Mumbai Indians Hardik Pandya: ಇಂಡಿಯನ್ ಪ್ರೀಮಿಯರ್ ಲೀಗ್‌ಗೆ (Indian Premier League 2024) ಮುಂಬೈ ಇಂಡಿಯನ್ಸ್ ನಾಯಕನಾಗಿ ಹಾರ್ದಿಕ್ ಪಾಂಡ್ಯ ಘೋಷಣೆ ಮಾಡಿತ್ತು. ಆದ್ರೆ ಪಾದದ ಗಾಯದಿಂದ ಬಳಲುತ್ತಿರುವ ಹಾರ್ದಿಕ್ ಪಾಂಡ್ಯ ಈ ಬಾರಿ ಐಪಿಎಲ್‌ನಿಂದ ಹೊರಗುಳಿಯುವ ಸಾಧ್ಯತೆಯಿದೆ. ಹಾರ್ದಿಕ್ ಪಾಂಡ್ಯ ಬದಲು ಮುಂಬೈ ಇಂಡಿಯನ್ಸ್ ತಂಡ ಮುನ್ನೆಡೆಸುವ ಆಟಗಾರರು ಯಾರು ಅನ್ನೋ ಸ್ಟೋರಿ ಇಲ್ಲಿದೆ.
ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿದ್ದ ರೋಹಿತ್ ಶರ್ಮಾ ಅವರ ಬದಲು ಹಾರ್ದಿಕ್ ಪಾಂಡ್ಯವನ್ನು ನೂತನ ನಾಯಕನನ್ನಾಗಿ ನೇಮಕ ಮಾಡಲಾಗಿತ್ತು. ಐದು ಬಾರಿಯ ಐಪಿಎಲ್ ಚಾಂಪಿಯನ್ ನಾಯಕ ರೋಹಿತ್ ಶರ್ಮಾ ಅವರನ್ನು ಬದಲಾಯಿಸುವ ಸಲುವಾಗಿ ಗುಜರಾತ್ ಟೈಟಾನ್ಸ್ ತಂಡದ ನಾಯಕನಾಗಿದ್ದ ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ಕರೆತಂದಿತ್ತು.

ಏಕದಿನ ವಿಶ್ವಕಪ್‌ನ ಲೀಗ್ ಹಂತದಲ್ಲಿ ಬಾಂಗ್ಲಾದೇಶ ವಿರುದ್ದದ ಪಂದ್ಯಾವಳಿಯಲ್ಲಿ ಹಾರ್ದಿಕ್ ಪಾಂಡ್ಯ ಪಾದದ ಗಾಯಕ್ಕೆ ತುತ್ತಾಗಿದ್ದರು. ಆದರೆ ಇದುವರೆಗೂ ಹಾರ್ದಿಕ್ ಪಾಂಡ್ಯ ಗಾಯದಿಂದ ಚೇತರಿಸಿಕೊಂಡಿಲ್ಲ. ಅಷ್ಟೇ ಅಲ್ಲ ಅವರು ಗಾಯದಿಂದ ಚೇತರಿಸಿಕೊಳ್ಳಲು ಇನ್ನಷ್ಟು ಸಮಯ ಹಿಡಿಯಬಹುದು ಎಂದು ನಿರೀಕ್ಷಿಸಲಾಗುತ್ತಿದೆ.
ಹಾರ್ದಿಕ್ ಪಾಂಡ್ಯ ಈ ಬಾರಿಯ ಐಪಿಎಲ್‌ನಿಂದ ಹೊರಗೆ ಉಳಿದ್ರೆ ಮುಂಬೈ ಇಂಡಿಯನ್ಸ್ ತಂಡವನ್ನು ಯಾರು ಮುನ್ನೆಡೆಸುತ್ತಾರೆ ಅನ್ನೋ ಅಂತಾ ನೋಡೋದಾದ್ರೆ. ರೋಹಿತ್ ಶರ್ಮಾ, ಸೂರ್ಯ ಕುಮಾರ್ ಯಾದವ್, ಜಸ್ಪ್ರೀತ್ ಬೂಮ್ರಾ ಅವರ ಪರ ಒಲವು ವ್ಯಕ್ತವಾಗುತ್ತಿದೆ. ರೋಹಿತ್ ಶರ್ಮಾ ಟೀಂ ಇಂಡಿಯಾದ ಟೆಸ್ಟ್ ತಂಡದ ನಾಯಕನಾಗಿದ್ದಾರೆ.
ಇದನ್ನೂ ಓದಿ : ಕರ್ನಾಟಕ ರಣಜಿ ತಂಡದ ನಾಯಕ ಮಯಾಂಕ್ ಅಗರ್ವಾಲ್ ಐಸಿಯು ಸೇರಿದ್ದೇಕೆ ? ಹೇಗಿದೆ ಆರೋಗ್ಯ ಸ್ಥಿತಿ
ರೋಹಿತ್ ಶರ್ಮಾ
IPL 2024 ರಲ್ಲಿ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ಪರ ಆಡಲು ಸಾಧ್ಯವಾಗದೇ ಇದ್ರೆ ರೋಹಿತ್ ಶರ್ಮಾ ಅವರನ್ನೇ ಮತ್ತೊಂದು ಋತುವಿಗೆ ನಾಯಕನಾಗಿ ನೇಮಕ ಮಾಡುವ ಸಾಧ್ಯತೆಯಿದೆ. ಐದು ಬಾರಿ ತಂಡವನ್ನು ಚಾಂಪಿಯನ್ ಮಾಡಿದ್ದರೂ ಕೂಡ ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ವಜಾಗೊಳಿಸಿರುವುದು ಅನ್ಯಾಯ ಎಂಬ ಬಗ್ಗೆ ಚರ್ಚೆ ನಡೆದಿತ್ತು.

