Jasprit Bumrah IPL 2023 : ಜಸ್ಪ್ರೀತ್ ಬುಮ್ರಾ ಐಪಿಎಲ್ 2023ರಲ್ಲಿ ಆಡುವುದು ಅನುಮಾನ !

ನವದೆಹಲಿ : ಭಾರತ ತಂಡ ಖ್ಯಾತ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ (jasprit bumrah IPL 2023) ಅಂತರಾಷ್ಟ್ರೀಯ ಕ್ರಿಕೆಟ್ ನಿಂದ ದೂರವಾಗಿ ಹಲವು ತಿಂಗಳುಗಳೇ ಕಳೆದಿದೆ. ಅಂತರಾಷ್ಟ್ರೀಯ ಕ್ರಿಕೆಟ್ ಅವರು ಸದ್ಯಕ್ಕೆ ಮರಳುವುದು ಅನುಮಾನ ಎನ್ನಲಾಗುತ್ತಿದೆ. ಹೀಗಾಗಿ ಅವರು ಮಾರ್ಚ್ 31 ರಂದು ಪ್ರಾರಂಭವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನಿಂದ (jasprit bumrah IPL 2023) ತಪ್ಪಿಸಿಕೊಳ್ಳುವ ಸಾಧ್ಯತೆಯಿದೆ.

ಜೂನ್ ತಿಂಗಳಿನಲ್ಲಿ ವಿಶ್ವಟೆಸ್ಟ್ ಫೈನಲ್ ಪಂದ್ಯ ನಡೆಯಲಿದೆ. ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ವಿಶ್ವ ಟೆಸ್ಟ್ ಫೈನಲ್ ಪಂದ್ಯಕ್ಕೆ ಎಂಟ್ರಿ ಪಡೆಯುವ ಸಾಧ್ಯತೆಯಿದ್ದು, ಫೈನಲ್ ಪಂದ್ಯದ ವೇಳೆಯಲ್ಲಿ ಬೂಮ್ರಾ (Jasprit Bumrah) ತಂಡಕ್ಕೆ ಮರಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.ಕ್ರಿಕ್‌ಬಜ್ ವರದಿಯ ಪ್ರಕಾರ, ಬಿಸಿಸಿಐ ಮತ್ತು ಐಪಿಎಲ್ ಮೂಲಗಳು ಬುಮ್ರಾ ಅವರು ಸಂಪೂರ್ಣವಾಗಿ ಫಿಟ್ ಆಗಿಲ್ಲ. ಅಲ್ಲದೇ ಈ ತಿಂಗಳ ಆರಂಭದಲ್ಲಿ ನಡೆದ ಪರೀಕ್ಷೆಯ ನಂತರ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಅವರಿಗೆ ನಿರಾಪೇಕ್ಷಣಾ ಪ್ರಮಾಣಪತ್ರವನ್ನು ನೀಡಿರಲಿಲ್ಲ.

ಇದೇ ವರ್ಷದ ಕೊನೆಯಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಗೆ ಬೂಮ್ರಾ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸಿಕೊಳ್ಳುವುದು ಬಿಸಿಸಿಐ ಸದ್ಯದ ಲೆಕ್ಕಾಚಾರ. ಎನ್ ಸಿಎನಲ್ಲಿರುವ ಜಸ್ಪ್ರೀತ್ ಬೂಮ್ರಾ ಅವರನ್ನು ಐಪಿಎಲ್ 2023ರ ಆರಂಭದ ವೇಳೆಯಲ್ಲಿ ಮುಂಬೈ ಇಂಡಿಯನ್ಸ್‌ಗೆ ತಿರುಗುವ ಸಂದರ್ಭದಲ್ಲಿ ಅವರ ಫಿಟ್ನೆಸ್ ಪರೀಕ್ಷೆಗೆ ಒಳಪಡಿಸುವ ಸಾಧ್ಯತೆಯಿದೆ.

ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ 50 ಓವರ್‌ಗಳ ವಿಶ್ವಕಪ್‌ಗೆ ಅವರನ್ನು ಸಿದ್ಧಗೊಳಿಸುವುದು ಬಿಸಿಸಿಐನ ಗುರಿಯಾಗಿದೆ ಎಂದು ಹಲವು ವರದಿಗಳು ಹೇಳಿವೆ. ಕಳೆದ ಸೆಪ್ಟೆಂಬರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ T20I ನಲ್ಲಿ ಭಾರತಕ್ಕಾಗಿ ಅವರ ಕೊನೆಯ ಅಂತರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. ವಿಶ್ವ ಟೆಸ್ಟ್ ಫೈನಲ್ ಪಂದ್ಯಾವಳಿಯಲ್ಲಿ ಸ್ಥಾನವನ್ನು ಪಡೆದುಕೊಳ್ಳಬೇಕಾದ್ರೆ, ಇಂದೋರ್‌ನಲ್ಲಿ ಮಾರ್ಚ್ 1 ರಿಂದ ಪ್ರಾರಂಭವಾಗುವ ಮೂರನೇ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆಲುವು ಸಾಧಿಸಬೇಕಾಗಿದೆ. ಸದ್ಯ ಭಾರತ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ.

ಇದನ್ನೂ ಓದಿ : KL Rahul visits SG cricket factory: ಕೈಕೊಟ್ಟ ಬ್ಯಾಟಿಂಗ್ ಫಾರ್ಮ್, ಎಸ್‌ಜಿ ಕ್ರಿಕೆಟ್ ಫ್ಯಾಕ್ಟರಿಗೆ ಭೇಟಿ ಕೊಟ್ಟ ಕನ್ನಡಿಗ ಕೆ.ಎಲ್ ರಾಹುಲ್

ಇದನ್ನೂ ಓದಿ : Sunrisers Hyderabad new captain: ಐಪಿಎಲ್ 2023 ಕ್ಕೆ ಹೊಸ ನಾಯಕನನ್ನು ಘೋಷಿಸಿದ ಸನ್‌ರೈಸರ್ಸ್ ಹೈದರಾಬಾದ್

Comments are closed.