ಸೋಮವಾರ, ಏಪ್ರಿಲ್ 28, 2025
HomeSportsCricketVirat Kohli Dropped : ವಿಂಡೀಸ್ ಟಿ20 ಸರಣಿಗೆ ಟೀಮ್ ಇಂಡಿಯಾ ಪ್ರಕಟ ; ಇದೇ...

Virat Kohli Dropped : ವಿಂಡೀಸ್ ಟಿ20 ಸರಣಿಗೆ ಟೀಮ್ ಇಂಡಿಯಾ ಪ್ರಕಟ ; ಇದೇ ಮೊದಲ ಬಾರಿ ಭಾರತ ತಂಡದಿಂದ ವಿರಾಟ್ ಕೊಹ್ಲಿ ಡ್ರಾಪ್

- Advertisement -

ಬೆಂಗಳೂರು: ವೆಸ್ಟ್ ಇಂಡೀಸ್ ಪ್ರವಾಸದ (India tour of West Indies) ಟಿ20 ಸರಣಿಗೆ ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದ್ದು, ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರನ್ನು ತಂಡದಿಂದ (Virat Kohli Dropped)ಕೈಬಿಡಲಾಗಿದೆ. ತಮ್ಮ ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ ಇದೇ ಮೊದಲ ಬಾರಿ ವಿರಾಟ್ ಕೊಹ್ಲಿ ಟೀಮ್ ಇಂಡಿಯಾದಿಂದ ಡ್ರಾಪ್ ಆಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ದಯನೀಯ ವೈಫಲ್ಯ ಎದುರಿಸುತ್ತಿರುವ ಕೊಹ್ಲಿ, ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ ಎರಡೂ ಪಂದ್ಯಗಳಲ್ಲಿ ವಿಫಲರಾಗಿದ್ದರು. ಸರಣಿಯ 2ನೇ ಪಂದ್ಯದಲ್ಲಿ ಕೇವಲ 1 ರನ್ ಗಳಿಸಿ ಔಟಾಗಿದ್ದ ವಿರಾಟ್, 2ನೇ ಪಂದ್ಯದಲ್ಲಿ 11 ರನ್ ಗಳಿಸಿದ್ದರು. ಅದಕ್ಕೂ ಮುನ್ನ ನಡೆದ ಟೆಸ್ಟ್ ಪಂದ್ಯದಲ್ಲೂ ಕೊಹ್ಲಿ ದೊಡ್ಡ ಮೊತ್ತ ಗಳಿಸುವಲ್ಲಿ ಎಡವಿದ್ದರು.

ಔಟ್ ಆಫ್ ಫಾರ್ಮ್ ಕೊಹ್ಲಿಯವರನ್ನು ವಿಂಡೀಸ್ ವಿರುದ್ಧದ ಟಿ20 ಸರಣಿಗೆ ಕೈಬಿಡಲಾಗಿದ್ದು, ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಕನ್ನಡಿಗ ಕೆ.ಎಲ್ ರಾಹುಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಆದರೆ ಅದಕ್ಕೂ ಮೊದಲು ರಾಹುಲ್ ಫಿಟ್ನೆಸ್ ಸಾಬೀತು ಪಡಿಸಬೇಕಿದೆ. ವೆಸ್ಟ್ ಇಂಡೀಸ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಜುಲೈ 29ರಂದು ನಡೆಯಲಿದೆ. ಇದಕ್ಕೂ ಮೊದಲು ಭಾರತ ತಂಡ ಕೆರೆಬಿಯನ್ನರ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯನ್ನಾಡಲಿದ್ದು, ಅನುಭವಿ ಓಪನರ್ ಶಿಖರ್ ಧವನ್ ತಂಡವನ್ನು ಮುನ್ನಡೆಸಲಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ಅಕ್ಷರ್ ಪಟೇಲ್, ಆರ್.ಅಶ್ವಿನ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಭುವನೇಶ್ವರ್ ಕುಮಾರ್, ಆವೇಶ್ ಖಾನ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಭಾರತ Vs ವೆಸ್ಟ್ ಇಂಡೀಸ್ ಟಿ20 ಸರಣಿಯ ವೇಳಾಪಟ್ಟಿ
ಮೊದಲ ಟಿ20: ಜುಲೈ 29
2ನೇ ಟಿ20: ಆಗಸ್ಟ್ 01
3ನೇ ಟಿ20: ಆಗಸ್ಟ್ 02
4ನೇ ಟಿ20: ಆಗಸ್ಟ್ 06
5ನೇ ಟಿ20: ಆಗಸ್ಟ್ 07

ಇದನ್ನೂ ಓದಿ : Kickboxer Nikhil Suresh Dies : ಕಿಕ್ ಬಾಕ್ಸಿಂಗ್ ಪಂದ್ಯಾವಳಿ ಎಡವಟ್ಟು: ಎದುರಾಳಿ ಪಂಚ್ ಗೆ ಪ್ರಾಣಬಿಟ್ಟ ಬಾಕ್ಸರ್‌

ಇದನ್ನೂ ಓದಿ : ಬಾಳೆಹಣ್ಣಿಗೆ ₹35 ಲಕ್ಷ ಬಿಲ್, ₹1.74 ಕೋಟಿ ಅಡುಗೆ ಬಿಲ್‌, ಸುಲಿಗೆ ಕೊಲೆ ಬೆದರಿಕೆ : ಇದು ಕ್ರಿಕೆಟ್ ಸಂಸ್ಥೆಯ ಕರ್ಮಕಾಂಡ

ಇದನ್ನೂ ಓದಿ : Team India has got New Spinner : ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಸ್ಪಿನ್ ಬೌಲಿಂಗ್ ಮಾಡಿದ್ದನ್ನು ನೋಡಿದ್ದೀರಾ ?

India vs west indies T20 series Virat Kohli Dropped

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular