ಏಕದಿನ ವಿಶ್ವಕಪ್‌ಗೆ ಭಾರತ ತಂಡ ಪ್ರಕಟ : ಕೆಎಲ್‌ ರಾಹುಲ್‌ ಎಂಟ್ರಿ, ಖ್ಯಾತ ಆಟಗಾರರು ಔಟ್‌

ಏಕದಿನ ವಿಶ್ವಕಪ್‌ಗೆ (ODI Worldcup 2023)  ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI) ಭಾರತ ಕ್ರಿಕೆಟ್‌ ತಂಡವನ್ನು  (Indian Cricket Team Selection) ಆಯ್ಕೆ ಮಾಡಿದೆ. ಗಾಯಗೊಂಡು ಹಲವು ಪ್ರಮುಖ ಸರಣಿಗಳನ್ನು ಮಿಸ್‌ ಮಾಡಿಕೊಂಡಿದ್ದ ಕನ್ನಡಿಗ ಕೆಎಲ್‌ ರಾಹುಲ್‌ (KL Rahul)  ಟೀಂ ಇಂಡಿಯಾಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಮುಂಬೈ : ಏಕದಿನ ವಿಶ್ವಕಪ್‌ಗೆ (ODI Worldcup 2023)  ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI) ಭಾರತ ಕ್ರಿಕೆಟ್‌ ತಂಡವನ್ನು  (Indian Cricket Team Selection) ಆಯ್ಕೆ ಮಾಡಿದೆ. ಗಾಯಗೊಂಡು ಹಲವು ಪ್ರಮುಖ ಸರಣಿಗಳನ್ನು ಮಿಸ್‌ ಮಾಡಿಕೊಂಡಿದ್ದ ಕನ್ನಡಿಗ ಕೆಎಲ್‌ ರಾಹುಲ್‌ (KL Rahul)  ಟೀಂ ಇಂಡಿಯಾಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಆದರೆ ಕೇರಳದ ಆಟಗಾರ ಸಂಜು ಸ್ಯಾಮ್ಸನ್‌ (sanju Samson), ತಿಲಕ್‌ ವರ್ಮಾ (Tilak Varma ) ಹಾಗೂ ಪ್ರಸಿದ್ದ ಕೃಷ್ಣ (Prasidh Krishna) ತಂಡದಿಂದ ಹೊರಬಿದ್ದಿದ್ದಾರೆ.

ಬಿಸಿಸಿಐ ಏಕದಿನ ವಿಶ್ವಕಪ್‌ ಗಾಗಿ ಒಟ್ಟು ೧೫ ಮಂದಿಯ ತಂಡವನ್ನು ಆಯ್ಕೆ ಮಾಡಿದೆ. ರೋಹಿತ್‌ ಶರ್ಮಾ (Rohit Sharma) ನಾಯಕನಾಗಿ ಮುಂದುವರಿದ್ರೆ, ಹಾರ್ದಿಕ್‌ ಪಾಂಡ್ಯ ( Hardik Pandy) ಉಪನಾಯಕನಾಗಿದ್ದಾರೆ. ರೋಹಿತ್‌ ಶರ್ಮಾ ಜೊತೆಗೆ ಯುವ ಆಟಗಾರ ಶುಭಮನ್‌ ಗಿಲ್‌ ಇನ್ನಿಂಗ್ಸ್‌ ಆರಂಭಿಸುವುದು ಫಕ್ಕಾ. ಒಂದನೇ ಕ್ರಮಾಂಕದಲ್ಲಿ ವಿರಾಟ್‌ ಕೊಹ್ಲಿ, ಎರಡನೇ ಕ್ರಮಾಂಕದಲ್ಲಿ ಶ್ರೇಯಸ್‌ ಅಯ್ಯರ್‌ ಕಾಣಿಸಿಕೊಂಡಿದ್ದಾರೆ.India s squad for ICC Men s Cricket World Cup 2023 announced Bcci Today KL Rahul In

