ಸೋಮವಾರ, ಏಪ್ರಿಲ್ 28, 2025
HomeSportsCricketKL Rahul, Rohit Sharma :ಕೆಎಲ್ ರಾಹುಲ್, ರೋಹಿತ್ ಶರ್ಮಾ ವಿಶ್ರಾಂತಿ; ದಕ್ಷಿಣ ಆಫ್ರಿಕಾ ಟಿ20ಗೆ...

KL Rahul, Rohit Sharma :ಕೆಎಲ್ ರಾಹುಲ್, ರೋಹಿತ್ ಶರ್ಮಾ ವಿಶ್ರಾಂತಿ; ದಕ್ಷಿಣ ಆಫ್ರಿಕಾ ಟಿ20ಗೆ ಟೀಂ ಇಂಡಿಯಕ್ಕೆ ನೂತನ ನಾಯಕ

- Advertisement -

ಮುಂಬೈ : ಭಾರತ ಕ್ರಿಕೆಟ್ ತಂಡ ಜುಲೈನಲ್ಲಿ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಹೀಗಾಗಿ ನಾಯಕ ರೋಹಿತ್ ಶರ್ಮಾ (Rohit Sharma) ಮತ್ತು ಉಪನಾಯಕ ಕೆಎಲ್ ರಾಹುಲ್ (KL Rahul) ಸೇರಿದಂತೆ ಹಲವಾರು ಹಿರಿಯ ಆಟಗಾರರು ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ 20 ಅಂತಾರಾಷ್ಟ್ರೀಯ ಸರಣಿಗೆ ವಿಶ್ರಾಂತಿ ಪಡೆಯಲಿದ್ದಾರೆ. ಹೀಗಾಗಿ ಟೀಂ ಇಂಡಿಯಾವನ್ನು ಹೊಸ ನಾಯಕ ಮುನ್ನೆಡೆಸುವ ಸಾಧ್ಯತೆಯಿದೆ.

ಪ್ರಮುಖವಾಗಿ ರೋಹಿತ್‌ ಶರ್ಮಾ, ಕೆ.ಎಲ್.ರಾಹುಲ್‌, ವಿರಾಟ್‌ ಕೊಹ್ಲಿ, ಜಸ್ಪ್ರಿತ್‌ ಬೂಮ್ರಾ, ರಿಷಬ್‌ ಪಂತ್‌ ಸೇರಿದಂತೆ ಹಲವು ಆಟಗಾರರು ವಿಶ್ರಾಂತಿ ಪಡೆಯುವ ಸಾಧ್ಯತೆಯಿದೆ. ಹೀಗಾಗಿ ಐಪಿಎಲ್ 2022 ರಲ್ಲಿ ಗುಜರಾತ್ ಟೈಟಾನ್ಸ್ ತಂಡದ ನಾಯಕತ್ವದ ಮೂಲಕ ಎಲ್ಲರ ಗಮನ ಸೆಳೆದ ಹಾರ್ದಿಕ್‌ ಪಾಂಡ್ಯ ಹಾಗೂ ಹಿರಿಯ ಆರಂಭಿಕ ಆಟಗಾರ ಶಿಖರ್ ಧವನ್ ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ಮತ್ತು ನಂತರ ಭಾರತ ಪ್ರವಾಸದಲ್ಲಿ ಸೀಮಿತ ಓವರ್‌ಗಳ ಸರಣಿಯನ್ನು ಮುನ್ನಡೆಸುವ ಜವಾಬ್ದಾರಿಯನ್ನು ನೀಡಲಾಗಿದೆ ಎನ್ನಲಾಗುತ್ತಿದೆ.

