Ind vs ban 2nd test : 2ನೇ ಟೆಸ್ಟ್‌ನಲ್ಲಿ ಬಾಂಗ್ಲಾ ವಿರುದ್ಧ ರೋಚಕ ಜಯ, ಸರಣಿ 2-0 ಕ್ಲೀನ್ ಸ್ವೀಪ್

ಮೀರ್’ಪುರ: Ind vs ban 2nd test : ಆತಿಥೇಯ ಬಾಂಗ್ಲಾದೇಶ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯವನ್ನು ಭಾರತ 3 ವಿಕೆಟ್’ಗಳಿಂದ ರೋಚಕವಾಗಿ ಗೆದ್ದುಕೊಂಡಿದೆ. ಈ ಮೂಲಕ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಕೆ.ಎಲ್ ರಾಹುಲ್ ನಾಯಕತ್ವದಲ್ಲಿ ಟೀಮ್ ಇಂಡಿಯಾ 2-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ. ಇದರೊಂದಿಗೆ ಏಕದಿನ ಸರಣಿ ಸೋಲಿಗೆ ಭಾರತ ಸೇಡು ತೀರಿಸಿಕೊಂಡಿತ್ತು. 3 ಪಂದ್ಯಗಳ ಏಕದಿನ ಸರಣಿಯನ್ನು ಬಾಂಗ್ಲಾದೇಶ 2-1ರ ಅಂತರದಲ್ಲಿ ಗೆದ್ದುಕೊಂಡಿತ್ತು.

ಶೇರ್ ಎ ಬಾಂಗ್ಲಾ ನ್ಯಾಷನಲ್ ಕ್ರೀಡಾಂಗಣದಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಗೆಲ್ಲಲು 145 ರನ್’ಗಳ ಗುರಿ ಬೆನ್ನಟ್ಟಿದ ಭಾರತ 3ನೇ ದಿನದಂತ್ಯಕ್ಕೆ 45 ರನ್ನಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. 4ನೇ ದಿನ ಆಟ ಮುಂದುವರಿಸಿದ ಟೀಮ್ ಇಂಡಿಯಾ 74 ರನ್ ಗಳಿಸುವಷ್ಟರಲ್ಲಿ 7 ವಿಕೆಟ್ ಕಳೆದುಕೊಂಡಿತು. 4ನೇ ಕ್ರಮಾಂಕದಲ್ಲಿ ಕ್ರೀಸ್’ಗಿಳಿಸಿದ್ದ ಆಲ್ರೌಂಡರ್ ಅಕ್ಷರ್ ಪಟೇಲ್ ಅಮೂಲ್ಯ 34 ರನ್ ಗಳಿಸಿ ಔಟಾದ್ರೆ, ರಿಷಭ್ ಪಂತ್ 9 ರನ್ನಿಗೆ ವಿಕೆಟ್ ಒಪ್ಪಿಸಿದರು.

74 ರನ್ನಿಗೆ 7 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಭಾರತಕ್ಕೆ ಶ್ರೇಯಸ್ ಅಯ್ಯರ್ ಮತ್ತು ರವಿಚಂದ್ರನ್ ಅಶ್ವಿನ್ ಆಸರೆಯಾದರು. ಈ ಜೋಡಿ ಮುರಿಯದ 8ನೇ ವಿಕೆಟ್’ಗೆ 71 ರನ್ ಸೇರಿಸಿ ಭಾರತವನ್ನು ಗೆಲುವಿನ ದಡ ಸೇರಿಸಿತು. 8ನೇ ಕ್ರಮಾಂಕದಲ್ಲಿ ಕ್ರೀಸ್’ಗಿಳಿದ ಶ್ರೇಯಸ್ ಅಯ್ಯರ್ ಅಜೇಯ 29 ರನ್ ಗಳಿಸಿದ್ರೆ, 9ನೇ ಕ್ರಮಾಂಕದಲ್ಲಿ ಮೈದಾನಕ್ಕಿಳಿದ ಅಶ್ವಿನ್ ಅತ್ಯಂತ ಒತ್ತಡದ ಸನ್ನಿವೇಶದಲ್ಲಿ ತಮ್ಮೆಲ್ಲಾ ಅನುಭವವನ್ನು ಧಾರೆ ಎರೆದು 62 ಎಸೆತಗಳಲ್ಲಿ 4 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ ಅಜೇಯ 42 ರನ್ ಗಳಿಸಿ ತಂಡದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದರು.

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ್ದ ಬಾಂಗ್ಲಾದೇಶ ತನ್ನ ಪ್ರಥಮ ಇನ್ನಿಂಗ್ಸ್’ನಲ್ಲಿ 227 ರನ್ ಗಳಿಸಿದ್ರೆ, ಭಾರತ ತನ್ನ ಪ್ರಥಮ ಇನ್ನಿಂಗ್ಸ್’ನಲ್ಲಿ 314 ರನ್ ಗಳಿಸಿ 87 ರನ್’ಗಳ ಅಮೂಲ್ಯ ಮುನ್ನಡೆ ಸಾಧಿಸಿತ್ತು. ನಂತರ ಬಾಂಗ್ಲಾದೇಶ ತನ್ನ 2ನೇ ಇನ್ನಿಂಗ್ಸ್’ನಲ್ಲಿ 231 ರನ್ ಗಳಿಸಿ ಭಾರತಕ್ಕೆ 145 ರನ್’ಗಳ ಗೆಲುವಿನ ಗುರಿ ನೀಡಿತ್ತು. ಪಂದ್ಯದಲ್ಲಿ ಒಟ್ಟು 6 ವಿಕೆಟ್ ಹಾಗೂ 54 ರನ್ ಗಳಿಸಿ ಭಾರತ ಗೆಲುವಿಗೆ ಕಾರಣರಾದ ರವಿಚಂದ್ರನ್ ಅಶ್ವಿನ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಇದನ್ನೂ ಓದಿ : Sreyas Gopal IPL: ಶ್ರೇಯಸ್ ಗೋಪಾಲ್ ಐಪಿಎಲ್ ಕರಿಯರ್‌ಗೆ ಕೊಳ್ಳಿ ಇಟ್ಟವರು ನಮ್ಮವರೇ!

ಇದನ್ನೂ ಓದಿ : KL Rahul Out : ಕಳಪೆ ಫಾರ್ಮ್‌ಗೆ ಸಿಗಲಿದೆ ಗೇಟ್ ಪಾಸ್ ಶಿಕ್ಷೆ, ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಕೆ.ಎಲ್ ರಾಹುಲ್ ಔಟ್ ?

Ind vs ban 2nd test Live india beat Bangladesh by 3 wicket Series win by 2-0

Comments are closed.