ಕನ್ನಡಿಗ ಕೆಎಲ್‌ ರಾಹುಲ್‌ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿಯಲಿದ್ದಾರೆ. ಜೊತೆಗೆ ವಿಕೆಟ್‌ ಕೀಪಿಂಗ್‌ ಜವಾಬ್ದಾರಿಯನ್ನು ನಿರ್ವಹಿಸಬೇಕಾಗಿದೆ. ಕೆಎಲ್‌ ರಾಹುಲ್‌ ಎಂಟ್ರಿಯಿಂದ ಇಶಾನ್‌ ಕಿಶನ್‌ ಆಡುವ ಬಳಗದಿಂದ ಹೊರಗುಳಿಯುವ ಸಾಧ್ಯತೆಯಿದೆ. ಉಳಿದಂತೆ ಆಲ್‌ರೌಂಡರ್‌ ಕೋಟಾದಡಿಯಲ್ಲಿ ರವೀಂದ್ರ ಜಡೇಜಾ, ಹಾರ್ದಿಕ್‌ ಪಾಂಡ್ಯ, ಅಕ್ಷರ್‌ ಪಟೇಲ್‌, ಶಾರ್ದೂಲ್‌ ಠಾಕೂರ್‌ ಸ್ಥಾನ ಪಡೆದುಕೊಂಡಿದ್ದಾರೆ.

India s squad for ICC Men s Cricket World Cup 2023 announced Bcci Today KL Rahul In
Image Credit to Original Source

ಉಳಿದಂತೆ ಮೊಹಮ್ಮದ್‌ ಸೆಮಿ, ಜಸ್ಪ್ರಿತ್‌ ಬೂಮ್ರಾ, ಮೊಹಮ್ಮದ್‌ ಸಿರಾಜ್‌ ವೇಗ ಬೌಲರ ಆಗಿದ್ರೆ, ಕುಲದೀಪ್‌ ಯಾದವ್‌ ಸ್ಪಿನ್ನರ್‌ ಕೋಟಾದಡಿ ಕಾಣಿಸಿ ಕೊಂಡಿದ್ದಾರೆ. ಇನ್ನು ಸೂರ್ಯಕುಮಾರ್‌ ಯಾದವ್‌ ತಂಡಕ್ಕೆ ಆಯ್ಕೆಯಾಗಿದ್ದರೂ ಕೂಡ, ಆಡುವ  11ರ  ಬಳಗದಲ್ಲಿ ಕಾಣಿಸಿಕೊಳ್ಳುವುದು ಕಷ್ಟ. ಈಗಾಗಲೇ ಏಷ್ಯಾಕಪ್‌ ತಂಡದಲ್ಲಿ ಸ್ಥಾನ ಪಡೆದಿದ್ದರೂ ಕೂಡ ಇದುವರೆಗೂ ಆಡುವ ಬಳಗದಲ್ಲಿ ಸ್ಥಾನ ಪಡೆದಿಲ್ಲ.

ಇದನ್ನೂ ಓದಿ : Rohit Sharma’s Net Worth: ರೋಹಿತ್ ಶರ್ಮಾ ಎಷ್ಟು ಶ್ರೀಮಂತ ಗೊತ್ತಾ? ಟೀಮ್ ಇಂಡಿಯಾ ನಾಯಕ ಎಷ್ಟು ಕೋಟಿಗಳಿಗೆ ಒಡೆಯ?

ಇನ್ನು ಏಷ್ಯಾಕಪ್‌ ತಂಡದಲ್ಲಿದ್ದ ಸಂಜು ಸ್ಯಾಮ್ಸನ್‌, ತಿಲಕ್‌ ವರ್ಮಾ ಹಾಗೂ ಕನ್ನಡಿಗ ಪ್ರಸಿದ್ದ ಕೃಷ್ಣ ಅವರಿಗೆ ವಿಶ್ವಕಪ್‌ ತಂಡದಿಂದ ಕೋಕ್‌ ನೀಡಲಾಗಿದೆ. ಭಾರತ ಈ ಬಾರಿಯ ಏಕದಿನ ವಿಶ್ವಕಪ್‌ ಆತಿಥ್ಯವನ್ನು ವಹಿಸಿಕೊಂಡಿದೆ. ಭಾರತ ತಂಡದ ತನ್ನ ಮೊದಲ ಪಂದ್ಯವನ್ನು ಅಕ್ಟೋಬರ್‌ ೮ ರಂದು ಆಸ್ಟ್ರೇಲಿಯಾ ವಿರುದ್ದ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಆಡಲಿದೆ.

