ಮುಂಬೈ : ಏಕದಿನ ಕ್ರಿಕೆಟ್ ವಿಶ್ವಕಪ್‌ನಲ್ಲಿ (World Cup 2023) ವಿರಾಟ್ ಕೊಹ್ಲಿ ಆರ್ಭಟ ಮುಂದುವರಿದಿದೆ. ಶ್ರೀಲಂಕಾ ವಿರುದ್ದ(India Vs Srilanka) ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 88 ರನ್ ಗಳಿಗೆ ಔಟಾಗುವ ಮೂಲಕ ನಿರಾಸೆ ಅನುಭವಿಸಿದ್ದಾರೆ. ಈ ಬಾರಿಯ ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ (Virat Kohli ) ಮೂರನೇ ಬಾರಿಗೆ ಶತಕದ ಸನಿಹದಲ್ಲಿ ಎಡವಿದ್ದಾರೆ.
ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಎರಡು ಪಂದ್ಯವನ್ನು ಹೊರತು ಪಡಿಸಿ ಉಳಿದೆಲ್ಲಾ ಪಂದ್ಯಗಳಲ್ಲಿಯೂ ಭರ್ಜರಿ ಆಟವನ್ನು ಪ್ರದರ್ಶಿಸಿದ್ದಾರೆ. ಒಂದು ಶತಕ ಸಿಡಿಸಿರುವ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ಶತಕ ಬಾರಿಸಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಸರಿಗಟ್ಟುವಲ್ಲಿ ಇಂದು ಕೂಡ ಎಡವಿದ್ದಾರೆ.

ಆಸ್ಟ್ರೇಲಿಯಾ ವಿರುದ್ದದ ಮೊದಲ ಪಂದ್ಯದಲ್ಲಿ 116 ಎಸೆತಗಳನ್ನು ಎದುರಿಸಿರುವ ವಿರಾಟ್ ಕೊಹ್ಲಿ 85 ರನ್‌ಗಳಿಸಿ ಔಟಾಗುವ ಮೂಲಕ ನಿರಾಸೆ ಅನುಭವಿಸಿದ್ದಾರೆ. ಕೇವಲ ಐದು ರನ್ ಗಳಿಸಿದ್ರೆ ಶತಕ ಸಿಡಿಸುವ ಅವಕಾಶವಿತ್ತು. ಅಪ್ಘಾನಿಸ್ತಾನ ತಂಡದ ವಿರುದ್ದದ ಪಂದ್ಯದಲ್ಲಿ 56 ಎಸೆತಗಳಲ್ಲಿ 54 ರನ್ ಬಾರಿಸುವ ಮೂಲಕ ಸತತ ಎರಡನೇ ಬಾರಿ ಅರ್ಧಶತಕ ಬಾರಿಸಿದ್ದಾರೆ.
ಇದನ್ನೂ ಓದಿ : ವಿಶ್ವಕಪ್ 2023: ಭಾರತ Vs ಶ್ರೀಲಂಕಾ ಪಂದ್ಯ, ಏನ್ ಹೇಳುತ್ತೆ ಪಿಚ್ ರಿಪೋರ್ಟ್ ? ಇಲ್ಲಿದೆ ಹವಾಮಾನ ವರದಿ Playing XI
ಆದರೆ ಪಾಕಿಸ್ತಾನ ವಿರುದ್ದದ ಮೂರನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಿರಾಸೆ ಮೂಡಿಸಿದ್ರು, ಕೇವಲ 16 ರನ್‌ಗಳಿಗೆ ವಿಕೆಟ್ ಒಪ್ಪಿಸಿದ್ರು. ಆದರೆ ಬಾಂಗ್ಲಾದೇಶ ವಿರುದ್ದದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಸ್ಪೋಟಕ ಶತಕ ಬಾರಿಸಿದ್ದರು. ಕೇವಲ 97 ಎಸೆತಗಳನ್ನು ಎದುರಿಸಿರುವ ವಿರಾಟ್ ಕೊಹ್ಲಿ 103 ರನ್ ಬಾರಿಸುವ ಮೂಲಕ ಅಜೇಯರಾಗಿ ಉಳಿದಿದ್ದರು. ಅಲ್ಲದೇ ಭಾರತ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು.
