KL Rahul: ಆಸ್ಟ್ರೇಲಿಯಾ ವಿರುದ್ಧ ರೋಹಿತ್ ಜೊತೆ ರಾಹುಲ್ ಓಪನರ್, ವಿಕೆಟ್ ಕೀಪಿಂಗ್ ಜವಾಬ್ದಾರಿ ಯಾರ ಹೆಗಲಿಗೆ?

ನಾಗ್ಪುರ: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ (India Vs Australia Border-Gavaskar test series) ಭಾರತ ತಂಡದ ಇನ್ನಿಂಗ್ಸ್ ಆರಂಭಿಸುವವರು ಯಾರು ಎಂಬ ಪ್ರಶ್ನೆಗೆ ತೆರೆ ಬಿದ್ದಿದೆ. ನಾಯಕ ರೋಹಿತ್ ಶರ್ಮಾ ಜೊತೆ ಉಪನಾಯಕ ಕೆ.ಎಲ್ ರಾಹುಲ್ (KL Rahul) ಅವರೇ ಟೀಮ್ ಇಂಡಿಯಾ ಪರ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ.

ಯುವ ಬಲಗೈ ಓಪನರ್ ಶುಭಮನ್ ಗಿಲ್ (Shubman Gill) ಅಮೋಘ ಫಾರ್ಮ್’ನಲ್ಲಿರುವ ಕಾರಣ ಅವರನ್ನೇ ರೋಹಿತ್ ಜೊತೆ ಆರಂಭಿಕನಾಗಿ ಆಡಿಸಬೇಕೆಂದು ಕೆಲ ಮಾಜಿ ಕ್ರಿಕೆಟಿಗರು ಅಭಿಪ್ರಾಯ ಪಟ್ಟಿದ್ದರು. ಆದರೆ ಉಪನಾಯಕ ಕೆ.ಎಲ್ ರಾಹುಲ್ ಅವರ ಅನುಭವಕ್ಕೆ ಟೀಮ್ ಮ್ಯಾನೇಜ್ಮೆಂಟ್ ಮಣೆ ಹಾಕಿದ್ದು, ನಾಗ್ಪುರದ ವಿದರ್ಭ ಕ್ರಿಕೆಟ್ ಸಂಸ್ಥೆ ಮೈದಾನದಲ್ಲಿ ಫೆಬ್ರವರಿ 9ರಂದು ಆರಂಭವಾಗಲಿರುವ ಪ್ರಥಮ ಟೆಸ್ಟ್’ನಲ್ಲಿ ರಾಹುಲ್ ಅವರೇ ಇನ್ನಿಂಗ್ಸ್ ಆರಂಭಿಸಲಿದ್ದಾರೆ.

ಟೀಮ್ ಇಂಡಿಯಾ ಟೆಸ್ಟ್ ತಂಡದ ಉಪನಾಯಕರಾಗಿರುವ ಕೆ.ಎಲ್ ರಾಹುಲ್ ಟೆಸ್ಟ್ ಕ್ರಿಕೆಟ್’ನಲ್ಲಿ ಆಸ್ಟ್ರೇಲಿಯಾ ವಿರುದ್ಧ ತವರು ನೆಲದಲ್ಲಿ ಅಮೋಘ ದಾಖಲೆ ಹೊಂದಿದ್ದಾರೆ. ಭಾರತದಲ್ಲಿ ಕಾಂಗರೂಗಳ ವಿರುದ್ಧ ಆಡಿರುವ 7 ಟೆಸ್ಟ್ ಇನ್ನಿಂಗ್ಸ್’ಗಳಲ್ಲಿ ರಾಹುಲ್ 6 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಆರೂ ಅರ್ಧಶತಕಗಳು 2016-17ನೇ ಸಾಲಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ದಾಖಲಾಗಿದ್ದವು. ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಅಮೋಘ 90 ರನ್ ಬಾರಿಸಿದ್ದ ರಾಹುಲ್ ಭಾರತದ ಗೆಲುವಿಗೆ ಕಾರಣರಾಗಿದ್ದರು.

30 ವರ್ಷದ ರಾಹುಲ್ ಜನವರಿ 23ರಂದು (ಸೋಮವಾರ) ಹಿಂದಿ ಚಿತ್ರರಂಗದ ಹಿರಿಯ ನಟ ಸುನೀಲ್ ಶೆಟ್ಟಿಯವರ ಪುತ್ರಿ ಆತಿಯಾ ಶೆಟ್ಟಿ ಅವರನ್ನು ಖಂಡಾಲದಲ್ಲಿ ಮದುವೆಯಾಗಿದ್ದರು. ಮದುವೆಯ ಕಾರಣ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಗೆ ಅಲಭ್ಯರಾಗಿದ್ದ ಕೆ.ಎಲ್ ರಾಹುಲ್, ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ (India Vs Australia test series) ಮೂಲಕ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಲಿದ್ದಾರೆ.

ಇದನ್ನೂ ಓದಿ : Border-Gavaskar Test series : ಟೀಮ್ ಇಂಡಿಯಾ ಕ್ಯಾಂಪ್’ನಲ್ಲಿ 10 ಸ್ಪಿನ್ನರ್ಸ್, ಇದು ಕೋಚ್ ದ್ರಾವಿಡ್ ಸ್ಪಿನ್ ಚಾಲೆಂಜ್

ಇದನ್ನೂ ಓದಿ : Border-Gavaskar Test series : ಟೀಮ್ ಇಂಡಿಯಾ ಕ್ಯಾಂಪ್’ನಲ್ಲಿ 10 ಸ್ಪಿನ್ನರ್ಸ್, ಇದು ಕೋಚ್ ದ್ರಾವಿಡ್ ಸ್ಪಿನ್ ಚಾಲೆಂಜ್

ಇದನ್ನೂ ಓದಿ : Virat Kohl‌i : ಕಾಂಗರೂ ಬೇಟೆಗೆ ಕಿಂಗ್ ಕೊಹ್ಲಿ ಭರ್ಜರಿ ತಾಲೀಮು, ಜಿಮ್’ನಲ್ಲಿ ವಿರಾಟ್, biceps ವೈರಲ್

ಇನ್ನು 5ನೇ ಕ್ರಮಾಂಕದ ಬ್ಯಾಟ್ಸ್’ಮನ್ ಶ್ರೇಯಸ್ ಅಯ್ಯರ್ ಪ್ರಥಮ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿರುವ ಕಾರಣ ಅವರ ಸ್ಥಾನದಲ್ಲಿ ಶುಭಮನ್ ಗಿಲ್ ಅಥವಾ ಸೂರ್ಯಕುಮಾರ್ ಯಾದವ್ ಆಡುವ ಸಾಧ್ಯತೆಯಿದೆ. ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ವಿಕೆಟ್ ಕೀಪಿಂಗ್ ಜವಾಬ್ದಾರಿ ಆಂಧ್ರದ ಕೆ.ಎಸ್ ಭರತ್ ಹೆಗಲೇರಲಿದ್ದು, ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದ ಒಂದೂವರೆ ವರ್ಷದ ನಂತರ ಭರತ್ ಟೆಸ್ಟ್ ಪದಾರ್ಪಣೆ ಮಾಡಲಿದ್ದಾರೆ.

India Vs Australia Border-Gavaskar test series : Rahul opener with Rohit against Australia, whose shoulder is the responsibility of wicket keeping?

Comments are closed.