ಮುಂಬೈ : ಟೆಸ್ಟ್, ಏಕದಿನ ಹಾಗೂ ಟಿ20 ಐಸಿಸಿ ಅಂತರಾಷ್ಟ್ರೀಯ ರಾಂಕಿಂಗ್ (ICC Cricket Ranking ) ಪಟ್ಟಿಯಲ್ಲಿಇದೀಗ ಭಾರತವೇ ನಂ.1 ಪಟ್ಟವನ್ನು ಗಿಟ್ಟಿಸಿಕೊಂಡಿದೆ. ಆಸ್ಟ್ರೇಲಿಯಾ ವಿರುದ್ದದ ಸರಣಿಯ ಮೊದಲ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ನೇತೃತ್ವದ ತಂಡ ಸುಲಭ ಗೆಲುವು ದಾಖಲಿಸುತ್ತಿದ್ದಂತೆಯೇ ಭಾರತ ಏಕದಿನ ಕ್ರಿಕೆಟ್‌ನಲ್ಲಿಯೂ ಅಗ್ರಸ್ಥಾನಕ್ಕೇರಿದೆ.
ಪಾಕಿಸ್ತಾನ ತಂಡ ಏಕದಿನ ಕ್ರಿಕೆಟ್‌ನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿತ್ತು. ಆದರೆ ಆಸ್ಟ್ರೇಲಿಯಾ ವಿರುದ್ದ ಗೆಲುವು ಸಾಧಿಸುತ್ತಿದ್ದಂತೆಯೇ ಭಾರತ ತಂಡ ಪಾಕಿಸ್ತಾನ ತಂಡವನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದೆ. ಭಾರತ 116 ಅಂಕಗಳನ್ನು ಪಡೆದುಕೊಂಡಿದ್ರೆ ಪಾಕಿಸ್ತಾನ ತಂಡ 115 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಉಳಿದಂತೆ 111 ಅಂಕಗಳೊಂದಿಗೆ ಆಸ್ಟ್ರೇಲಿಯಾ 3, 106 ಅಂಕಗಳೊಂದಿಗೆ ದಕ್ಷಿಣ ಆಫ್ರಿಕಾ 4 ಹಾಗೂ 105 ಅಂಕಗಳೊಂದಿಗೆ ಇಂಗ್ಲೆಂಡ್ ತಂಡ 5ನೇ ಸ್ಥಾನದಲ್ಲಿದೆ.
ಆಸ್ಟ್ರೇಲಿಯಾ ವಿರುದ್ದದ ಉಳಿದ ಎರಡು ಪಂದ್ಯಗಳಲ್ಲಿಯೂ ಭಾರತ ಸೋಲನ್ನು ಅನುಭವಿಸಿದ್ರೆ ಪಾಕಿಸ್ತಾನ ಮತ್ತೆ ಏಕದಿನ ಕ್ರಿಕೆಟ್‌ನಲ್ಲಿ ಅಗ್ರಸ್ಥಾನಕ್ಕೆ ಏರಲಿದೆ. ಒಂದೊಮ್ಮೆ ಭಾರತವೇ ಗೆಲುವು ದಾಖಲಿಸಿ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ್ರೆ ಭಾರತದ ನಂ.1 ಪಟ್ಟವನ್ನು ಸದ್ಯಕ್ಕೆ ಯಾರಿಂದಲೂ ಕಸಿಯಲು ಸಾಧ್ಯವಿಲ್ಲ.
Tests ✅
T20Is ✅
ODIs ✅India have become the No.1 ranked team across all formats in the @mrfworldwide ICC Men's Team Rankings.
Details ➡️ https://t.co/B5V0PSe5CM pic.twitter.com/wrrY4WDvH9
— ICC (@ICC) September 23, 2023
ಟೆಸ್ಟ್ ನಲ್ಲೂ ಭಾರತ ನಂ.1
ಇನ್ನು ಟೆಸ್ಟ್ ಕ್ರಿಕೆಟ್‌ನಲ್ಲಿಯೂ ಭಾರತೀಯರು ನಂ.1 ಪಟ್ಟವನ್ನು ಅಲಂಕರಿಸಿದ್ದಾರೆ. ರಾಂಕಿಂಗ್ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಹಾಗೂ ಭಾರತ ತಲಾ 118 ಅಂಕಗಳನ್ನು ಪಡೆದುಕೊಂಡಿದ್ದಾರೆ. ಆದರೆ ಭಾರತ ಅಗ್ರಸ್ಥಾನವನ್ನು ಅಲಂಕರಿಸಿದ್ದು, ಆಸ್ಟ್ರೇಲಿಯಾ ಎರಡನೇ ಸ್ಥಾನದಲ್ಲಿದೆ. ಉಳಿದಂತೆ 115 ಅಂಕಗಳೊಂದಿಗೆ ಇಂಗ್ಲೆಂಡ್ 3, 104 ಅಂಕಗಳೊಂದಿಗೆ ದಕ್ಷಿಣ ಆಫ್ರಿಕಾ 4 ಹಾಗೂ 100 ಅಂಕಗಳೊಂದಿಗೆ ನ್ಯೂಜಿಲೆಂಡ್ 5ನೇ ಸ್ಥಾನದಲ್ಲಿದೆ.
