ಅಪ್ಘಾನಿಸ್ತಾನ ವಿರುದ್ದದ ಮೊದಲ ಟಿ20 ಪಂದ್ಯವನ್ನು ಗೆದ್ದು ಬೀಗಿರುವ ಟೀಂ ಇಂಡಿಯಾ ಇದೀಗ ಎರಡನೇ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಬದಲು ವೈಭವ್ ಸೂರ್ಯವಂಶಿ ಕಣಕ್ಕೆ ಇಳಿಯುವುದು ಬಹುತೇಕ ಖಚಿತ.
ಭಾರತ ಕ್ರಿಕೆಟ್ ತಂಡ ಅಪ್ಘಾನಿಸ್ತಾನದ ವಿರುದ್ದ ಮೊದಲ ಪಂದ್ಯದಲ್ಲಿ ಗೆಲುವು ದಾಖಲಿಸಿತ್ತು. ಆದರೆ ಮೊದಲ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡಿಲ್ಲ. ಇದೇ ಕಾರಣದಿಂದಲೇ ಸಂಜು ಸ್ಯಾಮ್ಸನ್ ಬದಲು ವೈಭವ್ ಸೂರ್ಯವಂಶಿಯನ್ನು ಕಣಕ್ಕೆ ಇಳಿಸುವ ಸಾಧ್ಯತೆಯಿದೆ. ಟಿ20 ಮಾತ್ರವಲ್ಲದೇ ಸ್ವದೇಶಿ ಪಂದ್ಯಗಳಲ್ಲಿಯೂ ವೈಭವ್ ಸೂರ್ಯವಂಶಿ ಈ ಬಾರಿ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಇದೇ ಕಾರಣದಿಂದಲೇ ಇಂದಿನ ಪಂದ್ಯದಲ್ಲಿ ಆಡುವ ಬಳಗದಲ್ಲಿ ಸೂರ್ಯವಂಶಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.
ಟೀಂ ಇಂಡಿಯಾ ಇಂದಿನ ಪಂದ್ಯದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲು ಸಜ್ಜಾಗಿದೆ. ಈಗಾಗಲೇ ಗಾಯದ ಸಮಸ್ಯೆಯಿಂದ ಟೀಂ ಇಂಡಿಯಾದಿಂದ ಹೊರಬಿದ್ದಿರುವ ವರುಣ್ ಚಕ್ರವರ್ತಿ ಬದಲು ಸ್ಪಿನ್ನರ್ ರವಿ ಬಿಷ್ಣೋಯಿ ಆಯ್ಕೆಯಾಗಲಿದ್ದಾರೆ.
ಒಂದೊಮ್ಮೆ ಸಂಜು ಸ್ಯಾಮ್ಸನ್ ಆಡುವ ಬಳಗದಿಂದ ಹೊರಬಿದ್ರೆ 3ನೇ ಕ್ರಮಾಂಕದಲ್ಲಿ ಆಡುವ ಇಶಾನ್ ಕಿಶನ್ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ಹೊರಬೇಕಾಗುತ್ತದೆ. ಶ್ರೇಯಸ್ ಅಯ್ಯರ್, ತಿಲಕ್ ವರ್ಮಾ ಕೂಡ ತಂಡದಲ್ಲಿದ್ದು ಬ್ಯಾಟಿಂಗ್ ಕ್ರಮಾಂಕ ಇನ್ನಷ್ಟು ಬಲಿಷ್ಟವಾಗಲಿದೆ. ಅಲ್ಲದೇ ಶಿವಂ ದುಬೆ, ಅಕ್ಷರ್ ಪಟೇಲ್ ಹಾಗೂ ನಿತೀಶ್ ಕುಮಾರ್ ರೆಡ್ಡಿ ಆಲ್‌ರೌಂಡರ್ ಸ್ಥಾನವನ್ನು ತುಂಬಲಿದ್ದಾರೆ.