ಬೆಂಗಳೂರು: ಕರ್ನಾಟಕದ ಯುವ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ (Prasidh Krishna) ಐಪಿಎಲ್ 2023 ಟೂರ್ನಿಯಿಂದ ಹೊರ ಬಿದ್ದಿದ್ದಾರೆ. ಬೆನ್ನು ನೋವಿನಿಂದ ಬಳಲುತ್ತಿದ್ದ ಪ್ರಸಿದ್ಧ್ ಕೃಷ್ಣ 3 ದಿನಗಳ ಹಿಂದೆ ನ್ಯೂಜಿಲೆಂಡ್’ನಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದು, ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಕನಿಷ್ಠ 6 ತಿಂಗಳು ಹಿಡಿಯಲಿದೆ.
ಕಳೆದ ವರ್ಷ ನಡೆದ ಐಪಿಎಲ್ ಹರಾಜಿನಲ್ಲಿ ಪ್ರಸಿದ್ಧ್ ಕೃಷ್ಣ (Prasidh Krishna) ಅವರನ್ನು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಬರೋಬ್ಬರಿ 10 ಕೋಟಿ ಮೊತ್ತಕ್ಕೆ ಖರೀದಿಸಿತ್ತು. 2022ರ ಐಪಿಎಲ್ ಟೂರ್ನಿಯಲ್ಲಿ ಆಡಿದ 17 ಪಂದ್ಯಗಳಿಂದ ಪ್ರಸಿದ್ಧ್ ಕಷ್ಣ 19 ವಿಕೆಟ್’ಗಳನ್ನು ಪಡೆದು ಮಿಂಚಿದ್ದರು.
ಕಳೆದ ವರ್ಷದ ಆಗಸ್ಟ್’ನಲ್ಲಿ ಜಿಂಬಾಬ್ವೆ ಪ್ರವಾಸ ಕೈಗೊಂಡಿದ್ದ ಭಾರತ ತಂಡದಲ್ಲಿ ಪ್ರಸಿದ್ಧ್ ಕೃಷ್ಣ ಸ್ಥಾನ ಪಡೆದಿದ್ದರು. ಆ ಸರಣಿಯ ನಂತರ 27 ವರ್ಷದ ಪ್ರಸಿದ್ಧ್ ಯಾವುದೇ ಸ್ಪರ್ಧಾತ್ಮಕ ಕ್ರಿಕೆಟ್ಆ ಡಿಲ್ಲ. ಇದೀಗ ಬೆನ್ನು ನೋವಿನ ಶಸ್ತ್ರಚಿಕಿತ್ಸೆಗೊಳಗಾಗಿರುವ ಕಾರಣ ಪ್ರಸಿದ್ಧ್ ಅವರ ಕ್ರಿಕೆಟ್ ಕಂಬ್ಯಾಕ್’ಗೆ ಇನ್ನಷ್ಟು ಸಮಯ ಹಿಡಿಯಲಿದೆ.
ಭಾನುವಾರವಷ್ಟೇ 28ನೈ ವರ್ಷಕ್ಕೆ ಕಾಲಿಟ್ಟಿರುವ ಪ್ರಸಿದ್ಧ್ ಕೃಷ್ಣ ಭಾರತ ಪರ ಇದುವರೆಗೆ 14 ಏಕದಿನ ಪಂದ್ಯಗಳನ್ನಾಡಿದ್ದು 25 ವಿಕೆಟ್’ಗಳನ್ನು ಪಡೆದಿದ್ದಾರೆ. ಐಪಿಎಲ್ 2023 ಟೂರ್ನಿಯಿಂದ ಪ್ರಸಿದ್ಧ್ ಕೃಷ್ಣ ಹೊರ ಬಿದ್ದಿರುವ ಕಾರಣ ರಾಜಸ್ಥಾನ್ ರಾಯಲ್ಸ್ ಬದಲಿ ವೇಗದ ಬೌಲರ್ ಹುಡುಕಾಟದಲ್ಲಿದೆ. ಪ್ರಸಿದ್ಧ್ ಸ್ಥಾನ ತುಂಬಲು ಕರ್ನಾಟಕದ ಮತ್ತೊಬ್ಬ ಯುವ ವೇಗದ ಬೌಲರ್ ವೈಶಾಖ್ ವಿಜಯ್ ಕುಮಾರ್ ರೇಸ್’ನಲ್ಲಿದ್ದಾರೆ.
ಇದನ್ನೂ ಓದಿ : India Beat Ireland : ಐಸಿಸಿ ಮಹಿಳಾ ಟಿ20 ವಿಶ್ವಕಪ್: ಸೆಮಿಫೈನಲ್’ಗೆ ಲಗ್ಗೆ ಇಟ್ಟ ಟೀಮ್ ಇಂಡಿಯಾ
ಬೆಂಗಳೂರು: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಎರಡು ಟೆಸ್ಟ್ ಪಂದ್ಯಗಳಿಗೆ ಟೀಮ್ ಇಂಡಿಯಾವನ್ನು ಪ್ರಕಚಿಸಲಾಗಿದ್ದು, ವೈಫಲ್ಯದ ನಡುವೆಯೂ ಕನ್ನಡಿಗ ಕೆ.ಎಲ್ ರಾಹುಲ್ ಅವರ ಮೇಲೆ ಟೀಮ್ ಮ್ಯಾನೇಜ್ಮೆಂಟ್ ನಂಬಿಕೆಯಿಟ್ಟಿದೆ. ಆಸೀಸ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳ 3 ಇನ್ನಿಂಗ್ಸ್’ಗಳಲ್ಲೂ ರಾಹುಲ್ ಎಡವಿದ್ದರು. 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 2-0 ಮುನ್ನಡೆಯಲ್ಲಿದ್ದು, 3ನೇ ಟೆಸ್ಟ್ ಪಂದ್ಯ ಮಾರ್ಚ್ 1ರಂದು ಇಂದೋರ್’ನಲ್ಲಿ ಆರಂಭವಾಗಲಿದೆ. 4ನೇ ಹಾಗೂ ಅಂತಿಮ ಟೆಸ್ಟ್ ಮಾರ್ಚ್ 13ರಂದು ಅಹ್ಮದಾಬಾದ್’ನಲ್ಲಿ ಆರಂಭವಾಗಲಿದೆ. ಮಾರ್ಚ್ 17ರಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಗೂ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಕೌಟುಂಬಿಕ ಕಾರಣಗಳ ಕಾರಣ ಮೊದಲ ಪಂದ್ಯಕ್ಕೆ ನಾಯಕ ರೋಹಿತ್ ಶರ್ಮಾ ಅಲಭ್ಯರಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ 3 ಹಾಗೂ 4ನೇ ಟೆಸ್ಟ್ ಪಂದ್ಯಗಳಿಗೆ ಟೀಮ್ ಇಂಡಿಯಾ:
ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಸ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶುಭಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಉಮೇಶ್ ಯಾದವ್, ಜೈದೇವ್ ಉನಾದ್ಕಟ್, ಕುಲ್ದೀಪ್ ಯಾದವ್.
ಆಸ್ಟ್ರೇಲಿಯಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಗೆ ಟೀಮ್ ಇಂಡಿಯಾ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಹಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಜೈದೇವ್ ಉನಾದ್ಕಟ್.