India s squad for ICC Men s Cricket World Cup 2023 announced Bcci Today KL Rahul In
Image Credit to Original Source

ಇನ್ನು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡ ಹಾಗೂ ಭಾರತ ಅಕ್ಟೋಬರ್‌ 14 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. ಈಗಾಗಲೇ ಭಾರತ ಹಾಗೂ ಪಾಕಿಸ್ತಾನ ತಂಡ ಏಷ್ಯಾಕಪ್‌ನಲ್ಲಿ ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಿದ್ದವು. ಆದರೆ ಮಳೆಯ ಕಾರಣದಿಂದಾಗಿ ಪಂದ್ಯ ರದ್ದಾಗಿತ್ತು. ಆದರೆ ಮುಂದಿನ ಹಂತದಲ್ಲಿ ಎರಡೂ ತಂಡಗಳು ಮತ್ತೆ ಮುಖಾಮುಖಿಯಾಗುವ ಸಾಧ್ಯತೆಯಿದೆ. ಅಲ್ಲದೇ ವಿಶ್ವಕಪ್‌ನಲ್ಲಿಯೂ ಸಾಂಪ್ರದಾಯಿಕ ಎದುರಾಳಿಗಳ ಪಂದ್ಯ ವೀಕ್ಷಿಸಲು ಅಭಿಮಾನಿಗಳು ಕಾತರರಾಗಿದ್ದಾರೆ.

ಇದನ್ನೂ ಓದಿ : Virat Kohli Complets 15 Years : ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ಕರಿಯರ್’ಗೆ 15 ವರ್ಷ, ಕ್ರಿಕೆಟ್ ಪಿಚ್’ನಲ್ಲಿ 500 ಕಿ.ಮೀ ಓಡಿದ್ದಾರೆ ರನ್ ಮಷಿನ್

ಐಸಿಸಿ ವಿಶ್ವಕಪ್ 2023: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ (ICC Cricket World Cup 2023)

ಸೆಪ್ಟೆಂಬರ್ 29
ಬಾಂಗ್ಲಾದೇಶ Vs ಶ್ರೀಲಂಕಾ (ಗುವಾಹಟಿ, ಮಧ್ಯಾಹ್ನ 2ಕ್ಕೆ)
ದಕ್ಷಿಣ ಆಫ್ರಿಕಾ Vs ಅಫ್ಘಾನಿಸ್ತಾನ (ತಿರುವನಂತಪುರಂ, ಮಧ್ಯಾಹ್ನ 2ಕ್ಕೆ)
ನ್ಯೂಜಿಲೆಂಡ್ Vs ಪಾಕಿಸ್ತಾನ (ಹೈದರಾಬಾದ್, ಮಧ್ಯಾಹ್ನ 2ಕ್ಕೆ)

ಸೆಪ್ಟೆಂಬರ್ 30
ಭಾರತ Vs ಇಂಗ್ಲೆಂಡ್ (ಗುವಾಹಟಿ, ಮಧ್ಯಾಹ್ನ 2ಕ್ಕೆ)
ಆಸ್ಟ್ರೇಲಿಯಾ Vs ನೆದರ್ಲೆಂಡ್ಸ್ (ತಿರುವನಂತಪುರಂ, ಮಧ್ಯಾಹ್ನ 2ಕ್ಕೆ)

ಅಕ್ಟೋಬರ್ 3
ಅಫ್ಘಾನಿಸ್ತಾನ Vs ಶ್ರೀಲಂಕಾ (ಗುವಾಹಟಿ, ಮಧ್ಯಾಹ್ನ 2ಕ್ಕೆ)
ಭಾರತ Vs ನೆದರ್ಲೆಂಡ್ಸ್ (ತಿರುವನಂತಪುರಂ, ಮಧ್ಯಾಹ್ನ 2ಕ್ಕೆ)
ಆಸ್ಟ್ರೇಲಿಯಾ Vs ಪಾಕಿಸ್ತಾನ (ಹೈದಬಾದಾದ್, ಮಧ್ಯಾಹ್ನ 2ಕ್ಕೆ)

