Sanju Samson VC: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಸಂಜು ಸ್ಯಾಮ್ಸನ್ ಉಪನಾಯಕ; ಆರ್‌ಸಿಬಿ ಸ್ಟಾರ್‌ಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ?

ಬೆಂಗಳೂರು: ಪ್ರವಾಸಿ ದಕ್ಷಿಣ ಆಫ್ರಿಕಾ (IND vs SA ODI 2022) ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಗೆ ಕೇರಳದ ವಿಕೆಟ್ ಕೀಪರ್ ಬ್ಯಾಟ್ಸ್’ಮನ್ ಸಂಜು ಸ್ಯಾಮ್ಸನ್ (Sanju Samson VC) ಭಾರತ ತಂಡದ ಉಪನಾಯಕನಾಗಿ ನೇಮಕಗೊಳ್ಳುವ ಸಾಧ್ಯತೆಯಿದೆ. ನ್ಯೂಜಿಲೆಂಡ್ ‘ಎ’ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ‘ಎ’ ತಂಡದ (Indian cricket team)ನಾಯಕತ್ವ ವಹಿಸಿದ್ದ ಸ್ಯಾಮ್ಸನ್, ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದ್ದರು.

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ (India Vs South Africa ODI Series) ಅನುಭವಿ ಎಡಗೈ ಓಪನರ್ ಶಿಖರ್ ಧವನ್ (Shikhar Dhwan) ಟೀಮ್ ಇಂಡಿಯಾ ನಾಯಕತ್ವ ವಹಿಸಲಿದ್ದು, ಸಂಜು ಸ್ಯಾಮ್ಸನ್’ಗೆ ವೈಸ್ ಕ್ಯಾಪ್ಟನ್ ಪಟ್ಟ ಸಿಗುವುದು ಬಹುತೇಕ ಖಚಿತ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ರಜತ್ ಪಾಟಿದಾರ್ (Rajat Patidar) ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಆಯ್ಕೆ ಮಾಡಲಾಗುವ ಭಾರತ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ ಎನ್ನಲಾಗ್ತಿದೆ. ಐಪಿಎಲ್’ನಲ್ಲಿ ಅಮೋಘ ಪ್ರದರ್ಶನ ತೋರಿರುವ ಪಾಟಿದಾರ್, ದೇಶೀಯ ಕ್ರಿಕೆಟ್ ಹಾಗೂ ಭಾರತ ‘ಎ’ ತಂಡದ ಪರ ಉತ್ತಮ ಆಟವಾಡಿದ್ದಾರೆ. ಹೀಗಾಗಿ ಮಧ್ಯಪ್ರದೇಶದ ಆಟಗಾರನಿಗೆ ಇದೇ ಮೊದಲ ಬಾರಿ ಭಾರತ ತಂಡದಲ್ಲಿ ಸ್ಥಾನ ಸಿಗುವ ನಿರೀಕ್ಷೆಯಿದೆ. ಐಪಿಎಲ್-2022ರ ಟೂರ್ನಿಯ ಪ್ಲೇ ಆಫ್ ಪಂದ್ಯದಲ್ಲಿ ರಜತ್ ಪಾಟಿದಾರ್ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸಿಡಿಲಬ್ಬರದ ಶತಕ ಬಾರಿಸಿ ಗಮನ ಸೆಳೆದಿದ್ದರು.

ದಕ್ಷಿಣ ಆಫ್ರಿಕಾ ವಿರುದ್ಧದ 3 ಪಂದ್ಯಗಳ ಟಿ20 ಸರಣಿ ಮುಗಿದ ಬೆನ್ನಲ್ಲೇ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದ್ದು, ಮೊದಲ ಪಂದ್ಯ ಅಕ್ಟೋಬರ್ 5ರಂದು ಲಕ್ನೋದಲ್ಲಿ ನಡೆಯಲಿದೆ. ಐಸಿಸಿ ಟಿ20 ವಿಶ್ವಕಪ್’ನಲ್ಲಿ ಆಡಲಿರುವ ಭಾರತ ತಂಡದ 15+4 ಮಂದಿ ಆಟಗಾರರು ಈ ಸರಣಿಯಿಂದ ಹೊರಗುಳಿಯಲಿರುವ ಕಾರಣ ಹೊಸ ಆಟಗಾರರಿಗೆ ಅವಕಾಶ ಸಿಗಲಿದೆ. ನ್ಯೂಜಿಲೆಂಡ್ ‘ಎ’ ವಿರುದ್ಧದ ಏಕದಿನ ಸರಣಿಯಲ್ಲಿ ಆಡಿದ್ದ ರುತುರಾಜ್ ಗಾಯಕ್ವಾಡ್, ಅಭಿಮನ್ಯು ಈಶ್ವರನ್, ರಾಹುಲ್ ತ್ರಿಪಾಠಿ, ತಿಲಕ್ ವವರ್ಮಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ರಾಹುಲ್ ಚಹರ್ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಆಡಲಿರುವ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ.

ಇದನ್ನೂ ಓದಿ : BCCI Election : ಅಕ್ಟೋಬರ್ 18ಕ್ಕೆ ಬಿಸಿಸಿಐ ಚುನಾವಣೆ; ಅಮಿತ್ ಶಾ ಮಗ ಅಧ್ಯಕ್ಷರಾದ್ರೆ ದಾದಾ ಕಥೆಯೇನು ?

ಇದನ್ನೂ ಓದಿ : Syed Mushtaq Ali Trophy 2022 : ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿ: ಕರ್ನಾಟಕ ಸಂಭಾವ್ಯ ತಂಡದಿಂದ ಕರುಣ್, ಸಮರ್ಥ್, ಸಿದ್ಧಾರ್ಥ್ ಔಟ್

IND vs SA ODI 2022 Indian cricket team squad Sanju Samson VC

Comments are closed.