ಇದನ್ನೂ ಓದಿ : ಶುಭಮನ್ ಗಿಲ್ ಆಕರ್ಷಕ ಅರ್ಧ ಶತಕ : ಕೊನೆಗೂ ಈಡೇರಿತು ಗಿಲ್ ಕನಸು
ಟಿ20 ಕ್ರಿಕೆಟ್‌ನಲ್ಲಿ ಭಾರತವೇ ನಂ.1
ಭಾರತ ತಂಡ ಟೆಸ್ಟ್, ಏಕದಿನ ಕ್ರಿಕೆಟ್ ಮಾತ್ರವಲ್ಲ ಟಿ20 ಕ್ರಿಕೆಟ್‌ನಲ್ಲಿಯೂ ನಂ.1 ಸ್ಥಾನಕ್ಕೇರಿದೆ. ವಿಶ್ವ ಟಿ20 ರಾಂಕಿಂಗ್‌ನಲ್ಲಿ ಭಾರತ 264 ಅಂಕಗಳನ್ನು ಪಡೆಯುವ ಮೂಲಕ ನಂ.1 ಸ್ಥಾನವನ್ನು ಪಡೆದುಕೊಂಡಿದೆ. ಉಳಿದಂತೆ 261 ಅಂಕ ಪಡೆದಿರುವ ಇಂಗ್ಲೆಂಡ್ 2ನೇ ಸ್ಥಾನ, 254 ಅಂಕಗಳೊಂದಿಗೆ ಪಾಕಿಸ್ತಾನ 3ನೇ ಸ್ಥಾನ, 254 ಅಂಕ ಪಡೆದಿರುವ ನ್ಯೂಜಿಲೆಂಡ್ 4ನೇ ಸ್ಥಾನ ಹಾಗೂ 251 ಅಂಕ ಪಡೆದಿರುವ ದಕ್ಷಿಣ ಆಫ್ರಿಕಾ ತಂಡ 5ನೇ ಸ್ಥಾನವನ್ನು ಪಡೆದುಕೊಂಡಿದೆ.
ಟಿ20ಯಲ್ಲಿ ಸೂರ್ಯಕುಮಾರ್ ಯಾದವ್ ನಂ.1 ಆಟಗಾರ
ಕೇವಲ ಭಾರತ ತಂಡ ಮೂರು ಫಾರ್ಮೆಟ್‌ಗಳಲ್ಲಿಯೂ ನಂ.1 ಸ್ಥಾನಕ್ಕೆ ಏರಿದ್ದು ಮಾತ್ರವಲ್ಲ, ಆಟಗಾರರು ಕೂಡ ನಂ.1 ಸ್ಥಾನವನ್ನು ಪಡೆದುಕೊಂಡಿದ್ದಾರೆ. ಭಾರತ ತಂಡದ ಮಧ್ಯಮ ಕ್ರಮಾಂಕದ ಆಟಗಾರ ಸೂರ್ಯಕುಮಾರ್ ಯಾದವ್ ಟಿ೨೦ ಕ್ರಿಕೆಟ್‌ನಲ್ಲಿ ಅಗ್ರಸ್ಥಾನ ಪಡೆದುಕೊಂಡಿದ್ದಾರೆ.
ಸೂರ್ಯಕುಮಾರ್ ಯಾದವ್ 889 ಅಂಕಗಳೊಂದಿಗೆ ನಂ.1 ಸ್ಥಾನದಲ್ಲಿದ್ರೆ, ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ 810 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿ ದ್ದಾರೆ. ಉಳಿದಂತೆ ಪಾಕಿಸ್ತಾನದ ಬಾಬರ್ ಅಜಮ್ 756 ಅಂಕಗಳೊಂದಿಗೆ 3ನೇ ಸ್ಥಾನ, ದಕ್ಷಿಣ ಆಫ್ರಿಕಾದ ಎ ಮಕರಮ್ 756 ಅಂಕಗಳೊಂದಿಗೆ 4 ನೇ ಸ್ಥಾನ ಹಾಗೂ ದಕ್ಷಿಣ ಆಫ್ರಿಕಾದ ರಿಲೀ ರೋಸೌವ್ 702 ಅಂಕಗಳೊಂದಿಗೆ 5 ನೇ ಸ್ಥಾನದಲ್ಲಿದ್ದಾರೆ.
