KL Rahul Virat Kohli : ದಕ್ಷಿಣ ಆಫ್ರಿಕಾ ವಿರುದ್ಧದ ಟಿ20: ರಾಹುಲ್, ಕೊಹ್ಲಿಗೆ ರೆಸ್ಟ್, ಓಪನರ್ ಯಾರು ?

ಇಂದೋರ್: (KL Rahul Virat Kohli) ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಮಂಗಳವಾರ (ಅಕ್ಟೋಬರ್ 4) ನಡೆಯಲಿರುವ 3ನೇ ಟಿ20 ಪಂದ್ಯಕ್ಕೆ (India Vs South Africa 3rd T20 series) ಟೀಮ್ ಇಂಡಿಯಾ ಉಪನಾಯಕ ಕೆ.ಎಲ್ ರಾಹುಲ್ (KL Rahul) ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಅವರಿಗೆ ವಿಶ್ರಾಂತಿ ನೀಡಲಾಗಿದೆ.

3 ಪಂದ್ಯಗಳ ಸರಣಿಯಲ್ಲಿ ಭಾರತ ತಂಡ ಈಗಾಗಲೇ 2-0 ಅಂತರದಲ್ಲಿ ಮುನ್ನಡೆಯಲ್ಲಿದ್ದು, ಸರಣಿ ಕೈವಶ ಮಾಡಿಕೊಂಡಿದೆ. ಸೆಪ್ಟೆಂಬರ್ 28ರಂದು ಕೇರಳದ ತಿರುವನಂತಪುರದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ 3 ಪಂದ್ಯಗಳ ಸರಣಿಯ ಮೊದಲ ಪಂದ್ಯವನ್ನು 8 ವಿಕೆಟ್’ಗಳಿಂದ ಗೆದ್ದುಕೊಂಡಿದ್ದ ಭಾರತ, ಅಕ್ಟೋಬರ್ 2ರಂದು ಅಸ್ಸಾಂನ ಗುವಾಹಟಿಯಲ್ಲಿ ನಡೆದ ಪಂದ್ಯವನ್ನು 16 ರನ್’ಗಳಿಂದ ರೋಚಕವಾಗಿ ಗೆದ್ದುಕೊಂಡು ಸರಣಿ ಕೈವಶ ಮಾಡಿಕೊಂಡಿತ್ತು. ಹೀಗಾಗಿ ಮೂರನೇ ಪಂದ್ಯ ಭಾರತಕ್ಕೆ ಮಹತ್ವದ್ದಲ್ಲವಾಗಿರುವ ಕಾರಣ ರಾಹುಲ್ ಮತ್ತು ವಿರಾಟ್ ಕೊಹ್ಲಿ ಅವರಿಗೆ ವಿಶ್ರಾಂತಿ ನೀಡಲಾಗಿದೆ.

ರಾಹುಲ್ ಅನುಪಸ್ಥಿತಿಯಲ್ಲಿ ವಿಕೆಟ್ ಕೀಪರ್ ರಿಷಭ್ ಪಂತ್ ನಾಯಕ ರೋಹಿತ್ ಶರ್ಮಾ ಜೊತೆ ಭಾರತ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ. ಮಧ್ಯಮ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಅವರ ಸ್ಥಾನವನ್ನು ಮುಂಬೈ ಬ್ಯಾಟ್ಸ್’ಮನ್ ಶ್ರೇಯಸ್ ಅಯ್ಯರ್ ತುಂಬಲಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ 3ನೇ ಟಿ20 ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ XI:
ರೋಹಿತ್ ಶರ್ಮಾ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಆರ್.ಅಶ್ವಿನ್, ಯುಜ್ವೇಂದ್ರ ಚಹಲ್, ದೀಪಕ್ ಚಹರ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್.

ಪಂದ್ಯ ಆರಂಭ: ಸಂಜೆ 7ಕ್ಕೆ
ಸ್ಥಳ: ಲಕ್ನೋ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್
ಲೈವ್ ಸ್ಟ್ರೀಮಿಂಗ್: ಡಿಸ್ನಿ+ಹಾಟ್ ಸ್ಟಾರ್

ಇದನ್ನೂ ಓದಿ : Virat Kohli 11000 runs : ಟಿ20 ಕ್ರಿಕೆಟ್: ಕೊಹ್ಲಿ@11000, ವಿರಾಟ ದಾಖಲೆ ಬರೆದ ಕಿಂಗ್

ಇದನ್ನೂ ಓದಿ : Selfless Virat Kohli: ದಾಖಲೆಗಾಗಿ ಆಡಲ್ಲ ವಿರಾಟ್, ಇಲ್ಲಿದೆ ಮತ್ತೊಂದು ಸಾಕ್ಷಿ, ಕಿಂಗ್ ಕೊಹ್ಲಿ ನಿಸ್ವಾರ್ಥತೆಗೆ ಫ್ಯಾನ್ಸ್ ಫಿದಾ

KL Rahul Virat Kohli rested for India Vs South Africa 3rd T20

Comments are closed.