ವಿಶ್ವಕಪ್’ಗೆ ಆತಿಥ್ಯ ವಹಿಸಲಿರುವ ನಗರಗಳು:
ಬೆಂಗಳೂರು, ದೆಹಲಿ, ಮುಂಬೈ, ಅಹ್ಮದಾಬಾದ್, ಪುಣೆ, ಲಕ್ನೋ, ಹೈದರಾಬಾದ್, ಧರ್ಮಶಾಲಾ, ಚೆನ್ನೈ, ಕೋಲ್ಕತಾ.

ಐಸಿಸಿ ವಿಶ್ವಕಪ್ 2023: ಟೂರ್ನಿಯಲ್ಲಿ ಆಡಲಿರುವ ತಂಡಗಳು
ಭಾರತ, ಆಸ್ಟ್ರೇಲಿಯಾ, ಪಾಕಿಸ್ತಾನ, ಇಂಗ್ಲೆಂಡ್, ಶ್ರೀಲಂಕಾ, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ, ಅಫ್ಘಾನಿಸ್ತಾನ, ಬಾಂಗ್ಲಾದೇಶ, ನೆದರ್ಲೆಂಡ್ಸ್.

India s squad for ICC Men s Cricket World Cup 2023 announced Bcci Today KL Rahul In
Image credit to Original Source

ಐಸಿಸಿ ವಿಶ್ವಕಪ್ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ (ICC World Cup 2023 Schedule)

ಅಕ್ಟೋಬರ್ 5: ಇಂಗ್ಲೆಂಡ್ Vs ನ್ಯೂಜಿಲೆಂಡ್ (ಅಹ್ಮದಾಬಾದ್)
ಅಕ್ಟೋಬರ್ 6: ಪಾಕಿಸ್ತಾನ Vs ನೆದರ್ಲೆಂಡ್ಸ್ (ಹೈದರಾಬಾದ್)
ಅಕ್ಟೋಬರ್ 7: ಬಾಂಗ್ಲಾದೇಶ Vs ಅಫ್ಘಾನಿಸ್ತಾನ (ಧರ್ಮಶಾಲಾ)
ಅಕ್ಟೋಬರ್ 7: ದಕ್ಷಿಣ ಆಫ್ರಿಕಾ Vs ಶ್ರೀಲಂಕಾ (ದೆಹಲಿ)
ಅಕ್ಟೋಬರ್ 8: ಭಾರತ Vs ಆಸ್ಟ್ರೇಲಿಯಾ (ಚೆನ್ನೈ)
ಅಕ್ಟೋಬರ್ 9: ನ್ಯೂಜಿಲೆಂಡ್ Vs ನೆದರ್ಲೆಂಡ್ಸ್ (ಹೈದರಾಬಾದ್)
ಅಕ್ಟೋಬರ್ 10: ಇಂಗ್ಲೆಂಡ್ Vs ಬಾಂಗ್ಲಾದೇಶ (ಧರ್ಮಶಾಲಾ)
ಅಕ್ಟೋಬರ್ 11: ಭಾರತ Vs ಅಫ್ಘಾನಿಸ್ತಾನ (ದೆಹಲಿ)
ಅಕ್ಟೋಬರ್ 12: ಪಾಕಿಸ್ತಾನ Vs ಶ್ರೀಲಂಕಾ (ಹೈದರಾಬಾದ್)
ಅಕ್ಟೋಬರ್ 13: ಆಸ್ಟ್ರೇಲಿಯಾ Vs ದಕ್ಷಿಣ ಆಫ್ರಿಕಾ (ಲಕ್ನೋ)

