Mithali Raj Join BJP : ಬಿಜೆಪಿ ಸೇರ್ತಾರಾ ಸ್ಟಾರ್ ಮಹಿಳಾ ಕ್ರಿಕೆಟರ್ ಮಿಥಾಲಿ ರಾಜ್ ?

ಹೈದರಾಬಾದ್: ಭಾರತ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ, ಮಹಿಳಾ ಕ್ರಿಕೆಟ್’ನ ದಿಗ್ಗಜ ಆಟಗಾರ್ತಿ ಮಿಥಾಲಿ ರಾಜ್ (Mithali Raj) ಬಿಜೆಪಿ ಸೇರಲಿದ್ದಾರಾ? (Mithali Raj Join BJP)ಬಿಜೆಪಿಯಿಂದಲೇ ರಾಜಕೀಯ ಇನ್ನಿಂಗ್ಸ್ ಶುರು ಮಾಡಲಿದ್ದಾರಾ? ಬಿಜೆಪಿ ರಾಷ್ಟ್ರಾಧ್ಯಕ್ಷರನ್ನು ಮಿಥಾಲಿ ರಾಜ್ ಇತ್ತೀಚೆಗೆ ಭೇಟಿ ಮಾಡಿರುವುದು ಇಂಥದ್ದೊಂದು ಪ್ರಶ್ನೆಯನ್ನು ಹುಟ್ಟು ಹಾಕಿದೆ.

ಕಳೆದ ಜೂನ್ ತಿಂಗಳಲ್ಲಿ ಅಂತಾರಾಷ್ಟ್ರೀಯ ಹಾಗೂ ದೇಶೀಯ ಕ್ರಿಕೆಟ್’ಗೆ ನಿವೃತ್ತಿ ಘೋಷಿಸಿದ್ದ ಮಿಥಾಲಿ ರಾಜ್, ಶನಿವಾರ ಹೈದರಾಬಾದ್’ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರನ್ನು (BJP National President JP Nadda) ಭೇಟಿಯಾಗಿದ್ದಾರೆ. ತೆಲಂಗಾಣದಲ್ಲಿ ನೆಲೆ ವಿಸ್ತರಿಸಿಕೊಳ್ಳಲು ಬಿಜೆಪಿ ಪ್ರಯತ್ನಿಸುತ್ತಿರುವ ಹೊತ್ತಲ್ಲೇ ನಡ್ಡಾರನ್ನು ಮಿಥಾಲಿ ರಾಜ್ ಭೇಟಿ ಮಾಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಹೈದರಾಬಾದ್’ನವರಾದ 40 ವರ್ಷದ ಮಿಥಾಲಿ ದೊರೈರಾಜ್ ತೆಲಂಗಾಣ ರಾಜ್ಯದ ಅತ್ಯಂತ ಪ್ರಸಿದ್ಧ ಸೆಲೆಬ್ರಿಟಿ. ಅವರನ್ನು ಪಕ್ಷಕ್ಕೆ ಸೆಳೆಯುವ ಮೂಲಕ ತೆಲಂಗಾಣದಲ್ಲಿ ನೆಲೆ ಕಂಡುಕೊಳ್ಳಲು ಬಿಜೆಪಿ ಮುಂದಾಗಿದೆ. ಇದರ ಭಾಗವಾಗಿಯೇ ಭಾರತ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಮಿಥಾಲಿ ರಾಜ್ ಅವರನ್ನು ಪಕ್ಷಕ್ಕೆ ಸೆಳೆಯಲು ಬಿಜೆಪಿ ಮುಂದಾಗಿದೆ ಎನ್ನಲಾಗ್ತಿದೆ. ಈ ಹಿನ್ನೆಲೆಯಲ್ಲಿ ಮಿಥಾಲಿ ರಾಜ್ ಅವರನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಹೈದರಾಬಾದ್’ನಲ್ಲಿ ಭೇಟಿ ಮಾಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಹೈದರಾಬಾದ್’ನಲ್ಲೇ ಕ್ರೀಡಾ ವೃತ್ತಿಬದುಕು ಕಂಡುಕೊಂಡಿದ್ದ ದೇಶದ ಸ್ಟಾರ್ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಗ್ ಈಗಾಗಲೇ ಬಿಜೆಪಿ ಸೇರಿ ರಾಜಕೀಯ ಇನ್ನಿಂಗ್ಸ್ ಆರಂಭಿಸಿದ್ದಾರೆ. ಇದೀಗ ಖ್ಯಾತ ಕ್ರಿಕೆಟರ್ ಮಿಥಾಲಿ ರಾಜ್ ಅವರನ್ನು ಪಕ್ಷಕ್ಕೆ ಸೆಳೆಯಲು ಬಿಜೆಪಿ ಮುಂದಾಗಿದೆ.

ಇದನ್ನೂ ಓದಿ: ಹಾರ್ದಿಕ್ ಪಾಂಡ್ಯಗೆ ಮ್ಯಾಚ್ ಫಿನಿಷಿಂಗ್ ಪಾಠ ಕಲಿಸಿದ ದ್ರೋಣಾಚಾರ್ಯ ಇವರೇ

ಭಾರತ ಪರ 12 ಟೆಸ್ಟ್, 232 ಏಕದಿನ ಹಾಗೂ 89 ಟಿ20 ಪಂದ್ಯಗಳನ್ನಾಡಿರುವ ಮಿಥಾಲಿ ರಾಜ್, ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್’ನಲ್ಲಿ ಒಟ್ಟು 8 ಶತಕಗಳ ನೆರವಿನಿಂದ 10,868 ರನ್ ಕಲೆ ಹಾಕಿದ್ದಾರೆ. ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್’ನಲ್ಲಿ 10 ಸಾವಿರ ರನ್ ಕಲೆ ಹಾಕಿದ ಜಗತ್ತಿನ ಮೊದಲ ಆಟಗಾರ್ತಿ ಎಂಬ ವಿಶ್ವದಾಖಲೆ ಮಿಥಾಲಿ ರಾಜ್ ಅವರ ಹೆಸರಲ್ಲಿದೆ.

Indian Cricket legend Mithali Raj to Join BJP National President JP Nadda meet in Hyderabad

Comments are closed.