ನಂತರ ನ್ಯೂಜಿಲೆಂಡ್ ವಿರುದ್ದದ ಪಂದ್ಯದಲ್ಲಿಯೂ ವಿರಾಟ್ ಕೊಹ್ಲಿ ಅವರ ಆರ್ಭಟ ಮುಂದುವರಿದಿತ್ತು. 104 ಎಸೆತಗಳನ್ನು ಎದುರಿಸಿರುವ ವಿರಾಟ್ ಕೊಹ್ಲಿ 95 ರನ್‌ಗಳಿಗೆ ಔಟಾಗುವ ಮೂಲಕ ಮತ್ತೊಮ್ಮೆ ಶತಕದ ಸನಿಹದಲ್ಲಿಯೇ ವಿಕೆಟ್ ಒಪ್ಪಿಸಿದ್ದಾರೆ. ಸತತ ಅರ್ಧ ಶತಕಗಳನ್ನು ಬಾರಿಸಿದ್ದ ಕೊಹ್ಲಿ ಇಂಗ್ಲೆಂಡ್ ವಿರುದ್ದದ ಪಂದ್ಯದಲ್ಲಿ ನಿರಾಸೆ ಮೂಡಿಸಿದ್ರು, 9 ಎಸೆತಗಳನ್ನು ಎದುರಿಸಿದ್ದರೂ ಕೂಡ ಕೊಹ್ಲಿ ಖಾತೆ ತೆರೆಯದೇ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು.
ಇದನ್ನೂ ಓದಿ: Shaheen Shah Afridi : ಏಕದಿನ ಕ್ರಿಕೆಟ್‌ನಲ್ಲಿ ದಾಖಲೆ ಸೃಷ್ಟಿಸಿದ ಶಾಹೀನ್ ಶಾ ಆಫ್ರಿದಿ
ಶ್ರೀಲಂಕಾ ವಿರುದ್ದದ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರನ್ನು ಬಹುಬೇಗನೆ ಕಳೆದುಕೊಂಡರೂ ಕೂಡ ಒಂದನೇ ಕ್ರಮಾಂಕದಲ್ಲಿ ಕಣಕ್ಕೆ ಇಳಿದ ವಿರಾಟ್ ಕೊಹ್ಲಿ 94 ಎಸೆತಗಳನ್ನು ಎದುರಿಸಿ 88 ರನ್ ಬಾರಿಸಿದ್ದಾರೆ. ವಿರಾಟ್ ಕೊಹ್ಲಿ ಶ್ರೀಲಂಕಾ ವಿರುದ್ದ ಶತಕ ಸಿಡಿಸುವ ಮೂಲಕ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಸರಿಗಟ್ಟುತ್ತಾರೆ ಅಂತಾ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದೆ.

ವಿರಾಟ್ ಕೊಹ್ಲಿ ಇನ್ನು ಒಂದೇ ಒಂದು ಶತಕ ಬಾರಿಸಿದ್ರೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಸರಿಗಟ್ಟಲಿದ್ದಾರೆ. ಆದರೆ ವಿಶ್ವಕಪ್ ನಲ್ಲಿ ಒಟ್ಟು ಮೂರು ಬಾರಿ ಅವಕಾಶವಿದ್ದರೂ ಕೂಡ ಕೊಹ್ಲಿ ಶತಕ ಬಾರಿಸಿಲ್ಲ. ಎರಡು ಬಾರಿ 90 ಕ್ಕೂ ಅಧಿಕ ರನ್ ಗಳಿಸಿದ್ದರೂ ಕೂಡ ಅಂತಿಮ ಹಂತದಲ್ಲಿ ಎಡವಿದ್ದರು.
