Pak Vs Kiwis : ಸೆಮೀಸ್‌ನಲ್ಲಿ ಭಾರತಕ್ಕೆ ಇಂಗ್ಲೆಂಡ್ ಎದುರಾಳಿ, ಪಾಕ್ Vs ಕೀವಿಸ್ ಮಧ್ಯೆ ಮತ್ತೊಂದು ಸೆಮಿಫೈನಲ್

ಮೆಲ್ಬೋರ್ನ್: (Pak Vs Kiwis)ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ (T20 World Cup 2022) ಟೂರ್ನಿ ಅಂತಿಮ ಘಟ್ಟ ತಲುಪಿದ್ದು, ಸೆಮಿಪೈನಲ್’ನಲ್ಲಿ ಯಾರಿಗೆ ಯಾರು ಎದುರಾಳಿ ಎಂಬುದು ಫಿಕ್ಸ್ ಆಗಿದೆ.

ಗ್ರೂಪ್-2ರಲ್ಲಿ ಅಗ್ರಸ್ಥಾನಿಯಾಗಿ ಸೆಮಿಫೈನಲ್ ಪ್ರವೇಶಿಸಿರುವ ಭಾರತ ತಂಡ, ಸೆಮಿಫೈನಲ್’ನಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ (India Vs England Semifinal). ಭಾರತ Vs ಇಂಗ್ಲೆಂಡ್ ನಡುವಿನ ಸೆಮಿಫೈನಲ್ ಸಮರ ಗುರುವಾರ (ನವೆಂಬರ್ 10) ಅಡಿಲೇಡ್ ಓವಲ್ ಮೈದಾನದಲ್ಲಿ ನಡೆಯಲಿದೆ. ಮತ್ತೊಂದು ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ (New Zeeland Vs Pakistan Semifinal) ತಂಡಗಳು ಮುಖಾಮುಖಿಯಾಗಲಿದ್ದು, ಈ ಪಂದ್ಯ (Pak Vs Kiwis)ಬುಧವಾರ (ನವೆಂಬರ್ 9) ಸಿಡ್ನಿಯಲ್ಲಿ ನಡೆಯಲಿದೆ.

ಇದನ್ನೂ ಓದಿ : T20 World Cup 2022 : ಜಿಂಬಾಬ್ವೆ ವಿರುದ್ಧ ಭರ್ಜರಿ ಜಯ, ಗ್ರೂಪ್-2ನಿಂದ ಅಗ್ರಸ್ಥಾನಿಯಾಗಿ ಸೆಮಿಫೈನಲ್‌ಗೆ ಭಾರತ ಲಗ್ಗೆ

ಇದನ್ನೂ ಓದಿ : South Africa knocked out : ನೆದರ್ಲೆಂಡ್ಸ್ ವಿರುದ್ಥ ಸೋಲು, ಟಿ20 ವಿಶ್ವಕಪ್’ನಿಂದ ಚೋಕರ್ಸ್ ದಕ್ಷಿಣ ಆಫ್ರಿಕಾ ಔಟ್

ಸೂಪರ್-12 ಹಂತದ ತನ್ನ ಅಂತಿಮ ಲೀಗ್ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ 71 ರನ್’ಗಳ ಭರ್ಜರಿ ಗೆಲುವು ದಾಖಲಿಸಿದ ಟೀಮ್ ಇಂಡಿಯಾ, ಗ್ರೂಪ್-2ರಲ್ಲಿ ಅಗ್ರಸ್ಥಾನ ಅಲಂಕರಿಸಿತು. ಆಡಿದ 5 ಲೀಗ್ ಪಂದ್ಯಗಳಲ್ಲಿ 4 ಪಂದ್ಯಗಳನ್ನು ಗೆದ್ದ ಟೀಮ್ ಇಂಡಿಯಾ, ದಕ್ಷಿಣ ಆಫ್ರಿಕಾ ವಿರುದ್ಧ ಮಾತ್ರ ಸೋತಿತ್ತು. ಅಂತಿಮವಾಗಿ 8 ಅಂಕಗಳನ್ನು ಕಲೆ ಹಾಕಿದ ರೋಹಿತ್ ಶರ್ಮಾ ಬಳಗ, ಗ್ರೂಪ್’ನಿಂದ ಅಗ್ರಸ್ಥಾನಿಯಾಗಿ ಸೆಮಿಫೈನಲ್’ಗೆ ಲಗ್ಗೆಯಿಟ್ಟಿದೆ. ಭಾನುವಾರ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಸೋಲಿಸಿ ಸೆಮಿಫೈನಲ್ ತಲುಪಿರುವ ಪಾಕಿಸ್ತಾನ, ಆಡಿದ 5 ಪಂದ್ಯಗಳಿಂದ 3 ಗೆಲುವು, 2 ಸೋಲಿನೊಂದಿಗೆ 6 ಅಂಕ ಗಳಿಸಿ ಗ್ರೂಪ್-2ರಲ್ಲಿ 2ನೇ ಸ್ಥಾನ ಪಡೆಯಿತು.
ಮತ್ತೊಂದೆಡೆ ಗ್ರೂಪ್-1ರಿಂದ ಸೆಮಿಫೈನಲ್ ತಲುಪಿರುವ ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ ತಂಡಗಳು ಆಡಿದ ಐದು ಪಂದ್ಯಗಳಿಂದ ತಲಾ 7 ಅಂಕ ಗಳಿಸಿವೆ. ಆದರೆ ಉತ್ತಮ ರನ್’ರೇಟ್ ಆಧಾರದಲ್ಲಿ ನ್ಯೂಜಿಲೆಂಡ್ ಗ್ರೂಪ್-1ರಲ್ಲಿ ಅಗ್ರಸ್ಥಾನ ಪಡೆದಿದೆ.

ಟಿ20 ವಿಶ್ವಕಪ್ ಸೆಮಿಫೈನಲ್ ಲೈನಪ್

  1. ನ್ಯೂಜಿಲೆಂಡ್ Vs ಪಾಕಿಸ್ತಾನ
    ಸ್ಥಳ: ಸಿಡ್ನಿ ಕ್ರಿಕೆಟ್ ಗ್ರೌಂಡ್
    ಪಂದ್ಯ ಆರಂಭ: ಮಧ್ಯಾಹ್ನ 1.30ಕ್ಕೆ (ಭಾರತೀಯ ಕಾಲಮಾನ)
  2. ಭಾರತ Vs ಇಂಗ್ಲೆಂಡ್
    ಸ್ಥಳ: ಅಡಿಲೇಡ್ ಓವಲ್, ಅಡಿಲೇಡ್
    ಪಂದ್ಯ ಆರಂಭ: ಮಧ್ಯಾಹ್ನ 1.30ಕ್ಕೆ (ಭಾರತೀಯ ಕಾಲಮಾನ)

(Pak Vs Kiwis) The ICC T20 World Cup (T20 World Cup 2022) tournament in Australia has reached the final stage, and who will be the opponent in the semi-final is fixed.

Comments are closed.