India Vs Australia : ಭಾರತ Vs ಆಸ್ಟ್ರೇಲಿಯಾ ಕ್ರಿಕೆಟ್ ಬಾಂಧವ್ಯಕ್ಕೆ 75 ವರ್ಷ, ಐತಿಹಾಸಿಕ ಸಂಭ್ರಮಕ್ಕೆ ಸಾಕ್ಷಿಯಾದ ಪ್ರಧಾನಿ ಮೋದಿ

ಅಹ್ಮದಾಬಾದ್ : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್ ಬಾಂಧವ್ಯಕ್ಕೆ 75 ವರ್ಷ ತುಂಬಿದೆ. ಈ ಐತಿಹಾಸಿಕ ಕ್ಷಣಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಅಂಥೋನಿ ಅಲ್ಬನೀಸ್ (PM Narendra Modi – Anthony Albanese) ಸಾಕ್ಷಿಯಾಗಿದ್ದಾರೆ. ಅಹ್ಮದಾಬಾದ್’ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆರಂಭಗೊಂಡ ಭಾರತ ಮತ್ತು ಆಸ್ಟ್ರೇಲಿಯಾ (India Vs Australia) ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ (Border-Gavaskar test series) 4ನೇ ಪಂದ್ಯ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು.

ಕ್ರೀಡಾಂಗಣಕ್ಕೆ ಆಸ್ಟ್ರೇಲಿಯಾ ಪ್ರಧಾನಿ ಅಂಥೋನಿ ಅಲ್ಬನೀಸ್ ಜೊತೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ಎರಡೂ ತಂಡಗಳ ಆಟಗಾರರನ್ನು ಅಭಿನಂದಿಸಿದರು. 75 ವರ್ಷಗಳ ಸಂಭ್ರಮದ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ವಿಶೇಷ ಟೆಸ್ಟ್ ಕ್ಯಾಪ್ ನೀಡಿದರೆ, ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವನ್ ಸ್ಮಿತ್ ಅವರಿಗೆ ಆಸೀಸ್ ಪ್ರಧಾನಿ ಬ್ಯಾಗಿ ಗ್ರೀನ್ ಕ್ಯಾಪ್ ಹಸ್ತಾಂತರಿಸಿದರು. ನಂತರ ಆಸ್ಟ್ರೇಲಿಯಾ ಪ್ರಧಾನಿ ಜೊತೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತು ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವನ್ ಸ್ಮಿತ್ ಅವರ ಕೈಗಳನ್ನು ಮೇಲೆತ್ತುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಹರ್ಷ ವ್ಯಕ್ತಪಡಿಸಿದರು.

ಇದೇ ವೇಳೆ ಬಿಸಿಸಿಐ ವತಿಯಿಂದ ಭಾರತ ಮತ್ತು ಆಸ್ಟ್ರೇಲಿಯಾ ಪ್ರಧಾನಮಂತ್ರಿಗಳನ್ನು ಅಭಿನಂದಿಸಲಾಯಿತು. ಆಸ್ಟ್ರೇಲಿಯಾ ಪ್ರಧಾನಿಗೆ ಬಿಸಿಸಿಐ ಅಧ್ಯಕ್ಷ ರೋಜನ್ ಬಿನ್ನಿ ಸ್ಮರಣಿಕೆ ನೀಡಿದರೆ, ನರೇಂದ್ರ ಮೋದಿಯವರಿಗೆ ಬಿಸಿಸಿಐ ಕಾರ್ಯದರ್ಶಿಯೂ ಆಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜೈ ಶಾ ಸ್ಮರಣಿಕೆ ನೀಡಿದರು. ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಚಿತ್ರಗಳನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವಿಟರ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಭೋಜನ ವಿರಾಮದ ವೇಳೆಗೆ 2 ವಿಕೆಟ್ ಕಳೆದುಕೊಂಡು 75 ರನ್ ಗಳಿಸಿತ್ತು.

ಇದನ್ನೂ ಓದಿ : Team India Holi celebration: ಟೀಮ್ ಇಂಡಿಯಾ ಆಟಗಾರರು, ರಾಯಲ್ ಚಾಲೆಂಜರ್ಸ್ ವನಿತೆಯರ ಹೋಳಿ ಸಂಭ್ರಮ ನೋಡಿದಿರಾ?

ಇದನ್ನೂ ಓದಿ : Lucknow Super Giants new Jersey: ಲಕ್ನೋ ಸೂಪರ್ ಜೈಂಟ್ಸ್ ತಂಡದ ಹೊಸ ಜೆರ್ಸಿ ಅನಾವರಣ, ಹೇಗಿದೆ ಗೊತ್ತಾ ರಾಹುಲ್ ಪಡೆಯ ನ್ಯೂ ಜೆರ್ಸಿ?

ಇದನ್ನೂ ಓದಿ : ಮುಂಬೈನ ಗಲ್ಲಿಯಲ್ಲಿ ಮಕ್ಕಳೊಂದಿಗೆ ಟೆನಿಸ್ ಬಾಲ್ ಕ್ರಿಕೆಟ್ ಆಡಿ “ಸುಪ್ಲಾ ಶಾಟ್” ಬಾರಿಸಿದ ಸೂರ್ಯಕುಮಾರ್ ಯಾದವ್

Narendra Modi – Anthony Albanese : 75 years of India Vs Australia cricket relationship, Prime Minister Modi witnessed the historic celebration

Comments are closed.