Shami replaces Bumrah: ಟಿ20 ವಿಶ್ವಕಪ್: ಬುಮ್ರಾ ಬದಲು ಶಮಿ ಆಯ್ಕೆ, ಬಿಸಿಸಿಐ ಅಧಿಕೃತ ಘೋಷಣೆ

ಬೆಂಗಳೂರು: Mohammed Shami WC Squad : ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ (ICC T20 World Cup) ಸಜ್ಜಾಗುತ್ತಿರುವ ಭಾರತ ತಂಡದಲ್ಲಿ ವೇಗಿ ಜಸ್’ಪ್ರೀತ್ ಬುಮ್ರಾ (Jasprit Bumrah) ಅವರ ಸ್ಥಾನವನ್ನು ಮತ್ತೊಬ್ಬ ಅನುಭವಿ ವೇಗಿ ಮೊಹಮ್ಮದ್ ಶಮಿ (Mohammed Shami) ತುಂಬಲಿದ್ದಾರೆ.

ಬುಮ್ರಾ ಬದಲು ಶಮಿ ಟೀಮ್ ಇಂಡಿಯಾದ ಅಂತಿಮ 15ರ ಬಳಗ ಸೇರಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಅಧಿಕೃತವಾಗಿ ಘೋಷಿಸಿದೆ. ಈ ಬಗ್ಗೆ ಬಿಸಿಸಿಐ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ. ಈಗಾಗಲೇ ಆಸ್ಟ್ರೇಲಿಯಾ ತಲುಪಿರುವ ಮೊಹಮ್ಮದ್ ಶಮಿ ಬ್ರಿಸ್ಬೇನ್’ನಲ್ಲಿ ನಡೆಯಲಿರುವ ಎರಡು ಅಭ್ಯಾಸ ಪಂದ್ಯಗಳಲ್ಲಿ ಆಡಲಿದ್ದಾರೆ. ಬ್ರಿಸ್ಬೇನ್’ನಲ್ಲಿ ಭಾರತ ವಿಶ್ವಚಾಂಪಿಯನ್ ಆಸ್ಟ್ರೇಲಿಯಾ (ಅಕ್ಟೋಬರ್ 17) ಹಾಗೂ ನ್ಯೂಜಿಲೆಂಡ್ ವಿರುದ್ಧ (ಅಕ್ಟೋಬರ್ 19) ಅಭ್ಯಾಸ ಪಂದ್ಯಗಳನ್ನಾಡಲಿದೆ.

ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗಳಿಗೆ ಆಯ್ಕೆಯಾಗಿದ್ದ ಅನುಭವಿ ಮೊಹಮ್ಮದ್ ಶಮಿ, ಆಸೀಸ್ ವಿರುದ್ಧದ ಸರಣಿ ಆರಂಭಕ್ಕೂ ಮುನ್ನವೇ ಕೋವಿಡ್ ಪಾಸಿಟಿವ್’ಗೆ ಗುರಿಯಾಗಿದ್ದರು. ಹೀಗಾಗಿ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗಳಿಗೆ ಅಲಭ್ಯರಾಗಿದ್ದರು. ನಂತರ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಶ್ಟೇತನ ಶಿಬಿರದಲ್ಲಿ ಪಾಲ್ಗೊಂಡಿದ್ದ ಶಮಿ ಸಂಪೂರ್ಣವಾಗಿ ಚೇತರಿಸಿಕೊಂಡು ವಿಶ್ವಕಪ್ ಅಖಾಡಕ್ಕಿಳಿಯಸು ಸಜ್ಜಾಗಿದ್ದಾರೆ.

ಇದೇ ವೇಳೆ ಯುವ ವೇಗಿ ಮೊಹಮ್ಮದ್ ಸಿರಾಜ್ ಮತ್ತು ಆಲ್ರೌಂಡರ್ ಶಾರ್ದೂಲ್ ಠಾಕೂರ್ ಅವರನ್ನು ಮೀಸಲು ಆಟಗಾರರನ್ನಾಗಿ ಆಯ್ಕೆ ಮಾಡಲಾಗಿದ್ದು, ಇಬ್ಬರೂ ಆಸ್ಟ್ರೇಲಿಯಾ ತಲುಪಿದ್ದಾರೆ. ಅಕ್ಟೋಬರ್ 23ರಂದು ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್’ನಲ್ಲಿ ನಡೆಯುವ ವಿಶ್ವಕಪ್ ಟೂರ್ನಿಯ ತನ್ನ ಮೊದಲ ಪಂದ್ಯದಲ್ಲಿ ಭಾರತ, ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ.

ಟಿ20 ವಿಶ್ವಕಪ್: ಭಾರತದ ಪರಿಷ್ಕೃತ ತಂಡ
ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಲ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ದೀಪಕ್ ಹೂಡ, ರಿಷಭ್ ಪಂತ್ (ವಿಕೆಟ್ ಕೀಪರ್), ರವಿಚಂದ್ರನ ಅಶ್ವಿನ್.

ಮೀಸಲು ಆಟಗಾರರು: ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ರವಿ ಬಿಷ್ಣೋಯ್.

ಇದನ್ನೂ ಓದಿ : M S Dhoni : ಸಚಿನ್ ತೆಂಡೂಲ್ಕರ್ ಅವರಂತೆ ಆಡಲು ಬಯಸಿದ್ದೆ ಆದ್ರೆ, ಮಹೇಂದ್ರ ಸಿಂಗ್ ಧೋನಿ ಹೇಳಿದ್ದೇನು..?

ಇದನ್ನೂ ಓದಿ : Women’s IPL 2023 : ಮುಂದಿನ ವರ್ಷ ಮಹಿಳಾ ಐಪಿಎಲ್: 5 ತಂಡಗಳು, 22 ಪಂದ್ಯಗಳು, ಐವರು ವಿದೇಶೀ ತಾರೆಗಳು

India t20 WC Squad Mohammed Shami Replaces injured Jasprit Bumrah BCCI Announced

Comments are closed.