India tour of Zimbabwe : ಆಗಸ್ಟ್‌ನಲ್ಲಿ ಟೀಮ್ ಇಂಡಿಯಾ ಜಿಂಬಾಬ್ವೆ ಟೂರ್, ಭಾರತ ತಂಡಕ್ಕೆ ಕ್ಯಾಪ್ಟನ್ ಯಾರು ?

ಬೆಂಗಳೂರು: ಇಂಗ್ಲೆಂಡ್ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡ ಆಗಸ್ಟ್ ತಿಂಗಳಲ್ಲಿ ಜಿಂಬಾಬ್ವೆ ಪ್ರವಾಸಕ್ಕೆ ತೆರಳಿದ್ದು (India tour of Zimbabwe ), ಆತಿಥೇಯರ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ.

ಆಗಸ್ಟ್ 18ರಂದು ಮೊದಲ ಏಕದಿನ ಪಂದ್ಯ ನಡೆಯಲಿದ್ದು, 2 ಹಾಗೂ 3ನೇ ಏಕದಿನ ಪಂದ್ಯಗಳು ಆಗಸ್ಟ್ 20 ಹಾಗೂ 22ರಂದು ನಡೆಯಲಿವೆ. ಭಾರತ ತಂಡ ಇಂಗ್ಲೆಂಡ್ ಪ್ರವಾಸದ ನಂತರ ವೆಸ್ಟ್ ಇಂಡೀಸ್”ಗೆ ತೆರಳಲಿದ್ದು, ಅಲ್ಲಿ ಆತಿಥೇಯರ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಹಾಗೂ 5 ಪಂದ್ಯಗಳ ಟಿ20 ಸರಣಿಯನ್ನಾಡಲಿದೆ. ಇದಾದ ನಂತರ ಟೀಮ್ ಇಂಡಿಯಾ ಆಟಗಾರರು ಜಿಂಬಾಬ್ವೆ ಪ್ರವಾಸಕ್ಕೆ ತೆರಳಲಿದ್ದಾರೆ.

ಭಾರತದ ಜಿಂಬಾಬ್ವೆ ಪ್ರವಾಸದ ವೇಳಾಪಟ್ಟಿ
ಆಗಸ್ಟ್ 18: ಮೊದಲ ಏಕದಿನ ಪಂದ್ಯ
ಆಗಸ್ಟ್ 20: ಎರಡನೇ ಏಕದಿನ ಪಂದ್ಯ
ಆಗಸ್ಟ್ 22: ಮೂರನೇ ಏಕದಿನ ಪಂದ್ಯ

ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯಲ್ಲಿ ಯುವ ಆಟಗಾರರಿಗೆ ಅವಕಾಶ ನೀಡುವ ಸಾಧ್ಯತೆಗಳಿವೆ. ಜಿಂಬಾಬ್ವೆ ಪ್ರವಾಸದ ಬೆನ್ನಲ್ಲೇ ಟೀಮ್ ಇಂಡಿಯಾ ಶ್ರೀಲಂಕಾದಲ್ಲಿ ನಡೆಯಲಿರುವ ಏಷ್ಯಾ ಕಪ್ ಟೂರ್ನಿಯಲ್ಲಿ ಆಡಬೇಕಿದೆ. ಹೀಗಾಗಿ ಜಿಂಬಾಬ್ವೆ ಪ್ರವಾಸಕ್ಕೆ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿ ಯುವ ತಂಡವನ್ನು ಕಣಕ್ಕಿಳಿಸುವ ಬಗ್ಗೆ ಬಿಸಿಸಿಐ ಚಿಂತನೆ ನಡೆಸುತ್ತಿದೆ. ಏಷ್ಯಾ ಕಪ್ ಟೂರ್ನಿ ಆಗಸ್ಟ್ 27ರಿಂದ ಸೆಪ್ಟೆಂಬರ್ 11ರವರೆಗೆ ಶ್ರೀಲಂಕಾದಲ್ಲಿ ನಡೆಯಲಿದ್ದು, ಭಾರತ, ಪಾಕಿಸ್ತಾನ, ಶ್ರೀಲಂಕಾ, ಅಫ್ಘಾನಿಸ್ತಾ ಹಾಗೂ ಬಾಂಗ್ಲಾದೇಶ ತಂಡಗಳು ಭಾಗವಹಿಸಲಿವೆ.

