ಬೆಂಗಳೂರು: ಜಿಂಬಾಬ್ವೆ ಪ್ರವಾಸದ ಏಕದಿನ ಸರಣಿಗೆ ಟೀಮ್ ಇಂಡಿಯಾವನ್ನು (India squad for Zimbabwe tour announced)ಪ್ರಕಟಿಸಲಾಗಿದ್ದು, ಶಿಖರ್ ಧವನ್ ನಾಯಕರಾಗಿ ಆಯ್ಕೆಯಾಗಿದ್ದಾರೆ. ಕ್ರಿಕೆಟ್’ನಿಂದ ವಿರಾಮ ಪಡೆದಿರುವ ವಿರಾಟ್ ಕೊಹ್ಲಿ ಮತ್ತು ಕೋವಿಡ್’ನಿಂತ ಚೇತರಿಸಿಕೊಂಡಿರುವ ಕೆ.ಎಲ್ ರಾಹುಲ್ ಜಿಂಬಾಬ್ವೆ ಸರಣಿಯಲ್ಲಿ (Virat Kohli KL Rahul Out ) ಆಡಲಿದ್ದಾರೆ ಎಂಬ ನಿರೀಕ್ಷೆ ಹುಸಿಯಾಗಿದೆ.
ಜಿಂಬಾಬ್ವೆ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಗೆ 15 ಮಂದಿ ಸದಸ್ಯರ ತಂಡವನ್ನು ಪ್ರಕಟಿಸಲಾಗಿದ್ದು, ನಾಯಕ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದೆ. ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ ತಂಡದ ನಾಯಕ ಶಿಖರ್ ಧವನ್ ಅವರನ್ನು ಜಿಂಬಾಬ್ವೆ ಪ್ರವಾಸಕ್ಕೂ ನಾಯಕರಾಗಿ ಮುಂದುವರಿಸಲಾಗಿದೆ. ವಿರಾಟ್ ಕೊಹ್ಲಿ, ಕೆ.ಎಲ್ ರಾಹುಲ್ ಜೊತೆ ರಿಷಭ್ ಪಂತ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಸೂರ್ಯಕುಮಾರ್ ಯಾದವ್ ಸಹಿತ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.
ಗಾಯದಿಂದ ಚೇತರಿಸಿಕೊಂಡು ಇಂಗ್ಲೆಂಡ್’ನಲ್ಲಿ ಕೌಂಟಿ ಕ್ರಿಕೆಟ್ ಆಡುತ್ತಿರುವ ಆಫ್ ಸ್ಪಿನ್ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಟೀಮ್ ಇಂಡಿಯಾಗೆ ಮರಳಿದ್ದಾರೆ. ಐಪಿಎಲ್’ಗೂ ಮುನ್ನ ಗಾಯಕ್ಕೊಳಗಾಗಿದ್ದ ಬಲಗೈ ಸ್ವಿಂಗ್ ಬೌಲರ್ ದೀಪಕ್ ಚಹರ್ ಕೂಡ ಭಾರತ ತಂಡಕ್ಕೆ ಕಂಬ್ಯಾಕ್ ಮಾಡಿದ್ದಾರೆ.
ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ:
ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಆವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ದೀಪಕ್ ಚಹರ್.
ಭಾರತ Vs ಜಿಂಬಾಬ್ವೆ ಏಕದಿನ ಸರಣಿಯ ವೇಳಾಪಟ್ಟಿ
ಮೊದಲ ಏಕದಿನ ಪಂದ್ಯ: ಆಗಸ್ಟ್ 18 (ಹರಾರೆ ಸ್ಪೋರ್ಟ್ಸ್ ಕ್ಲಬ್, ಹರಾರೆ)
ಎರಡನೇ ಏಕದಿನ ಪಂದ್ಯ: ಆಗಸ್ಟ್ 20 (ಹರಾರೆ ಸ್ಪೋರ್ಟ್ಸ್ ಕ್ಲಬ್, ಹರಾರೆ)
ಮೂರನೇ ಏಕದಿನ ಪಂದ್ಯ: ಆಗಸ್ಟ್ 22 (ಹರಾರೆ ಸ್ಪೋರ್ಟ್ಸ್ ಕ್ಲಬ್, ಹರಾರೆ)
ಇದನ್ನೂ ಓದಿ : Gururaja Poojary : ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಕುಂದಾಪುರದ ಗುರುರಾಜ್ ಪೂಜಾರಿಗೆ ಕಂಚಿನ ಪದಕ
India squad for Zimbabwe tour announced Virat Kohli KL Rahul Out Shikhar Dhawan Captain