ಮೊದಲ ಪ್ರೋಮೋ ರಿಲೀಸ್, ಭರ್ಜರಿ ಸ್ಟೆಪ್ಸ್ ಹಾಕಿದ ರೋಹಿತ್, ರಾಹುಲ್, ಪಾಂಡ್ಯ

ಮುಂಬೈ : ಐಪಿಎಲ್ 16ನೇ (IPL 2023) ಆವೃತ್ತಿಯ ಟೂರ್ನಿ ಆರಂಭಿಕ್ಕಿನ್ನು 21 ದಿನಗಳಷ್ಟೇ ಬಾಕಿ. ಜಗತ್ತಿನ ಶ್ರೀಮಂತ ಕ್ರಿಕೆಟ್ ಲೀಗ್ ಆರಂಭಕ್ಕೆ ಕೌಂಟ್ ಡೌನ್ ಶುರುವಾಗಿದ್ದು, ಟೂರ್ನಿಯ ಪ್ರಸಾರದ ಹಕ್ಕು ಹೊಂದಿರುವ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ಮೊದಲ ಪ್ರೋಮೋ ರಿಲೀಸ್ (IPL First promo ) ಮಾಡಿದೆ.

ಐಪಿಎಲ್ ಪ್ರೋಮೋದಲ್ಲಿ 5 ಬಾರಿಯ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ (Rohit Sharma), ಲಕ್ನೋ ಸೂಪರ್ ಜೈಂಟ್ಸ್ ತಂಡದ ಸಾರಥಿ ಕೆ.ಎಲ್ ರಾಹುಲ್ (KL Rahul) ಮತ್ತು ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಕಾಣಿಸಿಕೊಂಡಿದ್ದಾರೆ. ಈ ಮೂವರೂ ನಾಯಕರು ಐಪಿಎಲ್ ಪ್ರೋಮೋದಲ್ಲಿ ಸ್ಟೆಪ್ಸ್ ಹಾಕಿದ್ದು, ಪ್ರೋಮೋ ಈಗಾಗಲೇ ಸಾಕಷ್ಟು ವೈರಲ್ ಆಗಿದೆ.

ಮುಂದಿನ ಪ್ರೋಮೋದಲ್ಲಿ ಟೀಮ್ ಇಂಡಿಯಾದ ಮತ್ತಷ್ಟು ಆಟಗಾರರು ಕಾಣಿಸಿಕೊಳ್ಳಲಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ, ಕೋಲ್ಕೊತಾ ನೈಟ್ ರೈಡರ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಅವರ ಪ್ರೋಮೋ ರೆಡಿಯಾಗಿದ್ದು, ಕೆಲವೇ ದಿನಗಳಲ್ಲಿ ರಿಲೀಸ್ ಆಗಲಿದೆ.

ಇದನ್ನೂ ಓದಿ : India Vs Australia test : ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಒಂದು ಲಕ್ಷ ಪ್ರೇಕ್ಷಕರು, ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ವಿಶ್ವದಾಖಲೆ

ಇದನ್ನೂ ಓದಿ : India Vs Australia : ಭಾರತ Vs ಆಸ್ಟ್ರೇಲಿಯಾ ಕ್ರಿಕೆಟ್ ಬಾಂಧವ್ಯಕ್ಕೆ 75 ವರ್ಷ, ಐತಿಹಾಸಿಕ ಸಂಭ್ರಮಕ್ಕೆ ಸಾಕ್ಷಿಯಾದ ಪ್ರಧಾನಿ ಮೋದಿ

ಈ ಸಾಲಿನ ಐಪಿಎಲ್ ಟೂರ್ನಿ ಮಾರ್ಚ್ 31ರಂದು ಆರಂಭವಾಗಲಿದ್ದು, ಅಹ್ಮದಾಬಾದ್’ನ ಮೊಟೇರಾದಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುವ ಟೂರ್ನಿ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡ, 4 ಬಾರಿಯ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಕ್ರಿಕೆಟ್ ಜಗತ್ತಿನ ದಿಗ್ಗಜ ನಾಯಕ ಮಹೇಂದ್ರ ಸಿಂಗ್ ಧೋನಿ ಈ ವರ್ಷದ ಐಪಿಎಲ್ ಟೂರ್ನಿಯಲ್ಲಿ ಕೊನೆಯ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಲಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಏಪ್ರಿಲ್ 2ರಂದು ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ತನ್ನ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ.

IPL First promo: First promo released, Rohit, Rahul, Pandya took huge steps

Comments are closed.