ಭಾರತ ಕ್ರಿಕೆಟ್ ತಂಡದ ದಕ್ಷಿಣ ಆಫ್ರಿಕಾ ವಿರುದ್ಧದ T20I ಸರಣಿಯು ಜೂನ್‌ನಲ್ಲಿ ಪ್ರಾರಂಭವಾಗಲಿದ್ದು, ಮೊದಲ ಪಂದ್ಯವು ನವದೆಹಲಿಯಲ್ಲಿ ಮತ್ತು ಉಳಿದವು ಕ್ರಮವಾಗಿ ಕಟಕ್, ವಿಶಾಖಪಟ್ಟಣಂ, ರಾಜ್‌ಕೋಟ್ ಮತ್ತು ಬೆಂಗಳೂರಿನಲ್ಲಿ ನಡೆಯಲಿವೆ. ಐಪಿಎಲ್ 2022 ರ ಲೀಗ್ ಹಂತದ ಕೊನೆಯ ದಿನವಾದ ಮೇ 22 ರಂದು ಮುಂಬೈನಲ್ಲಿ ದಕ್ಷಿಣ ಆಫ್ರಿಕಾ ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ.

ತಮ್ಮ ಫಾರ್ಮ್‌ನಿಂದ ಕಂಗೆಟ್ಟಿರುವ ವಿರಾಟ್ ಕೊಹ್ಲಿಗೆ ಅಗತ್ಯ ವಿಶ್ರಾಂತಿಯನ್ನೂ ನೀಡಲಾಗುತ್ತದೆ. ಜುಲೈ ಆರಂಭದಲ್ಲಿ ನಡೆಯಲಿರುವ ಇಂಗ್ಲೆಂಡ್ ಪ್ರವಾಸವು ಆಯ್ಕೆದಾರರಿಗೆ ಹಾಗೂ ಬಿಸಿಸಿಐಗೆ ಅತ್ಯಂತ ಮಹತ್ವದ್ದಾಗಿದೆ. ಉಮ್ರಾನ್ ಮಲಿಕ್ ಅವರು ಉನ್ನತ-ವೇಗದ ಎಸೆತಗಳನ್ನು ಬೌಲ್ ಮಾಡುವ ಸಾಮರ್ಥ್ಯದೊಂದಿಗೆ ಮಾಜಿ ಕ್ರಿಕೆಟಿಗರಿಂದ ಸಾಕಷ್ಟು ಬೆಂಬಲವನ್ನು ಪಡೆದಿದ್ದಾರೆ. ಆದರೆ ರಾಷ್ಟ್ರೀಯ ತಂಡವನ್ನು ಕೂಡಿಕೊಳ್ಳುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗುತ್ತಿದೆ. ಇನ್ನು ಡೆತ್ ಓವರ್ ಸ್ಪೆಷಲಿಸ್ಟ್ ಅರ್ಷದೀಪ್ ಸಿಂಗ್ ಜೊತೆಗೆ ಲಕ್ನೋ ಸೂಪರ್ ಜೈಂಟ್ಸ್ ಎಡಗೈ ಬೌಲರ್ ಮೊಹ್ಸಿನ್ ಖಾನ್ ಭಾರತಕ್ಕೆ ಪದಾರ್ಪಣೆ ಮಾಡುವ ಅವಕಾಶವನ್ನು ಪಡೆಯುವ ಸಾಧ್ಯತೆಯಿದೆ.

ಇದನ್ನೂ ಓದಿ : Ambati Rayudu Retirement : ಐಪಿಎಲ್‌ಗೆ ವಿದಾಯ ಹೇಳಿದ ಅಂಬಟಿ ರಾಯುಡು

ಇದನ್ನೂ ಓದಿ : IPL 2022 AB de Villiers : ಆರ್‌ಸಿಬಿಗೆ ಮರಳಲಿದ್ದಾರೆ ಎಬಿ ಡಿವಿಲಿಯರ್ಸ್ : ವಿರಾಟ್‌ ಕೊಹ್ಲಿ ಹೇಳಿಕೆ

KL Rahul, Rohit Sharma Rested india new captain for South Africa T20s

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular