India Cricket Team : ಕಿವೀಸ್ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ: ಶಿಖರ್, ಪಾಂಡ್ಯ ಕ್ಯಾಪ್ಟನ್, ರಿಷಬ್ ವೈಸ್ ಕ್ಯಾಪ್ಟನ್

ಬೆಂಗಳೂರು: India Cricket Team : ನ್ಯೂಜಿಲೆಂಡ್ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಗೆ (India tour of New Zeeland) ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತು ಶಿಖರ್ ಧವನ್ ನಾಯಕರಾಗಿ ನೇಮಕಗೊಂಡಿದ್ದು, ವಿಕೆಟ್ ಕೀಪರ್ ರಿಷಭ್ ಪಂತ್ ಉಪನಾಯಕನಾಗಿ ನೇಮಕಗೊಂಡಿದ್ದಾರೆ.

ಟಿ20 ವಿಶ್ವಕಪ್ ಬೆನ್ನಲ್ಲೇ ಭಾರತ ತಂಡ ನ್ಯೂಜಿಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಕಿವೀಸ್ ನಾಡಿನಲ್ಲಿ ಏಕದಿನ ಹಾಗೂ ಟಿ20 ಸರಣಿಗಳನ್ನು ಆಡಲಿದೆ. ಟಿ20 ಸರಣಿಯಲ್ಲಿ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಏಕದಿನ ಸರಣಿಯಲ್ಲಿ ಶಿಖರ್ ಧವನ್ ಭಾರತ ತಂಡದ ನಾಯಕತ್ವ ವಹಿಸಲಿದ್ದಾರೆ. ಇದೇ ವೇಳೆ ಬಾಂಗ್ಲಾದೇಶ ವಿರುದ್ಧದ ಏಕದಿನ ಹಾಗೂ ಟೆಸ್ಟ್ ಸರಣಿಗೂ ಭಾರತ ತಂಡವನ್ನು ಪ್ರಕಟಿಸಲಾಗಿದ್ದು ಎರಡೂ ತಂಡಗಳಿಗೆ ಕನ್ನಡಿಗ ಕೆ.ಎಲ್ ರಾಹುಲ್ ಉಪನಾಯಕರಾಗಿ ಮುಂದುವರಿದಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ (India Vs New Zeeland T20 series):
ಹಾರ್ದಿಕ್ ಪಾಂಡ್ಯ (ನಾಯಕ), ರಿಷಭ್ ಪಂತ್ (ಉಪನಾಯಕ, ವಿಕೆಟ್ ಕೀಪರ್), ಶುಭಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್.

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ (India Vs New Zeeland ODI series):
ಶಿಖರ್ ಧವನ್ (ನಾಯಕ), ರಿಷಭ್ ಪಂತ್ (ಉಪನಾಯಕ, ವಿಕೆಟ್ ಕೀಪರ್), ಶುಭಮನ್ ಗಿಲ್, ದೀಪಕ್ ಹೂಡ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಶಹಬಾಜ್ ಅಹ್ಮದ್, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ದೀಪಕ್ ಚಹರ್, ಕುಲ್ದೀಪ್ ಸೇನ್, ಉಮ್ರಾನ್ ಮಲಿಕ್.

ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ (India Vs Bangladesh ODI series):
ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್ (ಉಪನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಹರ್, ಯಶ್ ದಯಾಳ್.

ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ (India Vs Bangladesh test series):
ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಕೆ.ಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್.

ಇದನ್ನೂ ಓದಿ : India Vs South Africa Match : ಅಂಪೈರ್ ಮರ್ಮಾಂಗಕ್ಕೆ ಗುದ್ದಿದ ಟೀಮ್ ಇಂಡಿಯಾ ಸ್ಪಿನ್ನರ್ ಯುಜ್ವೇಂದ್ರ ಚಹಲ್ : Watch

ಇದನ್ನೂ ಓದಿ : Virat Kohli angry: ಆಸ್ಟ್ರೇಲಿಯಾದಲ್ಲಿ ವಿರಾಟ್ ರೂಮ್‌ಗೆ ನುಗ್ಗಿದ ಹುಚ್ಚು ಅಭಿಮಾನಿ, ಕೆಂಡಾಮಂಡಲರಾದ ಕಿಂಗ್ ಕೊಹ್ಲಿ ಮಾಡಿದ್ದೇನು ಗೊತ್ತಾ?

India Cricket Team announce new zealand and Bangladesh tour

Comments are closed.