ಭಾರತದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (IPL) 2027ರ ಸೀಸನ್ನ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಡಿಸೆಂಬರ್ 16, 2026ರಂದು ಗೋವಾದಲ್ಲಿ ನಡೆಯಲಿರುವ ಮಿನಿ ಹರಾಜಿಗೆ ಎಲ್ಲಾ 10 ಫ್ರಾಂಚೈಸಿಗಳು ಸಿದ್ಧತೆ ಆರಂಭಿಸಿವೆ. ಇದರ ನಡುವೆ, ಮುಂಬೈ ಇಂಡಿಯನ್ಸ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಭವಿಷ್ಯದ ಬಗ್ಗೆ ಭಾರಿ ಚರ್ಚೆಗಳು ನಡೆಯುತ್ತಿವೆ. ವರದಿಗಳ ಪ್ರಕಾರ, ಹಾರ್ದಿಕ್ ಪಾಂಡ್ಯ IPL 2027ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕತ್ವ ವಹಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಐಪಿಎಲ್ 2027ರ ಟ್ರೇಡ್ ವಿಂಡೋ ಆರಂಭವಾದ ಬಳಿಕ ಹಾರ್ದಿಕ್ ಪಾಂಡ್ಯ ಕುರಿತ ಚರ್ಚೆಗಳು ಮತ್ತಷ್ಟು ವೇಗ ಪಡೆದುಕೊಂಡಿವೆ. ಹಲವು ಫ್ರಾಂಚೈಸಿಗಳು ಮುಂಬೈ ಇಂಡಿಯನ್ಸ್ ಆಟಗಾರನನ್ನು ತಮ್ಮ ತಂಡಕ್ಕೆ ಸೇರಿಸಿಕೊಳ್ಳುವ ಬಗ್ಗೆ ಆಸಕ್ತಿ ತೋರಿವೆ ಎನ್ನಲಾಗಿದೆ.
ಐದು ಬಾರಿ ಐಪಿಎಲ್ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್ ತಂಡ ಮತ್ತೊಂದು ನಿರಾಶಾದಾಯಕ ಸೀಸನ್ ಎದುರಿಸಿದ ಬಳಿಕ ಹಾರ್ದಿಕ್ ಪಾಂಡ್ಯ ಅವರ ಭವಿಷ್ಯದ ಬಗ್ಗೆ ಪ್ರಶ್ನೆಗಳು ಎದ್ದಿವೆ. IPL 2026ರಲ್ಲಿ ಮುಂಬೈ ಇಂಡಿಯನ್ಸ್ 14 ಲೀಗ್ ಪಂದ್ಯಗಳಲ್ಲಿ ಕೇವಲ ನಾಲ್ಕು ಪಂದ್ಯಗಳನ್ನು ಗೆದ್ದು, ಅಂಕಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ತೃಪ್ತಿಪಟ್ಟಿತ್ತು.
ಗುಜರಾತ್ ಟೈಟಾನ್ಸ್ ತಂಡದಿಂದ ನವೆಂಬರ್ನಲ್ಲಿ ಮುಂಬೈ ಇಂಡಿಯನ್ಸ್ಗೆ ಮರಳಿದ್ದ ಹಾರ್ದಿಕ್ ಪಾಂಡ್ಯ, ರೋಹಿತ್ ಶರ್ಮಾ ಬದಲಿಗೆ ತಂಡದ ನಾಯಕನಾಗಿ ನೇಮಕಗೊಂಡಿದ್ದರು. ಮುಂಬೈ ಇಂಡಿಯನ್ಸ್ 16.35 ಕೋಟಿಗೆ ರುಪಾಯಿ ನೀಡಿ ಖರೀದಿಸಿದರು IPL 2026ರಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲರಾಗಿದ್ದರು. ಅವರು 10 ಪಂದ್ಯಗಳಲ್ಲಿ 138.25 ಸ್ಟ್ರೈಕ್ ರೇಟ್ ಜೊತೆಗೆ 206 ರನ್ ಗಳಿಸಿದ್ದು, ನಾಲ್ಕು ವಿಕೆಟ್ ಪಡೆದಿದ್ದರು.
ಇದರ ನಡುವೆ, ಮುಂಬೈ ಇಂಡಿಯನ್ಸ್ ಶನಿವಾರ ಮುಖ್ಯ ಕೋಚ್ ಮಹೇಲ ಜಯವರ್ಧನೆ ಅವರು ತಂಡದಿಂದ ಕೆಳಗಿಳಿಯಲಿದ್ದಾರೆ ಎಂದು ಅಧಿಕೃತವಾಗಿ ಘೋಷಿಸಿದೆ. ಕೋಚಿಂಗ್ ಬದಲಾವಣೆಯ ನಡುವೆಯೇ, ಹಾರ್ದಿಕ್ ಪಾಂಡ್ಯ ಅವರನ್ನು ಟ್ರೇಡ್ ಮಾಡುವ ಕುರಿತು ಮುಂಬೈ ಇಂಡಿಯನ್ಸ್ ಹಲವು ತಂಡಗಳೊಂದಿಗೆ ಪ್ರಾಥಮಿಕ ಮಾತುಕತೆ ನಡೆಸಿದೆ ಎಂಬ ವರದಿಗಳು ಹೊರಬಿದ್ದಿವೆ.
