KSRTC Bus Accident : ಕೆಎಸ್‌ಆರ್‌ಟಿಸಿ ಬಸ್‌ ಕಾರಿನ ನಡುವೆ ಭೀಕರ ಅಪಘಾತ : ನಾಲ್ಕು ಸಾವು, ಒಬ್ಬರಿಗೆ ಗಂಭೀರ ಗಾಯ

ಅಂಕೋಲಾ : ಹೊಸ ವರ್ಷ ಸಂಭ್ರಮಾಚರಣೆ ನಡುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಕಾರು (KSRTC Bus – car Accident) ಮುಖಾಮುಖಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬರಿಗೆ ಗಂಭೀರ ಗಾಯಗೊಂಡಿದ್ದಾರೆ ಎಂದು ಸ್ಥಳಕ್ಕೆ ಧಾವಿಸಿದ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾಳೆಗುಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು (ಜನವರಿ 01) ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರು ಅರುಣ್ ಪಾಂಡ್ಯನ್, ನಿಪುಲ್, ಮೊಹಮ್ಮದ್, ಶೇಖರನ್ ಎಂದು ಗುರುತಿಸಲಾಗಿದೆ. ಈ ಅಪಘಾತದಲ್ಲಿ ಮತ್ತೊಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ : Students tour bus overturned: ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್‌ ಪಲ್ಟಿ: ಓರ್ವ ಸಾವು, 43 ಮಂದಿಗೆ ಗಾಯ

ಇದನ್ನೂ ಓದಿ : Elephant attack-1 dead: ಒಂಟಿ ಸಲಗದ ದಾಳಿ : ಮಗನನ್ನು ರಕ್ಷಿಸಲು ಹೋಗಿ ತನ್ನ ಜೀವವನ್ನೇ ಕಳೆದುಕೊಂಡ ತಂದೆ

ಇದನ್ನೂ ಓದಿ : Gurugram : ತಾಯಿ, ಪತ್ನಿಯ ಚಿಕಿತ್ಸೆಗೆ 24 ಕ್ಷ ರೂಪಾಯಿ ದರೋಡೆ : ಐವರು ಅರೆಸ್ಟ್‌

ಇದನ್ನೂ ಓದಿ : Karwar bus accident: ಶಾಪಿಂಗ್‌ ಗೆ ತೆರಳುತ್ತಿದ್ದ ವೇಳೆ ಬಸ್‌ ಢಿಕ್ಕಿ: ತಂದೆಯ ಕಣ್ಣೆದುರೇ ಕೊನೆಯುಸಿರೆಳೆದ ಮಗಳು

ತಮಿಳುನಾಡು ಮೂಲದ ಇವರು ಗೋವಾದಲ್ಲಿ ಹೊಸ ವರ್ಷದ ಪಾರ್ಟಿ ಮುಗಿಸಿ ಗೋಕರ್ಣಕ್ಕೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್‌ರು ತಿಳಿಸಿದ್ದಾರೆ. ಅಂಕೋಲಾ ಕಡೆಯಿಂದ ಯಲ್ಲಾಪುರ ಕಡೆಗೆ ಹೋಗುತ್ತಿದ್ದ ಕಾರಿಗೆ ಹುಬ್ಬಳ್ಳಿ ಕಡೆಯಿಂದ ಗೋಕರ್ಣಕ್ಕೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಇದ್ದರಿಂದಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬರಿಗೆ ಗಂಭೀರ ಗಾಯವಾಗಿದೆ. ಸ್ಥಳಕ್ಕೆ ಅಂಕೋಲಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹಗಳನ್ನು ಅಂಕೋಲಾ ತಾಲೂಕು ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಅಪಘಾತಕ್ಕೆ ಸಂಬಂಧಿಸಿದಂತೆ ಅಂಕೋಲಾ ಪೊಲೀಸ್‌ರು ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

KSRTC Bus – car Accident : Horrible accident between KSRTC bus cars : Four dead, one seriously injured

Comments are closed.