ಏಷ್ಯಾ ಕಪ್ ಹಿನ್ನೆಲೆಯಲ್ಲಿ ಜಿಂಬಾಬ್ವೆ ಪ್ರವಾಸಕ್ಕೆ ಪ್ರಮುಖ ಆಟಗಾರರನ್ನು ಹೊರಗಿಟ್ಟು ಯುವ ಆಟಗಾರರ ತಂಡವನ್ನು ಕಟ್ಟಿದರೆ ನಾಯಕ ಯಾರಾಗಲಿದ್ದಾರೆ ಎಂಬುದೇ ದೊಡ್ಡ ಕುತೂಹಲ. ಈಗಾಗ್ಲೇ 2022ರಲ್ಲಿ ಒಟ್ಟು ಏಳು ಮಂದಿ ಆಟಗಾರರು ವಿವಿಧ ಸರಣಿಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದಾರೆ.

ದಕ್ಷಿಣ ಆಫ್ರಿಕಾ ಪ್ರವಾಸದ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ, ಏಕದಿನ ಸರಣಿಯಲ್ಲಿ ಕೆ.ಎಲ್ ರಾಹುಲ್, ಶ್ರೀಲಂಕಾ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ತವರು ಸರಣಿಗಳಲ್ಲಿ ರೋಹಿತ್ ಶರ್ಮಾ, ದಕ್ಷಿಣ ಆಫ್ರಿಕಾ ವಿರುದ್ಧದ ತವರು ಟಿ20 ಸರಣಿಯಲ್ಲಿ ರಿಷಭ್ ಪಂತ್, ಐರ್ಲೆಂಡ್ ಪ್ರವಾಸದ ಟಿ20 ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ, ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ, ಟಿ20 ಸರಣಿಯಲ್ಲಿ ರೋಹಿತ್ ಶರ್ಮಾ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ರೆ, ಮುಂಬರುವ ವೆಸ್ಟ್ ಇಂಡೀಸ್ ಪ್ರವಾಸದ ಏಕದಿನ ಸರಣಿಯಲ್ಲಿ ಎಡಗೈ ಓಪನರ್ ಶಿಖರ್ ಧವನ್ ಭಾರತ ತಂಡದ ನೇತೃತ್ವ ವಹಿಸಲಿದ್ದಾರೆ.

ಜಿಂಬಾಬ್ವೆ ಪ್ರವಾಸದಲ್ಲಿ ಟೀಮ್ ಇಂಡಿಯಾವನ್ನು ಮತ್ತೆ ಶಿಖರ್ ಧವನ್ ಮುನ್ನಡೆಸುವ ಸಾಧ್ಯತೆಯಿದೆ. ಐರ್ಲೆಂಡ್, ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಉತ್ತಮ ಪ್ರದರ್ಶನ ತೋರಿದ ಯುವ ಆಟಗಾರರು ಮತ್ತು ಅವಕಾಶಕ್ಕಾಗಿ ಕಾದು ಕುಳಿತಿರುವ ಪ್ರತಿಭಾನ್ವಿತ ಆಟಗಾರರು ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿರುವ ಭಾರತ ತಂಡದಲ್ಲಿ ಅವಕಾಶ ಪಡೆಯಲಿದ್ದಾರೆ.

ಇದನ್ನೂ ಓದಿ : Sachin Vs Kohli 33 phobia: ಅಂದು ಸಚಿನ್, ಇಂದು ವಿರಾಟ್.. ಬ್ಯಾಟಿಂಗ್ ದಿಗ್ಗಜರಿಗೆ ‘33’ ಫೋಬಿಯಾ

ಇದನ್ನೂ ಓದಿ : India Vs England T20 : ಇಂದು ಇಂಡಿಯಾ Vs ಇಂಗ್ಲೆಂಡ್ 2ನೇ ಟಿ20, ಕೊಹ್ಲಿ ಆಡಬೇಕಾದರೆ ಇದೊಂದೇ ದಾರಿ

India tour of Zimbabwe: Team India tour of Zimbabwe in August, who will be the captain of the India team?

Comments are closed.