ಬೆಂಗಳೂರು: (KL Rahul Harbhajan Singh) ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ (India Vs Australia Border-Gavaskar test series) ಮೊದಲ ಎರಡೂ ಪಂದ್ಯಗಳಲ್ಲಿ ಮುಗ್ಗರಿಸಿರುವ ಕನ್ನಡಿಗ ಕೆ.ಎಲ್ ರಾಹುಲ್ (KL Rahul) ವಿರುದ್ಧ ಕರ್ನಾಟಕದವರೇ ಆದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ (Venkatesh Prasad) ಟ್ವಿಟರ್”ನಲ್ಲಿ ಕೆಂಡ ಕಾರುತ್ತಿದ್ದಾರೆ.
ರಾಹುಲ್ ಅವರನ್ನು ಟೀಮ್ ಇಂಡಿಯಾದಿಂದ ಕೈಬಿಡಬೇಕೆಂದು ಆಗ್ರಹಿಸುತ್ತಿದ್ದಾರೆ. ರಾಹುಲ್ ಬಗ್ಗೆ ಪೂರ್ವಗ್ರಹ ಪೀಡಿತರಾದವರಂತೆ ಪದೇ ಪದೇ ಟ್ವೀಟ್’ಗಳನ್ನು ಮಾಡುತ್ತಿದ್ದಾರೆ. ಇದರ ವಿರುದ್ಧ ಟೀಮ್ ಇಂಡಿಯಾದ ಮಾಜಿ ಸ್ಪಿನ್ ಮಾಂತ್ರಿಕ ಹರ್ಭಜನ್ ಸಿಂಗ್ (Harbhajan Singh) ಧ್ವನಿ ಎತ್ತಿದ್ದಾರೆ. ವೆಂಕಟೇಶ್ ಪ್ರಸಾದ್ ಟ್ವೀಟ್’ಗಳ ವಿರುದ್ಧ ಅಸಮಾಧಾನ ಹೊರ ಹಾಕಿರುವ ಹರ್ಭಜನ್ ಸಿಂಗ್, “ಕೆ.ಎಲ್ ರಾಹುಲ್ ಅವರನ್ನು ಅವರ ಪಾಡಿಗೆ ಬಿಟ್ಟು ಬಿಡಿ” ಎಂದು ಟ್ವೀಟ್ ಮಾಡಿದ್ದಾರೆ.
“ರಾಹುಲ್ ಅವರನ್ನು ಏಕಾಂಗಿಯಾಗಿರಲು ಬಿಟ್ಟು ಬಿಡೋಣವೇ. ಅವರು ಯಾವುದೇ ಅಪರಾಧ ಎಸಗಿಲ್ಲ. ಈಗಲೂ ರಾಹುಲ್ ಟಾಪ್ ಪ್ಲೇಯರ್. ಫಾರ್ಮ್ ಕಂಡುಕೊಳ್ಳಲಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್’ನಲ್ಲಿ ನಾವೆಲ್ಲಾ ಈ ಹಂತವನ್ನು ಅನುಭವಿಸಿಯೇ ಬಂದಿದ್ದೇವೆ. ಈ ಸಾಲಿನಲ್ಲಿ ರಾಹುಲ್ ಮೊದಲಿಗನೂ ಅಲ್ಲ, ಕೊನೆಯವನೂ ಅಲ್ಲ. ರಾಹುಲ್ ನಮ್ಮ ಭಾರತ ತಂಡದ ಆಟಗಾರ ಎಂಬುದನ್ನು ಗೌರವಿಸಿ ಆತನ ಮೇಲೆ ನಂಬಿಕೆಯಿಡಿ” ಎಂದು ಟ್ವಿಟರ್ ಮೂಲಕ ಹರ್ಭಜನ್ ಸಿಂಗ್ ಮನವಿ ಮಾಡಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಮೊದಲೆರಡೂ ಟೆಸ್ಟ್ ಪಂದ್ಯಗಳಲ್ಲಿ ವಿಫಲರಾಗಿರುವ ರಾಹುಲ್ ಆಡಿದ 3 ಇನ್ನಿಂಗ್ಸ್’ಗಳಿಂದ ಕೇವಲ 38 ರನ್ ಗಳಿಸಿದ್ದಾರೆ. ವೈಫಲ್ಯದ ನಡುವೆಯೂ ರಾಹುಲ್ ಅವರ ಸಾಮರ್ಥ್ಯದ ಮೇಲೆ ಟೀಮ್ ಮ್ಯಾನೇಜ್ಮೆಂಟ್ ನಂಬಿಕೆಯಿಟ್ಟಿದ್ದು ಅಂತಿಮ ಎರಡು ಟೆಸ್ಟ್ ಪಂದ್ಯಗಳಿಗೆ ಕನ್ನಡಿಗನನ್ನು ತಂಡದಲ್ಲಿ ಉಳಿಸಿಕೊಂಡಿದೆ. ಆದರೆ ಉಪನಾಯಕನ ಪಟ್ಟದಿಂದ ರಾಹುಲ್ ಅವರನ್ನು ಕೆಳಗಿಳಿಸಲಾಗಿದೆ. ಇದು 3ನೇ ಟೆಸ್ಟ್ ಪಂದ್ಯದಲ್ಲಿ ರಾಹುಲ್ ಆಡುವ ಬಳಗದಲ್ಲಿ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂಬುದರ ಸ್ಪಷ್ಟ ಸೂಚನೆ. ಕಳೆದ ಬಾಂಗ್ಲಾದೇಶ ವಿರುದ್ಧದ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲೂ ರಾಹುಲ್ ವೈಫಲ್ಯ ಎದುರಿಸಿದ್ದರು.
ಭಾರತ ಮತ್ತು ಆಸೀಸ್ ನಡುವಿನ 3ನೇ ಟೆಸ್ಟ್ ಪಂದ್ಯ ಮಾರ್ಚ್ 1ರಂದು ಮಧ್ಯಪ್ರದೇಶದ ಇಂದೋರ್’ನಲ್ಲಿರುವ ಹೋಳ್ಕರ್ ಕ್ರಿಕೆಟ್ ಮೈದಾನದಲ್ಲಿ ಆರಂಭವಾಗಲಿದೆ. ನಾಗ್ಪುರ ಮತ್ತು ದೆಹಲಿಯಲ್ಲಿ ನಡೆದ ಮೊದಲೆರಡು ಟೆಸ್ಟ್ ಪಂದ್ಯಗಳನ್ನು ಸುಲಭವಾಗಿ ಗೆದ್ದಿರುವ ಟೀಮ್ ಇಂಡಿಯಾ, ಈಗಾಗಲೇ ಸರಣಿಯಲ್ಲಿ 2-0 ಅಂತರದಲ್ಲಿ ಮುನ್ನಡೆಯಲ್ಲಿದೆ.
KL Rahul Harbhajan Singh: “Rahul has not committed any crime” Turbanator to Venky who hates Kannadigas