ಹಾರ್ದಿಕ್ ಪಾಂಡ್ಯ ವಿಶ್ವದ ನಂ.2 ಆಲ್‌ರೌಂಡರ್
ಟಿ20 ಕ್ರಿಕೆಟ್ ನಲ್ಲಿ ಭಾರತ ತಂಡದ ಖ್ಯಾತ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಇದೀಗ ವಿಶ್ವದ ನಂ.2 ನೇ ಆಲ್‌ರೌಂಡರ್ ಸ್ಥಾನ ಪಡೆದುಕೊಂಡಿದ್ದಾರೆ. ಬಾಂಗ್ಲಾದೇಶದ ತಂಡದ ಆಲ್‌ರೌಂಡರ್ ಆಟಗಾರ ಶಕಿಬ್ ಅಲ್ ಹಸನ್ ವಿಶ್ವದ ನಂ.1 ಆಲ್‌ರೌಂಡರ್ ಸ್ಥಾನ ಪಡೆದುಕೊಂಡಿದ್ದಾರೆ. ಅಫ್ಗಾನಿಸ್ತಾನದ ಮೊಹಮ್ಮದ್ ನಬಿ 3ನೇ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
ಆದರೆ ಟಿ20 ಬೌಲಿಂಗ್‌ನಲ್ಲಿ ಭಾರತದ ಯಾವೊಬ್ಬ ಆಟಗಾರರು ಕೂಡ ಟಾಪ್ 10 ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ. ಅಪ್ಘಾನಿಸ್ತಾನದ ಖ್ಯಾತ ಸ್ಪಿನ್ನರ್ ರಶೀದ್ ಖಾನ್ ಟಿ20 ಕ್ರಿಕೆಟ್‌ನಲ್ಲಿ ವಿಶ್ವದ ನಂ.1 ಬೌಲರ್ ಎನಿಸಿಕೊಂಡಿದ್ದಾರೆ. ಶ್ರೀಲಂಕಾದ ವನಿಂದು ಹಸರಂಗ 2ನೇ ಸ್ಥಾನ, ಮಹೇಶ್ ತೀಕ್ಷಣಾ 3ನೇ ಸ್ಥಾನ ಪಡೆದುಕೊಂಡಿದ್ದಾರೆ. ಭಾರತದ ಅರ್ಷದೀಪ್ ಸಿಂಗ್ 20ನೇ ಸ್ಥಾನ ಹಾಗೂ ಭುವನೇಶ್ವರ್ ಕುಮಾರ್ 25ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

ಏಕದಿನ ಕ್ರಿಕೆಟ್‌ನಲ್ಲಿ ಶುಭಮನ್ ಗಿಲ್ ವಿಶ್ವದ ನಂ.2 ಆಟಗಾರ
ಏಕದಿನ ಕ್ರಿಕೆಟ್‌ನಲ್ಲಿ ಭಾರತ ತಂಡದ ಯುವ ಆರಂಭಿಕ ಆಟಗಾರ ಶುಭಮನ್ ಗಿಲ್ ವಿಶ್ವದ 2ನೇ ಆಟಗಾರ ಅನ್ನೋ ಖ್ಯಾತಿಗೆ ಪಾತ್ರರಾಗಿದ್ದಾರೆ. ಪಾಕಿಸ್ತಾನದ ಬಾಬರ್ ಅಜಂ ಸದ್ಯ 877 ಅಂಕಗಳನ್ನು ಪಡೆಯುವ ಮೂಲಕ ನಂ.1 ಸ್ಥಾನದಲ್ಲಿದ್ರೆ, 814 ಅಂಕಗಳನ್ನು ಪಡೆಯುವ ಮೂಲಕ ಶುಭಮನ್ ಗಿಲ್ 2ನೇ ಸ್ಥಾನಲ್ಲಿದ್ದಾರೆ.
ಇದನ್ನೂ ಓದಿ : Times Emerging Leaders ಪಟ್ಟಿಯಲ್ಲಿ ಹರ್ಮನ್ ಪ್ರೀತ್ ಕೌರ್, ಆದರೆ ವಿರಾಟ್ ಕೊಹ್ಲಿಗಿಲ್ಲ ಸ್ಥಾನ
No. 1 Test team ☑️
No. 1 ODI team ☑️
No. 1 T20I team ☑️#TeamIndia reigns supreme across all formats 👏👏 pic.twitter.com/rB5rUqK8iH— BCCI (@BCCI) September 22, 2023
ಪಾಕಿಸ್ತಾನ ತಂಡದ ಇಮಾಮ್ ಉಲ್ ಹಕ್ 728 ಅಂಕಗಳೊಂದಿಗೆ 3 ನೇ ಸ್ಥಾನದಲ್ಲಿದ್ರೆ, ಐರ್ಲೆಂಡ್‌ನ ಹೆರ್ರಿ ಟ್ಯಾಕ್ಟರ್ 726 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿದ್ದಾರೆ. ಇನ್ನು 708 ಅಂಕಗಳೊಂದಿಗೆ ಭಾರತ ಆಟಗಾರ ವಿರಾಟ್ ಕೊಹ್ಲಿ 8ನೇ ಸ್ಥಾನ, 696 ಅಂಕಗಳೊಂದಿಗೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ 10 ನೇ ಸ್ಥಾನ ಪಡೆದುಕೊಂಡಿದ್ದಾರೆ.

ಏಕದಿನ ಕ್ರಿಕೆಟ್ ಬೌಲಿಂಗ್ ನಲ್ಲಿ ಮೊಹಮ್ಮದ್ ಸಿರಾಜ್ ನಂ.1
ಏಕದಿನ ಕ್ರಿಕೆಟ್‌ನಲ್ಲಿ ಭಾರತೀಯ ಬೌಲರ್ ಮೊಹಮ್ಮದ್ ಸಿರಾಜ್ ಇದೀಗ ವಿಶ್ವದ ನಂ.1 ಬೌಲರ್ ಆಗಿ ಹೊರಹೊಮ್ಮಿದ್ದಾರೆ. ಮೊಹಮ್ಮದ್ ಸಿರಾಜ್ 694 ಅಂಕಗಳನ್ನು ಪಡೆದುಕೊಂಡಿದ್ರೆ ಆಸ್ಟ್ರೇಲಿಯಾದ ಹಜಲ್ ವುಡ್ 678 ಅಂಕಗಳೊಂದಿಗೆ 2ನೇ ಸ್ಥಾನ ಹಾಗೂ ನ್ಯೂಜಿಲೆಂಡ್‌ನ ಟ್ರೆಂಟ್ ಬೋಲ್ಟ್ 677 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದ್ದಾರೆ.
ಇನ್ನು ಏಕದಿನ ಆಲ್‌ರೌಂಡರ್ ರಾಂಕಿಂಗ್‌ನಲ್ಲಿ ಮತ್ತೆ ಬಾಂಗ್ಲಾದೇಶದ ಶಕಿಬ್ ಅಲ್ ಹಸನ್ ನಂ.1 ಸ್ಥಾನಕ್ಕೇರಿದ್ದಾರೆ. ಎರಡನೇ ಸ್ಥಾನದಲ್ಲಿ ಅಪ್ಘಾನಿಸ್ತಾನದ ಮೊಹಮ್ಮದ್ ನಬಿ, ಜಿಂಬಾಬ್ವೆಯ ಸಿಕಂದರ್ ರಾಜಾ 3ನೇ ಸ್ಥಾನ ಹಾಗೂ ಭಾರತದ ಹಾರ್ದಿಕ್ ಪಾಂಡ್ಯ 6ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಟೆಸ್ಟ್ ರಾಂಕಿಂಗ್‌ನಲ್ಲಿ ರೋಹಿತ್ ಶರ್ಮಾಗೆ 10 ನೇ ಸ್ಥಾನ
ಭಾರತೀಯ ಆಟಗಾರರು ಏಕದಿನ ಹಾಗೂ ಟಿ20 ಕ್ರಿಕೆಟ್‌ನಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಮಾತ್ರ ಹೇಳಿಕೊಳ್ಳುವ ಸಾಧನೆ ಮಾಡಿಲ್ಲ. ನ್ಯೂಜಿಲೆಂಡ್‌ನ ಕೇನ್ ವಿಲಿಯಂಸನ್ 883 ಅಂಕಗಳೊಂದಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ವಿಶ್ವದ ನಂ.1 ಆಟಗಾರ ಎನಿಸಿಕೊಂಡಿದ್ದಾರೆ.