ಇದನ್ನೂ ಓದಿ : ಐಪಿಎಲ್ 2024 : ಆರ್‌ಸಿಬಿ ತಂಡಕ್ಕೆ ಮತ್ತೆ ವಿರಾಟ್ ಕೊಹ್ಲಿ ನಾಯಕ
ಏಕದಿನ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಅತೀ ಹೆಚ್ಚು ಶತಕ ಬಾರಿಸಿದ ವಿಶ್ವದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ. ಭಾರತ ತಂಡ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ 463 ಪಂದ್ಯಗಳಲ್ಲಿ 49 ಶತಕಗಳನ್ನು ಬಾರಿಸಿದ್ರೆ, ವಿರಾಟ್ ಕೊಹ್ಲಿ ಕೇವಲ 288 ಪಂದ್ಯಗಳಲ್ಲಿ 48 ಶತಕ ಸಿಡಿಸಿದ್ದಾರೆ. ಇನ್ನು ಒಂದೇ ಒಂದು ಶತಕ ಬಾರಿಸಿದ್ರೆ ಸಚಿನ್ ದಾಖಲೆ ಸರಿಗಟ್ಟಲಿದ್ದಾರೆ.
ಒಂದೊಮ್ಮೆ ಎರಡು ಶತಕ ಬಾರಿಸಿದ್ರೆ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ಮೊದಲ ಆಟಗಾರ ಎನಿಸಿಕೊಳ್ಳಲಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ಶತಕ ಸಿಡಿಸಿದ ಆಟಗಾರರ ಪೈಕಿ ಸಚಿನ್ ತೆಂಡೂಲ್ಕರ್ ಮೊದಲ ಸ್ಥಾನದಲ್ಲಿದ್ರೆ, ವಿರಾಟ್ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ 31 ಶತಕಗಳನ್ನು ಸಿಡಿಸಿ ಮೂರನೇ ಸ್ಥಾನದಲ್ಲಿದ್ದಾರೆ.

ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿಪಾಂಟಿಂಗ್ (30) ನಾಲ್ಕನೇ ಸ್ಥಾನ, ಶ್ರೀಲಂಕಾದ ಸನತ್ ಜಯಸೂರ್ಯ (28) ಐದನೇ ಸ್ಥಾನ, ದಕ್ಷಿಣ ಆಫ್ರಿಕಾದ ಹಶೀಮ್ ಆಮ್ಲ (27) ಆರನೇ ಸ್ಥಾನ, ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್, ವೆಸ್ಟ್ ಇಂಡಿಸ್‌ನ ದೈತ್ಯ ಕ್ರಿಸ್ ಗೇಲ್ ಹಾಗೂ ಶ್ರೀಲಂಕಾದ ಕುಮಾರ ಸಂಗಕ್ಕರ ತಲಾ 25 ಶತಕಗಳೊಂದಿಗೆ ಏಳನೇ ಸ್ಥಾನದಲ್ಲಿದ್ದಾರೆ.
ವಿರಾಟ್ ಕೊಹ್ಲಿ ಇದುವರೆಗೆ ಒಟ್ಟು 288 ಏಕದಿನ ಪಂದ್ಯಗಳನ್ನು ಆಡಿದ್ದು, ಈ ಪೈಕಿ 250 ಇನ್ನಿಂಗ್ಸ್‌ಗಳಲ್ಲಿ ಅವರು ಬ್ಯಾಟಿಂಗ್ ನಡೆಸಿದ್ದಾರೆ. ಒಟ್ಟು 11,506 ರನ್ ಬಾರಿಸಿದ್ದಾರೆ. ಏಕದಿನ ಪಂದ್ಯವೊಂದರಲ್ಲಿ ಅತ್ಯಧಿಕ 183 ರನ್ ಬಾರಿಸಿದ್ದಾರೆ. ಕೊಹ್ಲಿ ಇದುವರೆಗೆ ಒಟ್ಟು 48 ಶತಕ ಹಾಗೂ 70 ಅರ್ಧ ಶತಕ ಬಾರಿಸಿದ್ದಾರೆ.
SEMI-FINALS 🔒
India have booked their berth for the #CWC23 knockouts 👏 pic.twitter.com/Q0UVffp6iY
— ICC (@ICC) November 2, 2023
India Vs Sri Lanka 3 Bad Days For Virat Kohli In The World Cup 2023