ಸೂರ್ಯಕುಮಾರ್ ಯಾದವ್
ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವಕ್ಕೆ ಕೇಳಿಬರುತ್ತಿರುವ ಮತ್ತೊಂದು ಹೆಸರು ಸೂರ್ಯ ಕುಮಾರ್ ಯಾದವ್. IPL 2024ರ ಐಪಿಎಲ್‌ನಲ್ಲಿ ಸೂರ್ಯ ಕುಮಾರ್ ಯಾದವ್ ಹಾರ್ದಿಕ್ ಪಾಂಡ್ಯ ವಿರುದ್ದ ನಾಯಕನಾಗುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಈಗಾಗಲೇ ಟೀಂ ಇಂಡಿಯಾದ ನಾಯಕನಾಗಿ ಮುನ್ನೆಡೆಸಿದ್ದರು. ಆಸ್ಟ್ರೇಲಿಯಾ ವಿರುದ್ದದ T20I ಸರಣಿಯನ್ನು ಸ್ವದೇಶದಲ್ಲಿ ಗೆದ್ದು ನಂತರ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ T20I ಸರಣಿಯಲ್ಲಿ 1-1 ಡ್ರಾ ಸಾಧಿಸಿದರು.
ಇದನ್ನೂ ಓದಿ : ಕ್ರಿಕೆಟ್ ಪ್ರಿಯರಿಗೆ ಗುಡ್‌ನ್ಯೂಸ್ : ಈ ಬಾರಿಯೂ JioCinema ನಲ್ಲಿ IPL 2024 ಉಚಿತ

ಜಸ್ಪ್ರೀತ್ ಬುಮ್ರಾ
ಜಸ್ಪ್ರೀತ್ ಬುಮ್ರಾ ಭಾರತ ತಂಡದ ಯಾರ್ಕರ್ ಸ್ಪೆಷಲಿಸ್ಟ್ ಬೌಲರ್. ಸದ್ಯ ಟೀಂ ಇಂಡಿಯಾದ ನಾಯಕತ್ವಕ್ಕೆ ಬೂಮ್ತಾ ಹೆಸರು ಕೂಡ ಕೇಳಿಬಂದಿತ್ತು. 2013 ರಲ್ಲಿ ಮುಂಬೈ ಇಂಡಿಯನ್ಸ್ ಪರ IPL ಪಾದಾರ್ಪಣೆ ಮಾಡಿದರು. ಅಲ್ಲದೇ ಇದುವರೆಗೂ ಬೂಮ್ರಾ ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ಐದು ಬಾರಿ ಐಪಿಎಲ್ ಪ್ರಶಸ್ತಿ ಜಯಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಸದ್ಯ ಹಾರ್ದಿಕ್ ಪಾಂಡ್ಯ ಬದಲು ಬೂಮ್ರಾ ಮುಂಬೈ ಇಂಡಿಯನ್ಸ್ ತಂಡದ ನಾಯಕನರಾಗುವ ಸಾಧ್ಯತೆಯಿದೆ.
Indian Premier League -IPL 2024 These three players will be the captain of Mumbai Indians instead of Hardik Pandya