Nepal to support RCB : ಆರ್‌ಸಿಬಿಗೆ ಸಪೋರ್ಟ್ ಮಾಡಲು 2,376 ಕಿ.ಮೀ ದೂರದಿಂದ ಬೆಂಗಳೂರಿಗೆ ಬಂದ ಅಭಿಮಾನಿಗಳು

ಬೆಂಗಳೂರು : ಐಪಿಎಲ್’ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡದ ರೇಂಜೇ ಬೇರೆ. ಆರ್’ಸಿಬಿ ತಂಡದ ಅಭಿಮಾನಿಗಳದ್ದು ಮತ್ತೊಂದು ರೇಂಜ್. ಸತತ 15 ವರ್ಷಗಳಿಂದ ಕಪ್ ಗೆಲ್ಲದೇ ಇದ್ದರೂ ರಾಯಲ್ ಚಾಲೆಂಜರ್ಸ್ ತಂಡದ ಮೇಲಿನ ಅಭಿಮಾನ, ಪ್ರೀತಿ ಕಿಂಚಿತ್ತೂ (Nepal to support RCB) ಕಮ್ಮಿಯಾಗಿಲ್ಲ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಭಾರತದಲ್ಲಷ್ಟೇ ಅಲ್ಲದೆ, ದೇಶ-ವಿದೇಶಗಳಲ್ಲೂ ಅಭಿಮಾನಿಗಳಿದ್ದಾರೆ. ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ತಂಡವೆಂಬ ಖ್ಯಾತಿ ರಾಯಲ್ ಚಾಲೆಂಜರ್ಸ್’ನದ್ದು. ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಬೆಂಬಲಿಸಲು ನೇಪಾಳದ ಅಭಿಮಾನಿಗಳ ತಂಡವೊಂದು ನೇಪಾಳದಿಂದ ಬೆಂಗಳೂರಿಗೆ ಬಂದಿದೆ. 2,376 ಕಿ.ಮೀ ದೂರದಿಂದ ಬೆಂಗಳೂರಿಗೆ ಬಂದಿರುವ ಅಭಿಮಾನಿಗಳ ಗುಂಪು ಭಾನುವಾರ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಕ್ರೀಡಾಂಗಣದಲ್ಲಿ ಕಾಣಿಸಿಕೊಂಡಿತ್ತು.

ಆರ್’ಸಿಬಿ ತಂಡದ ಪಂದ್ಯವನ್ನು ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ವೀಕ್ಷಿಸುವುದು ಈ ಅಭಿಮಾನಿಗಳ ಕನಸಾಗಿತ್ತು. ತುಂಬಾ ವರ್ಷಗಳ ಆ ಕನಸನ್ನು ಈ ಬಾರಿ ಈಡೇರಿಸಿಕೊಂಡಿದ್ದಾರೆ. ವಿರಾಟ್ ಕೊಹ್ಲಿ ಅವರ ಕಾರಣಕ್ಕೆ ನೇಪಾಳದ ಈ ಅಭಿಮಾನಿಗಳು ಆರ್’ಸಿಬಿ ತಂಡವನ್ನು ಬೆಂಬಲಿಸುತ್ತಿದ್ದಾರೆ. ಭಾನುವಾರ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ತನ್ನ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್, 5 ಬಾರಿಯ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ 8 ವಿಕೆಟ್’ಗಳ ಭರ್ಜರಿ ಗೆಲುವು ದಾಖಲಿಸಿ ಶುಭಾರಂಭ ಮಾಡಿತ್ತು.

ಇದನ್ನೂ ಓದಿ : RCB vs KKR: RCB ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ: IPL 2023 ರಿಂದ ಪ್ರಮುಖ ಆಟಗಾರ ಔಟ್

ಇದನ್ನೂ ಓದಿ : Rajat Patidar : ಆರ್‌ಸಿಬಿಗೆ ಡಬಲ್ ಶಾಕ್, ಸ್ಟಾರ್ ಬ್ಯಾಟ್ಸ್‌ಮನ್ ಐಪಿಎಲ್ ಟೂರ್ನಿಯಿಂದಲೇ ಔಟ್

ಟೂರ್ನಿಯ ಮೊದಲ ಪಂದ್ಯದಲ್ಲೇ ಅಬ್ಬರಿಸಿದ್ದ ಕಿಂಗ್ ಖ್ಯಾತಿಯ ವಿರಾಟ್ ಕೊಹ್ಲಿ ಕೇವಲ 49 ಎಸೆತಗಳಲ್ಲಿ 6 ಬೌಂಡರಿ ಹಾಗೂ 5 ಸಿಕ್ಸರ್’ಗಳ ನೆರವಿನಿಂದ ಅಜೇಯ 82 ರನ್ ಸಿಡಿಸಿ ರಾಯಲ್ ಚಾಲೆಂಜರ್ಸ್’ಗೆ ಭರ್ಜರಿ ಗೆಲುವು ತಂದುಕೊಟ್ಟಿದ್ದರು. ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್ನರನ್ನು ಹೆಡೆಮುರಿ ಕಟ್ಟಿರುವ ರಾಯಲ್ ಚಾಲೆಂಜರ್ಸ್, ಗುರುವಾರ (ಏಪ್ರಿಲ್ 6) ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ 2 ಬಾರಿಯ ಚಾಂಪಿಯನ್ಸ್ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ.

Nepal to support RCB : Fans came to Bangalore from a distance of 2,376 km to support RCB.

Comments are closed.