ಇಂಗ್ಲೆಂಡ್ ತಂಡದ ಜೋ ರೂಟ್ 859 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದ್ರೆ, ಆಸ್ಟ್ರೇಲಿಯಾ ಸ್ವೀವನ್ ಸ್ಮಿತ್ 842 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದ್ದಾರೆ. ಪಾಕಿಸ್ತಾನದ ಬಾಬರ್ ಅಜಂ 829 ಅಂಕಗಳನ್ನು ಪಡೆದು 4ನೇ ಸ್ಥಾನದಲ್ಲಿದ್ರೆ ಭಾರತ ತಂಡ ನಾಯಕ ರೋಹಿತ್ ಶರ್ಮಾ 759 ಅಂಕಗಳೊಂದಿಗೆ 10ನೇ ಸ್ಥಾನದಲ್ಲಿದ್ದಾರೆ. ಉಳಿದಂತೆ ರಿಷಬ್ ಪಂತ್ 12ನೇ ಹಾಗೂ ವಿರಾಟ್ ಕೊಹ್ಲಿ 14 ನೇ ಸ್ಥಾನದಲ್ಲಿದ್ದಾರೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಅಶ್ವಿನ್ ನಂ.1 ಬೌಲರ್, ಜಡೇಜಾ ನಂ.1 ಆಲ್‌ರೌಂಡರ್
ಟೆಸ್ಟ್ ಕ್ರಿಕೆಟ್‌ನ ರಾಂಕಿಂಗ್ ಪಟ್ಟಿಯಲ್ಲಿ ಭಾರತದ ಇಬ್ಬರು ಆಟಗಾರರು ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ. ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್ ನಲ್ಲಿ ನಂ.1 ಬೌಲರ್ ಆಗಿ ಹೊರಹೊಮ್ಮಿದ್ರೆ, ಆಲ್‌ರೌಂಡರ್ ರಾಂಕಿಂಗ್‌ನಲ್ಲಿ ರವೀಂದ್ರ ಜಡೇಜಾ ನಂ.1 ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಅದ್ರಲ್ಲೂ ಆರ್. ಅಶ್ವಿನ್ ಆಲ್‌ರೌಂಡರ್ ರಾಕಿಂಗ್‌ನಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದ್ರೆ ರವೀಂದ್ರ ಜಡೇಜಾ ಬೌಲಿಂಗ್‌ನಲ್ಲಿ 3ನೇ ರಾಂಕ್ ಪಡೆದಿದ್ದಾರೆ.
ಉಳಿದಂತೆ ಬೌಲಿಂಗ್ ವಿಭಾಗದಲ್ಲಿ ಕಗಿಸೋ ರಬಾಡಾ, 825 ಅಂಕ ಪಡೆಯುವ ಮೂಲಕ 2ನೇ ಸ್ಥಾನದಲ್ಲಿದ್ರೆ ಸ್ಟುವರ್ಟ್ ಬ್ರಾಡ್ 776 ಅಂಕಗಳೊಂದಿಗೆ 4ನೇ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನು ಭಾರತದ ಜಸ್ಪ್ರಿತ್ ಬೂಮ್ರಾ 756 ಅಂಕಗಳೊಂದಿಗೆ 10ನೇ ಸ್ಥಾನ ಹಾಗೂ ಮೊಹಮ್ಮದ್ ಸೆಮಿ 20ನೇ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ಇನ್ನು ಆಲ್‌ರೌಂಡರ್ ವಿಭಾಗದಲ್ಲಿ ರವೀಂದ್ರ ಜಡೇಜಾ 455 ಅಂಕಗಳೊಂದಿಗೆ ನಂ.1 ಸ್ಥಾನದಲ್ಲಿದ್ರೆ, 370 ಅಂಕಗಳೊಂದಿಗೆ ಆರ್.ಅಶ್ವಿನ್ 2ನೇ ಸ್ಥಾನ, ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ 332 ಅಂಕಗಳೊಂದಿಗೆ 3ನೇ ಸ್ಥಾನ, ಇಂಗ್ಲೆಂಡ್‌ನ ಬೆನ್ ಸ್ಟೋಕ್ 307 ಅಂಕಗಳೊಂದಿಗೆ 4ನೇ ಸ್ಥಾನ ಹಾಗೂ ಭಾರತದ ಸ್ಪಿನ್ನರ್ ಅಕ್ಷರ್ ಪಟೇಲ್ 298 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿದ್ದಾರೆ.
ICC Cricket Ranking india No1 Ashwin Siraj Jadeja no1