ಇಂಡಿಯನ್ ಪ್ರೀಮಿಯರ್ ಲೀಗ್ 2024 (IPL 2024)ರ ಆರಂಭಕ್ಕೆ ಸಿದ್ದತೆಗಳು ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಐಪಿಎಲ್ ಮಿನಿ ಹರಾಜು ನಡೆಯಲಿದೆ. ಈ ನಡುವಲ್ಲೇ ಆರ್‌ಸಿಬಿ ತಂಡ ಆಟಗಾರ, ಇಂಗ್ಲೆಂಡ್ ತಂಡದ ಖ್ಯಾತ ಆಲ್‌ರೌಂಡರ್ ಡೇವಿಡ್ ವಿಲ್ಲಿ (david willey) ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
ಎಲ್ಲಾ 10 ಫ್ರಾಂಚೈಸಿಗಳು ಇಂಡಿಯನ್ ಪ್ರೀಮಿಯಲ್ ಲೀಗ್ (IPL 2024) 17 ನೇ ಆವೃತ್ತಿಗೆ ಸಜ್ಜಾಗುತ್ತಿವೆ. ಈಗಾಗಲೇ ಆಯೋಜಕರು ಈ ಬಾರಿ ಐಪಿಲ್ ಪಂದ್ಯಾವಳಿಯನ್ನು ಅದ್ದೂರಿಯಾಗಿ ಆಚರಿಸಲು ಮುಂದಾಗಿದ್ದಾರೆ. ಡಿಸೆಂಬರ್ ತಿಂಗಳಲ್ಲಿ ಹರಾಜು ನಡೆಸಲು ದಿನಾಂಕ ಫಿಕ್ಸ್ ಆಗಿದೆ. ನೆಚ್ಚಿನ ಆಟಗಾರ ರನ್ನು ಮಿನಿ ಹರಾಜು ಮೂಲಕ ಪ್ರಾಂಚೈಸಿಗಳು ಖರೀದಿ ಮಾಡುತ್ತಿವೆ.

ಆರ್‌ಸಿಬಿ ತಂಡದ ಸ್ಟಾರ್ ಆಟಗಾರ ಡೇವಿಡ್ ವಿಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. 2015ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಇಂಗ್ಲೆಂಡ್ ತಂಡದ ಪರ ಪದಾರ್ಪಣೆ ಮಾಡಿದ್ದ ಡೇವಿಡ್ ವಿಲ್ಲಿ ಅವರು, ಇದುವರೆಗೆ ಒಟ್ಟು 70 ಏಕದಿನ ಪಂದ್ಯಗಳನ್ನು ಆಡಿದ್ದು, 627 ರನ್ ಗಳಿಸಿದ್ದಾರೆ. ಆಲ್‌ರೌಂಡರ್ ಆಗಿರುವ ಡೇವಿಡ್ ವಿಲ್ಲಿ 94 ವಿಕೆಟ್ ಪಡೆದುಕೊMಡಿದ್ದಾರೆ.
ಇದನ್ನೂ ಓದಿ : ಭಾರತಕ್ಕೆ ಸೋಲೇ ಇಲ್ಲ, ಸತತ 6ನೇ ಗೆಲುವು : ವಿಶ್ವಕಪ್ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಕುಸಿದ ಇಂಗ್ಲೆಂಡ್
ಇನ್ನು ಟಿ20 ಕ್ರಿಕೆಟ್‌ನಲ್ಲಿಯೂ ಡೇವಿಡ್ ವಿಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಒಟ್ಟು 43 ಪಂದ್ಯಗಳನ್ನು ಆಡಿದ್ದು, 226 ರನ್ ಗಳಿಸಿದ್ದಾರೆ. ಅಲ್ಲದೇ 51 ವಿಕೆಟ್ ಕಬಳಿಸಿದ್ದಾರೆ. ಸದ್ಯ ವಿಶ್ವ ಕ್ರಿಕೆಟ್‌ನ ಖ್ಯಾತ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಡೇವಿಡ್ ವಿಲ್ಲಿ ಅವರು ಸ್ಥಾನ ಪಡೆದುಕೊಂಡಿದ್ದರು. ಅಲ್ಲದೇ ಐಪಿಎಲ್‌ನಲ್ಲಿಯೂ ಹವಾ ಸೃಷ್ಟಿಸಿದ್ದರು.
ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಮಾಜಿ ಚಾಂಪಿಯನ್ ಇಂಗ್ಲೆಂಡ್ ತಂಡ ಹೀನಾಯ ಸೋಲನ್ನು ಕಂಡಿದೆ. ಸತತ ಸೋಲುಗಳಿಂದಲೇ ಕಂಗೆಟ್ಟಿದೆ. ಈ ಬಾರಿಯ ವಿಶ್ವಕಪ್‌ನಲ್ಲಿ ಲೀಗ್ ಹಂತದಲ್ಲಿಯೇ ವಿಶ್ವಕಪ್‌ನಿಂದ ನಿರ್ಗಮಿಸಲು ಸಜ್ಜಾಗಿದೆ. ಇಂಗ್ಲೆಂಡ್ ತಂಡದ ಪ್ರದರ್ಶನದ ಕುರಿತು ವಿಶ್ವ ಕ್ರಿಕೆಟ್‌ನಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.
ಇದನ್ನೂ ಓದಿ : Shaheen Shah Afridi : ಏಕದಿನ ಕ್ರಿಕೆಟ್‌ನಲ್ಲಿ ದಾಖಲೆ ಸೃಷ್ಟಿಸಿದ ಶಾಹೀನ್ ಶಾ ಆಫ್ರಿದಿ
ಈ ನಡುವಲ್ಲೇ ಡೇವಿಡ್ ವಿಲ್ಲಿ ಅವರು ದಿಢೀರ್ ನಿವೃತ್ತಿ ಘೋಷಿಸಿರುವುದು ಕ್ರಿಕೆಟ್ ಅಭಿಮಾನಿಗಳಿಗೆ ಆಘಾತ ಮೂಡಿಸಿದೆ. ICC ODI ವರ್ಲ್ಡ್ ಕಪ್ 2023ರ ಕೊನೆಯಲ್ಲಿ ನಾನು ಎಲ್ಲಾ ಮಾದರಿಯ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಆಗುವ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ ಎಂದು ಡೇವಿಡ್ ವಿಲ್ಲಿ ಹೇಳಿಕೊಂಡಿದ್ದಾರೆ.

ಅತ್ಯುತ್ತಮವಾಗಿ ಕ್ರಿಕೆಟ್ ಆಡುವ ಸಮಯದಲ್ಲಿ ಮೈದಾನದ ಒಳಗೆ ಮತ್ತು ಹೊರಗೆ ಹೆಚ್ಚಿನದ್ದನ್ನು ನೀಡಬೇಕೆಂದು ನಾನು ಭಾವಿಸಿದ್ದೇನೆ. ನನ್ನ ಈ ನಿರ್ಧಾರಕ್ಕೂ ವಿಶ್ವಕಪ್ 2023 ರ ಸಮಯದಲ್ಲಿ ನಮ್ಮ ಪ್ರದರ್ಶನಕ್ಕೂ ಯಾವುದೇ ಸಂಬಂಧವಿಲ್ಲ. ಇಂಗ್ಲೆಂಡ್ ತಂಡದ ಭಾಗವಾಗಿ ಇರುವುದಕ್ಕೆ ನನಗೆ ಹೆಮ್ಮೆ ಇದೆ ಎಂದಿದ್ದಾರೆ.
ಇದನ್ನೂ ಓದಿ : ಭಾರತ – ಶ್ರೀಲಂಕಾ ಪಂದ್ಯಕ್ಕೆ ಕಣಕ್ಕೆ ಇಳಿಯುತ್ತಾರಾ ಹಾರ್ದಿಕ್ ಪಾಂಡ್ಯ !
2023ರ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ತಂಡ ಪಾಕಿಸ್ತಾನ ವಿರುದ್ದ ನಡೆಯಲಿರುವ ಪಂದ್ಯ ಡೇವಿಡ್ ವಿಲ್ಲಿ ಪಾಲಿಗೆ ಕೊನೆಯ ಅಂತರಾಷ್ಟ್ರೀಯ ಪಂದ್ಯವಾಗುವ ಸಾಧ್ಯತೆಯಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಲು ನಿರ್ಧರಿಸಿರುವುದು ಆರ್‌ಸಿಬಿ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.
8 ವರ್ಷಗಳ ಕಾಲ ಇಂಗ್ಲೆಂಡ್ ತಂಡದ ಭಾಗವಾಗಿದ್ದ ಡೇವಿಡ್ ವಿಲ್ಲಿ ಸದ್ಯ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ ಆದರೆ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಮುಂದುವರಿಯುವ ಸಾದ್ಯತೆಯಿದೆ. ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಕಣಕ್ಕಿಳಿಯಲಿದ್ದಾರೆ ಎನ್ನಲಾಗುತ್ತಿದೆ.
IPL 2024 RCB Star Player david willey Announces Sudden Retirement