T20 World Cup : ಕೆ.ಎಲ್ ರಾಹುಲ್ ಏಕಾಂಗಿ ಹೋರಾಟ ವ್ಯರ್ಥ, 2ನೇ ಅಭ್ಯಾಸ ಪಂದ್ಯದಲ್ಲಿ ಭಾರತಕ್ಕೆ ಸೋಲು

ಪರ್ತ್: KL Rahul India Vs WA : ಟಿ20 ವಿಶ್ವಕಪ್ ಟೂರ್ನಿಯ (T20 World Cup 2022) ಸಿದ್ಥತೆಯಲ್ಲಿರುವ ಭಾರತ ವೆಸ್ಟರ್ನ್ ಆಸ್ಟ್ರೇಲಿಯಾ ವಿರುದ್ಧದ 2ನೇ ಅಭ್ಯಾಸ ಪಂದ್ಯದಲ್ಲಿ (India Vs Western Australia) 36 ರನ್’ಗಳ ಸೋಲು ಕಂಡಿದೆ.

ವಾಕಾ ಮೈದಾನದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟರ್ನ್ ಆಸ್ಟ್ರೇಲಿಯಾ ತಂಡ ನಿಗದಿತ 20 ಓವರ್’ಗಳಲ್ಲಿ 8 ವಿಕೆಟ್ ನಷ್ಟಕ್ಕೆ 168 ರನ್’ಗಳ ಸ್ಪರ್ಧಾತ್ಮಕ ಮೊತ್ತ ಕಲೆ ಹಾಕಿತು. ಡಾರ್ಸಿ ಶಾರ್ಟ್ (52) ಮತ್ತು ನಿಕ್ ಹಾಬ್ಸನ್ (64) ಅರ್ಧಶತಕಗಳನ್ನು ಬಾರಿಸಿದ ವೆಸ್ಟರ್ನ್ ಆಸ್ಟ್ರೇಲಿಯಾ ತಂಡದ ಉತ್ತಮ ಮೊತ್ತಕ್ಕೆ ಕಾರಣರಾದರು.

ಕೆ.ಎಲ್.ರಾಹುಲ್‌ (KL Rahul India Vs WA) ಏಕಾಂಗಿ ಹೋರಾಟ

ಗುರಿ ಬೆನ್ನಟ್ಟಿದ ಭಾರತ ಪರ ನಾಯಕ ಕೆ.ಎಲ್ ರಾಹುಲ್ (KL Rahul) ಹೊರತು ಪಡಿಸಿದರೆ ಬೇರಾವ ಆಟಗಾರನೂ ಜವಾಬ್ದಾರಿ ಪ್ರದರ್ಶಿಸಲಿಲ್ಲ. ರಿಷಭ್ ಪಂತ್(9), ದೀಪಕ್ ಹೂಡ(6), ಹಾರ್ದಿಕ್ ಪಾಂಡ್ಯ(17), ಅಕ್ಷರ್ ಪಟೇಲ್(2) ಮತ್ತು ದಿನೇಶ್ ಕಾರ್ತಿಕ್(10) ತಂಡಕ್ಕೆ ಕೈಕೊಟ್ಟರು. ಅಭ್ಯಾಸ ಪಂದ್ಯದಲ್ಲಿ ಭಾರತದ ನಾಯಕತ್ವ ವಹಿಸಿದ ಕೆ.ಎಲ್ ರಾಹುಲ್ 55 ಎಸೆತಗಳಲ್ಲಿ 9 ಬೌಂಡರಿ ಹಾಗೂ 2 ಸಿಕ್ಸರ್’ಗಳ ನೆರವಿನಿಂದ 74 ರನ್ ಗಳಿಸಿ ಏಕಾಂಗಿ ಹೋರಾಟ ನಡೆಸಿದರು. ಅಂತಿಮವಾಗಿ ಭಾರತ 20 ಓವರ್’ಗಳಲ್ಲಿ 8 ವಿಕೆಟ್ ನಷ್ಟಕ್ಕೆ 132 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು. ನಾಯಕ ರೋಹಿತ್ ಶರ್ಮಾ ಮತ್ತು ಮಾಜಿ ನಾಯಕ ರೋಹಿತ್ ಶರ್ಮಾ 2ನೇ ಅಭ್ಯಾಸ ಪಂದ್ಯದಿಂದ ಹೊರಗುಳಿದಿದ್ದರು.

ಪರ್ತ್’ನಲ್ಲಿ ಅಭ್ಯಾಸ ಪಂದ್ಯಗಳನ್ನು ಮುಗಿಸಿರುವ ಟೀಮ್ ಇಂಡಿಯಾ ಶನಿವಾರ ಬ್ರಿಸ್ಬೇನ್’ಗೆ ಪ್ರಯಾಣ ಬೆಳೆಸಲಿದೆ. ಬ್ರಿಸ್ಬೇನ್’ನಲ್ಲಿ ಭಾರತ ವಿಶ್ವಚಾಂಪಿಯನ್ ಆಸ್ಟ್ರೇಲಿಯಾ (ಅಕ್ಟೋಬರ್ 17) ಹಾಗೂ ನ್ಯೂಜಿಲೆಂಡ್ ವಿರುದ್ಧ (ಅಕ್ಟೋೂರ್ 19) ಅಭ್ಯಾಸ ಪಂದ್ಯಗಳನ್ನಾಡಲಿದೆ. ಅಕ್ಟೋಬರ್ 23ರಂದು ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್’ನಲ್ಲಿ ನಡೆಯುವ ವಿಶ್ವಕಪ್ ಟೂರ್ನಿಯ ತನ್ನ ಮೊದಲ ಪಂದ್ಯದಲ್ಲಿ ಭಾರತ, ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ.

ಇದನ್ನೂ ಓದಿ : Prithvi Shaw: “ಭಾರತ ತಂಡದಲ್ಲಿ ಸ್ಥಾನ ಪಡೆಯಲು ಇನ್ನೇನು ಮಾಡ್ಬೇಕು ಹೇಳಿ..” ಬಿಸಿಸಿಐ ವಿರುದ್ಧ ಪೃಥ್ವಿ ಶಾ ಆಕ್ರೋಶ ಸ್ಫೋಟ

ಇದನ್ನೂ ಓದಿ : Sourav Ganguly snubs by BCCI : ಬಿಸಿಸಿಐ ಅಧ್ಯಕ್ಷರಾಗಿ ಮುಂದುವರಿಯಲು ಬಯಸಿದ್ದ ಗಂಗೂಲಿಗೆ “ಶಾ” ಶಾಕ್!

India Vs WA KL Rahul Led India, India Lost T20 World Cup Practice Match

Comments are closed.