ಇದನ್ನೂ ಓದಿ : Karnataka Cricket: ರಾಜ್ಯ ಕ್ರಿಕೆಟ್’ನಲ್ಲಿ ಕಡೆಗಣಿಸಿದವರಿಗೆ ಆಟದಿಂದಲೇ ಉತ್ತರಿಸುತ್ತಿದ್ದಾರೆ ತ್ರಿಮೂರ್ತಿಗಳು

ಅಕ್ಟೋಬರ್ 14: ಇಂಗ್ಲೆಂಡ್ Vs ಅಫ್ಘಾನಿಸ್ತಾನ (ದೆಹಲಿ)
ಅಕ್ಟೋಬರ್ 14: ಬಾಂಗ್ಲಾದೇಶ Vs ನ್ಯೂಜಿಲೆಂಡ್ (ಚೆನ್ನೈ)
ಅಕ್ಟೋಬರ್ 15: ಭಾರತ Vs ಪಾಕಿಸ್ತಾನ (ಅಹ್ಮದಾಬಾದ್)
ಅಕ್ಟೋಬರ್ 16: ಆಸ್ಟ್ರೇಲಿಯಾ Vs ಶ್ರೀಲಂಕಾ (ಲಕ್ನೋ)
ಅಕ್ಟೋಬರ್ 17: ದಕ್ಷಿಣ ಆಫ್ರಿಕಾ Vs ನೆದರ್ಲೆಂಡ್ಸ್ (ಧರ್ಮಶಾಲಾ)
ಅಕ್ಟೋಬರ್ 18: ಅಫ್ಘಾನಿಸ್ತಾನ Vs ನ್ಯೂಜಿಲೆಂಡ್ (ಚೆನ್ನೈ)
ಅಕ್ಟೋಬರ್ 19: ಭಾರತ Vs ಬಾಂಗ್ಲಾದೇಶ (ಪುಣೆ)
ಅಕ್ಟೋಬರ್ 20: ಆಸ್ಟ್ರೇಲಿಯಾ Vs ಪಾಕಿಸ್ತಾನ (ಬೆಂಗಳೂರು)
ಅಕ್ಟೋಬರ್ 21: ಇಂಗ್ಲೆಂಡ್ Vs ದಕ್ಷಿಣ ಆಫ್ರಿಕಾ (ಮುಂಬೈ)
ಅಕ್ಟೋಬರ್ 21: ನೆದರ್ಲೆಂಡ್ಸ್ Vs ಶ್ರೀಲಂಕಾ (ಲಕ್ನೋ)
ಅಕ್ಟೋಬರ್ 22: ಭಾರತ Vs ನ್ಯೂಜಿಲೆಂಡ್ (ಧರ್ಮಶಾಲಾ)
ಅಕ್ಟೋಬರ್ 23: ಪಾಕಿಸ್ತಾನ Vs ಅಫ್ಘಾನಿಸ್ತಾನ (ಚೆನ್ನೈ)

India s squad for ICC Men s Cricket World Cup 2023 announced Bcci Today KL Rahul In
Image Credit to original Source

