ಮುಂಬೈ : ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯನ್ನು (Border-Gavaskar test series) 2-1ರಿಂದ ಕೈವಶ ಮಾಡಿಕೊಂಡಿರುವ ಟೀಮ್ ಇಂಡಿಯಾ, ಇದೀಗ ಕಾಂಗರೂಗಳ ವಿರುದ್ಧದ ಏಕದಿನ ಸರಣಿಗೆ (India Vs Australia ODI series) ಸಜ್ಜಾಗುತ್ತಿದೆ.
ಆತಿಥೇಯ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಮಾರ್ಚ್ 17ರಂದು (ಶುಕ್ರವಾರ) ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಏಕದಿನ ಸರಣಿಗೆ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಅಲಭ್ಯರಾಗಿರುವ ಹಿನ್ನೆಲೆಯಲ್ಲಿ ಉಪನಾಯಕ ಸ್ಟೀವನ್ ಸ್ಮಿತ್ ಅವರಿಗೆ ಆಸೀಸ್ ತಂಡದ ನಾಯಕ ಪಟ್ಟ ಕಟ್ಟಲಾಗಿದೆ. ಪ್ಯಾಟ್ ಕಮಿನ್ಸ್ ಬಾರ್ಡರ್-ಗವಾಸ್ಕರ್ ಸರಣಿಯ ಕೊನೆಯ 2 ಪಂದ್ಯಗಳಿಗೆ ಅಲಭ್ಯರಾಗಿದ್ದರಿಂದ ಸ್ಟೀವನ್ ಸ್ಮಿತ್ ಅವರೇ ಕಾಂಗರೂ ಪಡೆಯನ್ನು ಮುನ್ನಡೆಸಿದ್ದರು.
3 ಪಂದ್ಯಗಳ ಏಕದಿನ ಸರಣಿಗೆ ಆಸ್ಟ್ರೇಲಿಯಾ ತಂಡ:
ಸ್ಟೀವನ್ ಸ್ಮಿತ್ (ನಾಯಕ), ಶಾನ್ ಅಬಾಟ್, ಆಶ್ಟನ್ ಏಗರ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ನೇಥನ್ ಎಲೀಸ್, ಕ್ಯಾಮರೂನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲಬುಶೇನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್’ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೋಯ್ನಿಸ್, ಡೇವಿರ್ ವಾರ್ನರ್, ಆಡಂ ಜಾಂಪ.
3 ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆ.ಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಜೈದೇವ್ ಉನಾದ್ಕಟ್, ಅಕ್ಷರ್ ಪಟೇಲ್, ಇಶಾನ್ ಕಿಶನ್, ಯುಜ್ವೇಂದ್ರ ಚಹಲ್.
ಇದನ್ನೂ ಓದಿ : Shreyas Iyer injury: ಆಸೀಸ್ ವಿರುದ್ಧದ ಏಕದಿನ ಸರಣಿಯಿಂದ ಔಟ್..? ಐಪಿಎಲ್ ಆರಂಭಕ್ಕೂ ಡೌಟ್; ಶ್ರೇಯಸ್ ಅಯ್ಯರ್‌ಗೆ ಇದೆಂಥಾ ಬ್ಯಾಡ್ ಲಕ್?
India Vs Australia ODI series : ಭಾರತ Vs ಆಸ್ಟ್ರೇಲಿಯಾ ಏಕದಿನ ಸರಣಿಯ ವೇಳಾಪಟ್ಟಿ :
ಪ್ರಥಮ ಏಕದಿನ: ಮಾರ್ಚ್ 17 (ವಾಂಖೆಡೆ ಕ್ರೀಡಾಂಗಣ, ಮುಂಬೈ)
2ನೇ ಏಕದಿನ: ಮಾರ್ಚ್ 19 (ವೈಎಸ್’ಆರ್ ಕ್ರಿಕೆಟ್ ಮೈದಾನ, ವಿಶಾಖಪಟ್ಟಣ)
3ನೇ ಏಕದಿನ: ಮಾರ್ಚ್ 22 (ಎಂ.ಎ ಚಿದಂಬರಂ ಕ್ರೀಡಾಂಗಣ, ಚೆನ್ನೈ)
India Vs Australia ODI series: Warner returns to India, Steve Smith captains Kangaroo squad