KSCA felicitate Roger Binny : ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿಗೆ ನಾಳೆ ತವರೂರ ಗೌರವ, ಚಿನ್ನಸ್ವಾಮಿಯಲ್ಲಿ ನಡೆಯಲಿದೆ ಅದ್ಧೂರಿ ಸನ್ಮಾನ

ಬೆಂಗಳೂರು : (KSCA felicitate Roger Binny) ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (BCCI) ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕರ್ನಾಟಕದ ದಿಗ್ಗಜ ಕ್ರಿಕೆಟಿಗ ರೋಜರ್ ಬಿನ್ನಿಯವರಿಗೆ (BCCI President Roger Binny) ನಾಳೆ (ಶುಕ್ರವಾರ, 28 ಅಕ್ಟೋಬರ್) ತವರು ಕ್ರಿಕೆಟ್ ಸಂಸ್ಥೆಯ ಸನ್ಮಾನ ನಡೆಯಲಿದೆ.

1983ರ ವಿಶ್ವಕಪ್ ವಿಜೇತ ಭಾರತ ತಂಡದ ಸದಸ್ಯರೂ ಆಗಿರುವ ರೋಜರ್ ಬಿನ್ನಿ(KSCA felicitate Roger Binny) ಅಕ್ಟೋಬರ್ 18ರಂದು ಬಿಸಿಸಿಐನ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿದ್ದ ಬಿನ್ನಿ, ಬಿಸಿಸಿಐ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ KSCA (Karnataka State Cricket Association) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.

ಇದನ್ನೂ ಓದಿ : Gas leakage in Bopal : ಭೋಪಾಲ್‌ ಕ್ಲೋರೀನ್‌ ಟ್ಯಾಂಕ್‌ನಿಂದ ಅನಿಲ ಸೋರಿಕೆ ; ಆರು ಮಂದಿಯ ಸ್ಥಿತಿ ಚಿಂತಾಜನಕ

ರಾಜ್ಯ ಕ್ರಿಕೆಟ್ ಸಂಸ್ಥೆಯ ಪ್ರತಿನಿಧಿಯಾಗಿ ಬಿಸಿಸಿಐಗೆ ಎಂಟ್ರಿ ಕೊಟ್ಟಿರುವ 67 ವರ್ಷದ ರೋಜರ್ ಬಿನ್ನಿಯವರನ್ನು ಅದ್ಧೂರಿಯಾಗಿ ಸನ್ಮಾನಿಸಿ ಗೌರವಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಮುಂದಾಗಿದೆ. ಈ ಬಗ್ಗೆ KSCA ಖಜಾಂಚಿ ಹಾಗೂ ವಕ್ತಾರ ವಿನಯ್ ಮೃತ್ಯುಂಜಯ ಮಾಹಿತಿ ನೀಡಿದ್ದು, ಬಿನ್ನಿಯವರ ಸನ್ಮಾನ ಕಾರ್ಯಕ್ರಮ ಶುಕ್ರವಾರ ಸಂಜೆ 6.30ಕ್ಕೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ. ಸನ್ಮಾನ ಸಮಾರಂಭದ ನಂತರ ಮನರಂಜನಾ ಕಾರ್ಯಕ್ರಮ ನಡೆಯಲಿದೆ ಎಂದು ವಿನಯ್ ಮೃತ್ಯುಂಜಯ ತಿಳಿಸಿದ್ದಾರೆ.

ಇದನ್ನೂ ಓದಿ : Char Dham Yatra : ಚಾರ್ ಧಾಮ್ ಯಾತ್ರೆಯ ಕೊನೆಯ ಹಂತ: ಚಳಿಗಾಲಕ್ಕೆ ಮುಚ್ಚುತ್ತಿರುವ ದೇಗುಲಗಳು

ತುಂಬಾ ವರ್ಷಗಳ ನಂತರ ಕರ್ನಾಟಕದವರೊಬ್ಬರಿಗೆ ಬಿಸಿಸಿಐ ಅಧ್ಯಕ್ಷ ಸ್ಥಾನ ಸಿಕ್ಕಿದ್ದು, ರೋಜರ್ ಬಿನ್ನಿ ಮುಂದಿನ 3 ವರ್ಷಗಳ ಅವಧಿಗೆ ಜಗತ್ತಿನ ಅತ್ಯಂತ ಶ್ರೀಮಂತ ಕ್ರಿಕೆಟ್ ಮಂಡಳಿಯ ಅಧ್ಯಕ್ಷರಾಗಿರಲಿದ್ದಾರೆ. ಇದುವರೆಗೆ ಬಿಸಿಸಿಐ ಅಧ್ಯಕ್ಷರಾಗಿದ್ದ ಟೀಮ್ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಮತ್ತೊಂದು ಅವಧಿಗೆ ಮಂಡಳಿಯ ಅಧ್ಯಕ್ಷರಾಗಿ ಮುಂದುವರಿಯಲು ಬಯಸಿದ್ದರೂ, ಬಿಸಿಸಿಐನಲ್ಲಿ ಗಂಗೂಲಿಗೆ ಬೆಂಬಲ ಸಿಕ್ಕಿರಲಿಲ್ಲ. ಹೀಗಾಗಿ ಗಂಗೂಲಿ ಬದಲು ರೋಜರ್ ಬಿನ್ನಿಯವರಿಗೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಅವಕಾಶ ಸಿಕ್ಕಿತ್ತು. ಬಿಸಿಸಿಐ ಅಧ್ಯಕ್ಷ ಹುದ್ದೆಗೆ ಬಿನ್ನಿ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದರು.

ಇದನ್ನೂ ಓದಿ : Manku Bhai Foxy Rani : ‘ಮಂಕು ಭಾಯ್ ಫಾಕ್ಸಿ ರಾಣಿ’ ಚಿತ್ರದ ಫ್ಯಾಥೋ ಸಾಂಗ್ ರಿಲೀಸ್ – ಗಗನ್ ಎಂ ಚೊಚ್ಚಲ ನಿರ್ದೇಶನದ ಸಿನಿಮಾ ಜನವರಿಯಲ್ಲಿ ತೆರೆಗೆ

2019ರಲ್ಲಿ ನಡೆದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ರೋಜರ್ ಬಿನ್ನಿ, ಭಾರೀ ಮತಗಳಿಂದ ಗೆಲುವು ದಾಖಲಿಸಿದ್ದರು. ರಾಜ್ಯ ಕ್ರಿಕೆಟ್ ಸಂಸ್ಥೆಯಲ್ಲಿ ಅಧಿಕಾರಾವಧಿ ಅಂತ್ಯಗೊಳ್ಳುವ ಮೊದಲೇ ರೋಜರ್ ಬಿನ್ನಿ ಬಿಸಿಸಿಐ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

(KSCA felicitate Roger Binny) Karnataka cricket legend Roger Binny, who has been elected as the new president of the Board of Control for Cricket in India (BCCI), will be felicitated tomorrow (Friday, 28 October) by his home cricket body.

Comments are closed.