ಎಲ್ಲಾ ಐಪಿಎಲ್ ತಂಡಗಳು ನವೆಂಬರ್ 15ರೊಳಗೆ ತಮ್ಮ ಆಟಗಾರರ ರಿಟೆನ್ಷನ್ ಪಟ್ಟಿಯನ್ನು ಸಲ್ಲಿಸಬೇಕು. ಡಿಸೆಂಬರ್ನಲ್ಲಿ ನಡೆಯುವ ಆಟಗಾರರ ಹರಾಜಿಗೆ ಒಂದು ವಾರ ಮುಂಚಿತವಾಗಿ ಟ್ರೇಡ್ ವಿಂಡೋ ಮುಚ್ಚಲಿದೆ.
ಇನ್ನು ಭಾರತದ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಯೂಟ್ಯೂಬ್ ಚಾನೆಲ್ನಲ್ಲಿ ಮಾತನಾಡಿ, ಹಾರ್ದಿಕ್ ಪಾಂಡ್ಯ ಲಭ್ಯರಾದರೆ ಅವರನ್ನು ಖರೀದಿಸಲು ರಾಜಸ್ಥಾನ್ ರಾಯಲ್ಸ್ ಮುಂಚೂಣಿಯಲ್ಲಿದೆ ಎಂದು ಹೇಳಿದ್ದಾರೆ. ಹಾಗೆಯೇ ನನಗೆ ತಿಳಿದಿರುವ ಮಟ್ಟಿಗೆ ಹಾರ್ದಿಕ್ ಪಾಂಡ್ಯ ಅವರನ್ನು ಪಡೆಯುವ ವಿಚಾರದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವೇ ಮೊದಲ ಸ್ಥಾನದಲ್ಲಿದೆ” ಎಂದು ಹೇಳಿದ್ದಾರೆ.
ಆದರೆ, ಹಾರ್ದಿಕ್ ಪಾಂಡ್ಯ ಟ್ರೇಡ್ ಕುರಿತಾಗಿ ಮುಂಬೈ ಇಂಡಿಯನ್ಸ್ ಅಥವಾ ರಾಜಸ್ಥಾನ್ ರಾಯಲ್ಸ್ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.
ಕೆಲವು ತಿಂಗಳ ಹಿಂದೆ ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ಯಶಸ್ವಿ ಜೈಸ್ವಾಲ್ ಅವರ ಕುರಿತಂತೆ ಮಾತುಕತೆ ನಡೆದಿತ್ತು ಎಂಬ ವರದಿಗಳೂ ಬಂದಿದ್ದವು. ಆದರೆ ಆ ಚರ್ಚೆಗಳು ಮುಂದುವರಿಯಲಿಲ್ಲ. ಸದ್ಯ ಜೈಸ್ವಾಲ್ ಕನಿಷ್ಠ ಇನ್ನೊಂದು ಸೀಸನ್ವರೆಗೆ ರಾಜಸ್ಥಾನ್ ರಾಯಲ್ಸ್ ಒಪ್ಪಂದದಲ್ಲಿದ್ದಾರೆ.
ಹಾರ್ದಿಕ್ ಪಾಂಡ್ಯ ಮೇಲೆ ಆಸಕ್ತಿ ತೋರಿಸುತ್ತಿರುವ ಏಕೈಕ ತಂಡ ರಾಜಸ್ಥಾನ್ ರಾಯಲ್ಸ್ ಅಲ್ಲ. ಅಜಿಂಕ್ಯ ರಹಾನೆ ನಿವೃತ್ತಿಯ ಬಳಿಕ ಕೋಲ್ಕತ್ತಾ ನೈಟ್ ರೈಡರ್ಸ್ (KKR) ಹೊಸ ನಾಯಕನ ಹುಡುಕಾಟದಲ್ಲಿದ್ದು, ಹಾರ್ದಿಕ್ ಅವರನ್ನು ಗುರಿಯಾಗಿಸಿಕೊಂಡಿದೆ ಎನ್ನಲಾಗಿದೆ.
ಇದೇ ವೇಳೆ, ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವೂ ಮುಂದಿನ ಸೀಸನ್ಗೆ ನಾಯಕತ್ವದ ಆಯ್ಕೆಗಳನ್ನು ಪರಿಶೀಲಿಸುತ್ತಿದ್ದು, ನಾಯಕ ಹಾರ್ದಿಕ್ ಪಾಂಡ್ಯ ಅವರ ಹೆಸರನ್ನು ಪರಿಗಣಿಸುತ್ತಿದೆ ಎಂಬ ವರದಿಗಳು ಹರಿದಾಡುತ್ತಿವೆ.