ಅಕ್ಟೋಬರ್ 24: ದಕ್ಷಿಣ ಆಫ್ರಿಕಾ Vs ಬಾಂಗ್ಲಾದೇಶ (ಮುಂಬೈ)
ಅಕ್ಟೋಬರ್ 25: ಆಸ್ಟ್ರೇಲಿಯಾ Vs ನೆದರ್ಲೆಂಡ್ಸ್ (ದೆಹಲಿ)
ಅಕ್ಟೋಬರ್ 26: ಇಂಗ್ಲೆಂಡ್ Vs ಶ್ರೀಲಂಕಾ (ಬೆಂಗಳೂರು)
ಅಕ್ಟೋಬರ್ 27: ಪಾಕಿಸ್ತಾನ Vs ದಕ್ಷಿಣ ಆಫ್ರಿಕಾ (ಚೆನ್ನೈ)
ಅಕ್ಟೋಬರ್ 28: ನೆದರ್ಲೆಂಡ್ಸ್ Vs ಬಾಂಗ್ಲಾದೇಶ (ಕೋಲ್ಕತಾ)
ಅಕ್ಟೋಬರ್ 28: ಆಸ್ಟ್ರೇಲಿಯಾ Vs ನ್ಯೂಜಿಲೆಂಡ್ (ಧರ್ಮಶಾಲಾ)
ಅಕ್ಟೋಬರ್ 29: ಭಾರತ Vs ಇಂಗ್ಲೆಂಡ್ (ಲಕ್ನೋ)
ಅಕ್ಟೋಬರ್ 30: ಅಫ್ಘಾನಿಸ್ತಾನ Vs ಶ್ರೀಲಂಕಾ (ಪುಣೆ)
ಅಕ್ಟೋಬರ್ 31: ಪಾಕಿಸ್ತಾನ Vs ಬಾಂಗ್ಲಾದೇಶ (ಕೋಲ್ಕತಾ)
ನವೆಂಬರ್ 1: ದಕ್ಷಿಣ ಆಫ್ರಿಕಾ Vs ನ್ಯೂಜಿಲೆಂಡ್ (ಪುಣೆ)
ನವೆಂಬರ್ 2: ಭಾರತ Vs ಶ್ರೀಲಂಕಾ (ಮುಂಬೈ)
ನವೆಂಬರ್ 3: ನೆದರ್ಲೆಂಡ್ಸ್ Vs ಅಫ್ಘಾನಿಸ್ತಾನ (ಲಕ್ನೋ)
ನವೆಂಬರ್ 4: ಇಂಗ್ಲೆಂಡ್ Vs ಆಸ್ಟ್ರೇಲಿಯಾ (ಅಹ್ಮದಾಬಾದ್)

ಇದನ್ನೂ ಓದಿ : ICC World Cup 2023:  ಭಾರತಕ್ಕೆ ಯಾರು ಎದುರಾಳಿಗಳು? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ನವೆಂಬರ್ 4: ಪಾಕಿಸ್ತಾನ Vs ನ್ಯೂಜಿಲೆಂಡ್ (ಬೆಂಗಳೂರು)
ನವೆಂಬರ್ 5: ದಕ್ಷಿಣ ಆಫ್ರಿಕಾ Vs ಭಾರತ (ಕೋಲ್ಕತಾ)
ನವೆಂಬರ್ 6: ಬಾಂಗ್ಲಾದೇಶ Vs ಶ್ರೀಲಂಕಾ (ದೆಹಲಿ)
ನವೆಂಬರ್ 7: ಆಸ್ಟ್ರೇಲಿಯಾ Vs ಅಫ್ಘಾನಿಸ್ತಾನ (ಮುಂಬೈ)
ನವೆಂಬರ್ 8: ಇಂಗ್ಲೆಂಡ್ Vs ನೆದರ್ಲೆಂಡ್ಸ್ (ಪುಣೆ)
ನವೆಂಬರ್ 9: ನ್ಯೂಜಿಲೆಂಡ್ Vs ಶ್ರೀಲಂಕಾ (ಬೆಂಗಳೂರು)
ನವೆಂಬರ್ 10: ದಕ್ಷಿಣ ಆಫ್ರಿಕಾ Vs ಅಫ್ಘಾನಿಸ್ತಾನ (ಅಹ್ಮದಾಬಾದ್)
ನವೆಂಬರ್ 11: ಭಾರತ Vs ನೆದರ್ಲೆಂಡ್ಸ್ (ಬೆಂಗಳೂರು)
ನವೆಂಬರ್ 12: ಇಂಗ್ಲೆಂಡ್ Vs ಪಾಕಿಸ್ತಾನ (ಕೋಲ್ಕತಾ)
ನವೆಂಬರ್ 12: ಆಸ್ಟ್ರೇಲಿಯಾ Vs ಬಾಂಗ್ಲಾದೇಶ (ಪುಣೆ)
ನವೆಂಬರ್ 15: ಸೆಮಿಫೈನಲ್-1 (ಮುಂಬೈ)
ನವೆಂಬರ್ 16: ಸೆಮಿಫೈನಲ್-2 (ಕೋಲ್ಕತಾ)
ನವೆಂಬರ್ 19: ಫೈನಲ್ (ಅಹ್ಮದಾಬಾದ್)

Comments are closed.