಪುರ)
2ನೇ ಟೆಸ್ಟ್: ಫೆಬ್ರವರಿ 17-21 (ಫಿರೋಜ್ ಶಾ ಕ್ರೀಡಾಂಗಣ, ದೆಹಲಿ)
3ನೇ ಟೆಸ್ಟ್: ಮಾರ್ಚ್ 1-5 (HPCA ಕ್ರೀಡಾಂಗಣ, ಧರ್ಮಶಾಲಾ)
4ನೇ ಟೆಸ್ಟ್: ಮಾರ್ಚ್ 9-13 (ನರೇಂದ್ರ ಮೋದಿ ಕ್ರೀಡಾಂಗಣ, ಅಹ್ಮದಾಬಾದ್)

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳಿಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್ (ಉಪನಾಯಕ), ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆ.ಎಸ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜ, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಇಶಾನ್ ಕಿಶನ್, ಅಕ್ಷರ್ ಪಟೇಲ್, ಶುಭಮನ್ ಗಿಲ್, ಉಮೇಶ್ ಯಾದವ್, ಜೈದೇವ್ ಉನಾದ್ಕಟ್, ಶ್ರೇಯಸ್ ಅಯ್ಯರ್ (2ನೇ ಟೆಸ್ಟ್ ಪಂದ್ಯಕ್ಕೆ ಲಭ್ಯ).

ಇದನ್ನೂ ಓದಿ : Exclusive: ಭಾರತ Vs ಆಸ್ಟ್ರೇಲಿಯಾ ಟೆಸ್ಟ್ ಪಂದ್ಯ ವೀಕ್ಷಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ

ಇದನ್ನೂ ಓದಿ : Shreyas Iyer out : ಭಾರತ Vs ಆಸ್ಟ್ರೇಲಿಯಾ ಪ್ರಥಮ ಟೆಸ್ಟ್‌ನಿಂದ ಶ್ರೇಯಸ್ ಅಯ್ಯರ್ ಔಟ್, ಸೂರ್ಯ ಪದಾರ್ಪಣೆ!

ಇದನ್ನೂ ಓದಿ : ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ: ಬೆಂಗಳೂರಲ್ಲಿ ಕಾಂಗರೂಗಳ ಟ್ರೈನಿಂಗ್ ಕ್ಯಾಂಪ್, ನಾಗ್ಪುರದಲ್ಲಿ ಟೀಮ್ ಇಂಡಿಯಾ ಅಭ್ಯಾಸ ಶಿಬಿರ

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಆಡಲಿರುವ ಆಸ್ಟ್ರೇಲಿಯಾ ತಂಡ:
ಪ್ಯಾಟ್ ಕಮಿನ್ಸ್ (ನಾಯಕ), ಸ್ಟೀವನ್ ಸ್ಮಿತ್ (ಉಪನಾಯಕ), ಡೇವಿಡ್ ವಾರ್ನರ್, ಮ್ಯಾಟ್ ರೆನ್’ಶಾ, ಮಾರ್ನಸ್ ಲಬುಶೇನ್, ಅಲೆಕ್ಸ್ ಕ್ಯಾರಿ, ಸ್ಕಾಟ್ ಬೊಲಾಂಡ್, ಕ್ಯಾಮರೂನ್ ಗ್ರೀನ್, ಪೀಟರ್ ಹ್ಯಾಂಡ್ಸ್’ಕಾಂಬ್, ಜೋಶ್ ಹೇಜಲ್’ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜ, ನೇಥನ್ ಲಯಾನ್, ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್.

Exclusive: Australia training camp in Bangalore: Alur hospitality for Australia practice; Kangaroo martial arts training has started in Bangalore

Comments are closed.