ಚೆನ್ನೈ : (MS Dhoni Retirement) ಇಂಡಿಯನ್ ಪ್ರೀಮಿಯರ್ ಲೀಗ್ ಈ ಬಾರಿಯ ಆವೃತ್ತಿ ಅಂತಿಮ ಹಂತ ತಲುಪಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡ ಈಗಾಗಲೇ ಪ್ಲೇ ಆಫ್ ಹಾದಿಯಲ್ಲಿದೆ. ಕೊನೆಯ ಲೀಗ್ ಪಂದ್ಯವನ್ನು ಜಯಿಸಿದ್ರೆ ಖಚಿತವಾಗಿ ಚೆನ್ನೈ ಪ್ಲೇ ಆಫ್ ಪ್ರವೇಶಿಸಲಿದೆ. ಈ ನಡುವಲ್ಲೇ ಚೆನ್ನ್ನೈ ಸೂಪರ್ ಕಿಂಗ್ಸ್ ತಂಡ ನಾಯಕ ಮಹೇಂದ್ರ ಸಿಂಗ್ ಧೋನಿ ಐಪಿಎಲ್‌ಗೆ ಗುಡ್‌ಬೈ ಹೇಳಲಿದ್ದಾರೆ ಎನ್ನಲಾಗುತ್ತಿದೆ.
ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಾಳೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ತನ್ನ ಅಂತಿಮ ಲೀಗ್ ಪಂದ್ಯವನ್ನು ಆಡಳಿದೆ. ಒಟ್ಟಾರೆ ಲೀಗ್‌ನಲ್ಲಿ ಆಡಿರುವ 13 ಪಂದ್ಯಗಳ ಪೈಕಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 7 ಪಂದ್ಯಗಳನ್ನು ಗೆದ್ದು, ಐದು ಪಂದ್ಯಗಳಲ್ಲಿ ಸೋಲನ್ನು ಕಂಡಿದೆ. ಒಟ್ಟು 15 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಚೆನ್ನೈ ನಾಳಿನ ಪಂದ್ಯವನ್ನು ಜಯಿಸಿದ್ರೆ ಎರಡನೇ ಸ್ಥಾನಿಯಾಗಿ ಪ್ಲೇ ಆಫ್ ಪ್ರವೇಶಿಸುವ ಸಾಧ್ಯತೆಯಿದೆ. ಒಂದೊಮ್ಮೆ ಸೋತರು ಕೂಡ ಮುಂಬೈ ಇಂಡಿಯನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ಸೋಲು ಗೆಲುವಿನ ಮೇಲೆ ಚೆನ್ನೈ ತಂಡದ ಪ್ಲೇ ಆಪ್ ಪ್ರವೇಶ ನಿರ್ಧಾರವಾಗಿದೆ.
ಈ ನಡುವಲ್ಲೇ ಮಹೇಂದ್ರ ಸಿಂಗ್ ಧೋನಿ (MS Dhoni Retirement) ಐಪಿಎಲ್‌ನಿಂದ ನಿವೃತ್ತರಾಗಲಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಟೀಂ ಇಂಡಿಯಾಕ್ಕೆ ಎರಡು ವಿಶ್ವಕಪ್ ಟ್ರೋಫಿಯನ್ನು ಗೆಲ್ಲಿಸಿಕೊಟ್ಟ ನಾಯಕ ಅನ್ನೋ ಹೆಗ್ಗಳಿಕೆಗೆ ಪಾತ್ರರಾಗಿರುವ ಮಹೇಂದ್ರ ಸಿಂಗ್ ಧೋನಿ ಈಗಾಗಲೇ ಐಪಿಎಲ್ ಹೊರತು ಪಡಿಸಿ ಉಳಿದೆಲ್ಲಾ ಮಾದರಿಯ ಕ್ರಿಕೆಟ್‌ಗೆ ಗುಡ್‌ಬೈ ಹೇಳಿದ್ದಾರೆ. ಆದರೆ ಕಳೆದ ಅವಧಿಯಲ್ಲೇ ಧೋನಿ ಐಪಿಎಲ್‌ನಿಂದ ದೂರವಾಗ್ತಾರೆ ಅನ್ನೋ ಮಾತುಗಳು ಕೇಳಿಬಂದಿತ್ತು. ರವೀಂದ್ರ ಜಡೇಜಾ ಚೆನ್ನೈ ತಂಡದ ನೇತೃತ್ವ ವಹಿಸಿಕೊಂಡಿದ್ದರೂ ಕೂಡ ಅರ್ಧದಲ್ಲಿಯೇ ನಾಯಕತ್ವ ತ್ಯೆಜಿಸಿದ್ದರು. ಹೀಗಾಗಿ ಈ ಬಾರಿಯೂ ಧೋನಿ ಚೆನ್ನೈ ತಂಡದ ನಾಯಕನಾಗಿ ಮುಂದುವರಿದಿದ್ದರು.
ಚೆನ್ನೈ ಸೂಪರ್ ಕಿಂಗ್ಸ್ ತಂಡ ನಾಳೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ನಡೆಯಲಿರುವ ಪಂದ್ಯದ ಮುಕ್ತಾಯದ ಬಳಿಕ ಧೋನಿ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ. ಇಲ್ಲವಾದ್ರೆ ಚೆನ್ನೈ ಫೈನಲ್ ಪ್ರವೇಶಿಸಿದ್ರೆ, ಆ ಹೊತ್ತಲೇ ನಿವೃತ್ತಿಯನ್ನು ಪ್ರಕಟಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಮಹೇಂದ್ರ ಸಿಂಗ್ ಧೋನಿ ಅವರ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇದುವರೆಗೆ ಒಟ್ಟು ಮೂರು ಬಾರಿ ಐಪಿಎಲ್ ಟ್ರೋಫಿಯನ್ನು ಜಯಿಸಿತ್ತು. ಮಾತ್ರವಲ್ಲ ಎರಡನೇ ಅತೀ ಹೆಚ್ಚು ಐಪಿಎಲ್ ಟ್ರೋಫಿ ಗೆದ್ದ ನಾಯಕ ಅನ್ನೋ ಖ್ಯಾತಿಯನ್ನು ಪಡೆದುಕೊಂಡಿದ್ದಾರೆ. ಆರಂಭದಿಂದಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕನಾಗಿರುವ ಮಹೇಂದ್ರ ಸಿಂಗ್ ಧೋನಿ ಚೆನ್ನೈ ತಂಡದಲ್ಲಿ ಆಡಿದ್ದ ಹಲವು ಆಟಗಾರರು ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸುವಂತೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಐಪಿಎಲ್‌ನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿಷೇಧಕ್ಕೆ ಒಳಗಾದ ಸಂದರ್ಭದಲ್ಲಿ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಂಡವನ್ನು ಪ್ರತಿನಿಧಿಸಿದ್ದರು.
ಮಹೇಂದ್ರ ಸಿಂಗ್ ಧೋನಿ ದಾಖಲೆ :
ಐಪಿಎಲ್ : ಚೆನ್ನೈ ಸೂಪರ್ ಕಿಂಗ್ಸ್ ಪರ 187 ಪಂದ್ಯಗಳನ್ನು ಆಡಿರುವ ಮಹೇಂದ್ರ ಸಿಂಗ್ ಧೋನಿ 4493 ರನ್ ಗಳಿಸಿದ್ದಾರೆ. ಅಲ್ಲದೇ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಂಡದ ಪರ ಆಡಿದ್ದ ಧೋನಿ 72 ಪಂದ್ಯಗಳಲ್ಲಿ 574 ರನ್ ಬಾರಿಸಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ 4000 ರನ್ ಬಾರಿಸಿರುವ ಭಾರತದ ಮೊದಲ ವಿಕೆಟ್ ಕೀಪರ್ ಎನಿಸಿಕೊಂಡಿರುವ ಮಹೇಂದ್ರ ಸಿಂಗ್ ಧೋನಿ, ಇಂಗ್ಲೆಂಡ್ ವಿರುದ್ದ ಟೆಸ್ಟ್ ಪಂದ್ಯದಲ್ಲಿ ಸಿಕ್ಸರ್ ಬಾರಿಸಿ ಧೋನಿ, ನಾಯಕನಾಗಿ 50 ಸಿಕ್ಸರ್ ಬಾರಿಸಿದ ದಾಖಲೆಯನ್ನು ಹೊಂದಿದ್ದಾರೆ. ಅಲ್ಲದೇ ವೃತ್ತಿ ಜೀವನದಲ್ಲಿ 294 ರನ್ ಗಳಿಗೆ ಔಟಾಗುವ ಮೂಲಕ ಭಾರತೀಯ ವಿಕೆಟ್ ಕೀಪರ್‌ಗಳ ಸಾರ್ವಕಾಲಿಕ ಔಟಾದ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.
ಇದನ್ನೂ ಓದಿ : ರಾಜ್ಯ ಯುವಜನ ಸೇವಾ ಕ್ರೀಡಾ ಇಲಾಖೆಯ ಕ್ರೀಡಾಂಗಣಗಳು ವೈಜ್ಞಾನಿಕವಾಗಿ ಮೇಲ್ದರ್ಜೆಗೆ
ಇದನ್ನೂ ಓದಿ : IPL 2023 RCB vs SRH : ಒಂದು ಪಂದ್ಯ ಗೆದ್ದರೂ ಕೂಡ ಪ್ಲೇ ಆಫ್ ಪ್ರವೇಶಿಸುತ್ತೆ ಆರ್‌ಸಿಬಿ